ರಾಯಚೂರು: ಪಿಡಿಒಪರೀಕ್ಷೆಯಲ್ಲಿ ಅಕ್ರಮ ಆರೋಪ; ಕೆಪಿಎಸ್ಸಿ ವಿರುದ್ಡ ಪ್ರತಿಭಟನೆ ನಡೆಸಿದವರ ಮೇಲೆಯೇ ಕೇಸ್!

ಪಿಡಿಒ ಹುದ್ದೆ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ್ದಾರೆಂದು ಆರೋಪಿಸಿ  ಕೆಪಿಎಸ್‌ಸಿ ವಿರುದ್ಡ ಪ್ರತಿಭಟನೆ ನಡೆಸಿದ್ದ 12 ಜನ ಪಿಡಿಒ ಪರೀಕ್ಷಾರ್ಥಿಗಳ ವಿರುದ್ದ ಪರೀಕ್ಷಾ ಮೇಲ್ವಿಚಾರಕ ಬಸವರಾಜ ತಡಕಲ್ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

Kalyan Karnataka PDO Exam scam filed against 12 candidates who are protest against kpsc rav

ರಾಯಚೂರು (ನ.18): ಪಿಡಿಒ ಹುದ್ದೆ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ್ದಾರೆಂದು ಆರೋಪಿಸಿ  ಕೆಪಿಎಸ್‌ಸಿ ವಿರುದ್ಡ ಪ್ರತಿಭಟನೆ ನಡೆಸಿದ್ದ 12 ಜನ ಪಿಡಿಒ ಪರೀಕ್ಷಾರ್ಥಿಗಳ ವಿರುದ್ದ ಪರೀಕ್ಷಾ ಮೇಲ್ವಿಚಾರಕ ಬಸವರಾಜ ತಡಕಲ್ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

ಪ್ರಕರಣ ಸಂಬಂಧ ಪರೀಕ್ಷಾರ್ಥಿ ಕಾಶಿಪತಿ ಎಂಬಾತನನ್ನು ವಶಕ್ಕೆ ಪಡೆದು ಸ್ಟೇಷನ್ ಬೇಲ್ ಮೇಲೆ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಇನ್ನುಳಿದ ಬಾಬು, ಅಯ್ಯನಗೌಡ, ಅಮಿತ್, ವೆಂಕಟೇಶ್ ಸೇರಿ 12 ಜನ ಹಾಗೂ ಇತರರ ವಿರುದ್ದ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆ: ರಾಯಚೂರು: ಒಂದು ಕೋಣೆಗೆ 12 ಪ್ರಶ್ನೆ ಪತ್ರಿಕೆ, 24 ಅಭ್ಯರ್ಥಿಗಳು! ಪಿಡಿಒ ಪರೀಕ್ಷೆಯಲ್ಲಿ ಕೆಪಿಎಸ್ಸಿ ಮತ್ತೆ ಯಡವಟ್ಟು!

ದೂರಿನಲ್ಲೇನಿದೆ?

ಸಿಂಧನೂರು ಸರ್ಕಾರಿ ಪದವಿ ಕಾಲೇಜು ಪರೀಕ್ಷಾ ಕೇಂದ್ರ ಕೊಠಡಿ ಸಂಖ್ಯೆ 05 ರಲ್ಲಿ ಗೊಂದಲ ಸೃಷ್ಟಿಯಾಗಿ ಗಲಾಟೆ ನಡೆದಿತ್ತು. ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ತಪ್ಪು ಭಾವಿಸಿ ಅನಗತ್ಯ ಗೊಂದಲ ಸೃಷ್ಠಿಸಿದ್ದಾರೆ. ಪರೀಕ್ಷಾ ಸಂವೀಕ್ಷಕರೊಂದಿಗೆ ವಾಗ್ವಾದ ಮಾಡಿ, ಪರೀಕ್ಷಾ ನಿಯಮಗಳ ಉಲ್ಲಂಘಿಸಿ ಪರೀಕ್ಷೆ ಬರೆಯಲು ಕುಳಿತಿದ್ದ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿದ್ದಾರೆ.ಇತರೆ ಪರೀಕ್ಷಾರ್ಥಿಗಳು ಕೊಠಡಿಗಳಿಂದ ಹೊರ ಬರುವಂತೆ ಸೂಚನೆ ನೀಡಿದ್ದಲ್ಲದೆ, ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆಂದು ಆರೋಪಿಸಿ ದೂರು ನೀಡಲಾಗಿದೆ. ದೂರು ದಾಖಲು ಬಳಿಕ ಓರ್ವ ಪರೀಕ್ಷಾರ್ಥಿಯನ್ನ ವಶಕ್ಕೆ ಪಡೆದು ಸ್ಟೇಷನ್ ಬೇಲ್ ಮೇಲೆ ಬಿಟ್ಟಿರುವ ಪೊಲೀಸರು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಹುತೇಕ ಯಾದಗಿರಿ ಜಿಲ್ಲೆಯ ಪರೀಕ್ಷಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದೆ.

Latest Videos
Follow Us:
Download App:
  • android
  • ios