Kalasa Banduri Project: ಕಳಸಾ-ಬಂಡೂರಿ ಶೀಘ್ರ ಆರಂಭ: ಬೊಮ್ಮಾಯಿ ವಿಶ್ವಾಸ

ಕಳಸಾ-ಬಂಡೂರಿ ಯೋಜನೆಗೆ ಅರಣ್ಯ ಇಲಾಖೆಯ ಕ್ಲಿಯರೆನ್ಸ್‌ ಸಿಗಬೇಕಿದ್ದು, ಅದೀಗ ಅಂತಿಮ ಹಂತದಲ್ಲಿದೆ. ಯೋಜನೆ ಶೀಘ್ರ ಆರಂಭವಾಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

Kalasa Banduri Project will begin shortly says Chief Minister Basavaraj Bommai gvd

ಹುಬ್ಬಳ್ಳಿ (ಮಾ.7): ಕಳಸಾ-ಬಂಡೂರಿ ಯೋಜನೆಗೆ (Kalasa Banduri Project) ಅರಣ್ಯ ಇಲಾಖೆಯ ಕ್ಲಿಯರೆನ್ಸ್‌ ಸಿಗಬೇಕಿದ್ದು, ಅದೀಗ ಅಂತಿಮ ಹಂತದಲ್ಲಿದೆ. ಯೋಜನೆ ಶೀಘ್ರ ಆರಂಭವಾಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. ಕಳಸಾ-ಬಂಡೂರಿಯ ಅರಣ್ಯ ಇಲಾಖೆಯ (Forest Department) ಕ್ಲಿಯರೆನ್ಸ್‌ ಕುರಿತು ಈಗಾಗಲೇ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಮಾತನಾಡಿದ್ದೇನೆ.  ಅಧಿವೇಶನದ ಆನಂತರ ಮತ್ತೊಮ್ಮೆ ಸಚಿವರನ್ನು ಭೇಟಿಯಾಗಲಿದ್ದೇನೆ. ನಮ್ಮ ಪಾಲಿನ 13.5 ಟಿಎಂಸಿ ನೀರನ್ನು ಬಳಸಿಕೊಳ್ಳಲು ಯಾವುದೇ ಅಡ್ಡಿ ಇಲ್ಲ. 

ಒಟ್ಟಾರೆ ನೀರು ಹಂಚಿಕೆ ಬಗ್ಗೆ ಸುಪ್ರೀಂ ಕೋರ್ಟ್‌ನಿಂದ ತೀರ್ಪು ಬರಬೇಕಿದೆ. ತೀರ್ಪನ್ನು ಮೂರು ರಾಜ್ಯಗಳು ಒಪ್ಪಿಕೊಳ್ಳಬೇಕಾಗುತ್ತದೆ. ಹೀಗಾಗಿ ಯೋಜನೆ ಶೀಘ್ರ ಆರಂಭವಾಗುವ ವಿಶ್ವಾಸವಿದೆ. ಈ ಹಿನ್ನೆಲೆಯಲ್ಲಿ ಈ ಸಲ ಬಜೆಟ್‌ನಲ್ಲಿ . 1000 ಕೋಟಿ ಮೀಸಲಿಟ್ಟಿದ್ದೇನೆ ಎಂದರು. ಇದೇ ವೇಳೆ ರಾಜ್ಯದ ಕುಡಿಯುವ ನೀರು ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಬಗೆಯ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಮೇಕೆದಾಟು ಯೋಜನೆಗೆ ಕಾಂಗ್ರೆಸ್‌ ಪಾದಯಾತ್ರೆ ಒತ್ತಡಕ್ಕೆ ಮಣಿದು ಹಣ ಮೀಸಲಿಟ್ಟಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

Mahadayi ಕೇಸ್‌ ರೀ ಓಪನ್‌ ಇಲ್ಲ: ಸಿಎಂ ಬೊಮ್ಮಾಯಿ

ಕಳಸಾ-ಬಂಡೂರಿಗಾಗಿ ಸಿಎಂ ಭೇಟಿಯಾದ ರೈತರು: ಕಳಸಾ ಬಂಡೂರಿ ಹಾಗೂ ಮಹದಾಯಿ (Mahadayi) ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಪಕ್ಷಾತೀತ ರೈತ ಹೋರಾಟ ಸಮಿತಿಯ ರೈತರು ಮಂಗಳವಾರ ಬೆಂಗಳೂರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ(Basavaraj Bommai) ಮನವಿ ಸಲ್ಲಿಸಿದ್ದಾರೆ. 

ಜವಳಿ, ಕಬ್ಬು ಹಾಗೂ ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ರೈತ ಮುಖಂಡರು, ಮಹದಾಯಿ ನ್ಯಾಯಾಧಿಕರಣದ ತೀರ್ಪು ಬಂದು 3 ವರ್ಷಗಳು ಮುಗಿದಿವೆ. ಆದರೂ ಈವರೆಗೂ ಮಹದಾಯಿ ಕೆಲಸ ಶುರುವಾಗಿಲ್ಲ. ಕೂಡಲೇ ಅನುಷ್ಠಾನ ಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಮಹದಾಯಿ ಉತ್ತರ ಕರ್ನಾಟಕದ (North Karnataka) ಬಹುವರ್ಷಗಳ ಬೇಡಿಕೆ. ಕಳಸಾ- ಬಂಡೂರಿ( Kalasa Banduri) ಹೋರಾಟದಿಂದಲೇ ನಾವು ಕೂಡ ಅಧಿಕಾರಕ್ಕೆ ಬಂದಿದ್ದು, ಈ ಯೋಜನೆ ಅನುಷ್ಠಾನಕ್ಕೆ ಬದ್ಧವಾಗಿದ್ದೇವೆ. ಕೆಲ ತಾಂತ್ರಿಕ ತೊಂದರೆಗಳಿಂದಾಗಿ ವಿಳಂಬವಾಗಿದೆ. ಆದಷ್ಟು ಬೇಗನೆ ಯೋಜನೆ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂದರು.

Mekedatu Project: ಮೇಕೆದಾಟು, ಕಳಸಾ ಬಂಡೂರಿ ಜಲವಿವಾದಗಳ ಕುರಿತು ಇಂದು ಸಿಎಂ ಸಭೆ

ರೈತ ಮುಖಂಡ ಸುಭಾಸಚಂದ್ರಗೌಡ ಪಾಟೀಲ ಮಾತನಾಡಿ, ಕಳೆದ 2250 ದಿನಗಳಿಂದ ಮಹದಾಯಿಗಾಗಿ ಹೋರಾಟ ನಡೆದಿದೆ. ಕೇಂದ್ರ ಅಥವಾ ರಾಜ್ಯ ಸರಕಾರಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ರೈತರ ತಾಳ್ಮೆಯನ್ನು ಪರೀಕ್ಷಿಸದೇ ಕಾಲ ಮಿತಿಯೊಳಗೆ ಯೋಜನೆ ಅನುಷ್ಠಾನಗೊಳಿಸಬೇಕು. ಇಲ್ಲವಾದಲ್ಲಿ ರೈತ ಸಂಘಟನೆಗಳೆಲ್ಲ ಒಗ್ಗೂಡಿ ಮತ್ತೊಂದು ರೈತ ಬಂಡಾಯಕ್ಕೆ ಸಿದ್ಧತೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಹೋರಾಟ ಸಮಿತಿ ಅಧ್ಯಕ್ಷ ಸಿದ್ದಪ್ಪ ಮುಪ್ಪಯ್ಯನವರ, ಷಣ್ಮುಖ ಗುರಿಕಾರ, ಬಸಣ್ಣ ಬೆಳವಣಕಿ, ಅಡಿವೆಪ್ಪ ಮನಮಿ, ಸಿದ್ದಣ್ಣ ಕಿಟಗೇರಿ ಸೇರಿದಂತೆ ಹಲವಾರು ರೈತ ಮುಖಂಡರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios