ಇತ್ತೀಚೆಗೆ ನಡೆದ ಬಾಲ್ಯ ವಿವಾಹದಲ್ಲಿ ಕಂಪ್ಲಿಯ ಶಾಸಕ ಜೆ.ಎನ್‌. ಗಣೇಶ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಭಾಗಿಯಾಗಿದ್ದಾರೆ.

ಕೊಪ್ಪಳ (ಏ.27): ಜಿಲ್ಲೆಯ ಕನಕಗಿರಿ ತಾಲೂಕಿನ ಸೀರವಾರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಬಾಲ್ಯ ವಿವಾಹದಲ್ಲಿ ಕಂಪ್ಲಿಯ ಶಾಸಕ ಜೆ.ಎನ್‌. ಗಣೇಶ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಭಾಗಿಯಾಗಿದ್ದು, ಈಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಲ್ಲದೆ ಸಿರವಾರ ಗ್ರಾಪಂ ಸದಸ್ಯೆಯೇ ತನ್ನ ಅಪ್ರಾಪ್ತ ಮಗಳ ಮದುವೆ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಕೆಲ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಹ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಬಾಲ್ಯ ವಿವಾಹ ಪ್ರಕರಣ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಬಾಲಕಿಯನ್ನು ರಕ್ಷಿಸಲಾಗಿದೆ.

ಅಕ್ಷಯ ತೃತೀಯದಲ್ಲಿ ಬಾಲ್ಯ ವಿವಾಹ ಹೆಚ್ಚು: ಬಾಲ್ಯ ವಿವಾಹವು ಅನಾದಿಕಾಲದಿಂದ ನಡೆದುಕೊಂಡು ಬಂದ ಅನಿಷ್ಟ ಪದ್ಧತಿಯಾಗಿದ್ದು ಇದು 21ನೇ ಶತಮಾನದಲ್ಲೂ ಆಚರಣೆಯಲ್ಲಿರುವುದು ಶೋಚನೀಯ ಸಂಗತಿ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎನ್. ಮುನಿನಾರಾಯಣಸ್ವಾಮಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಆಂಧ್ರದ ಗಡಿಭಾಗದ ಜಿಲ್ಲೆಯ ತಾಲ್ಲೂಕುಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗುತ್ತಿವೆ. ಏಪ್ರಿಲ್ 30 ರಂದು ಅಕ್ಷಯ ತೃತೀಯ ದಿನದಂದು ಬಾಲ್ಯ ವಿವಾಹ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚು ನಡೆಯುವ ಸಾಧ್ಯತೆ ಇದೆ. ಅಂದು ಎಲ್ಲ ಬಾಲ್ಯ ವಿವಾಹ ನಿಷೇದಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸೂಚಿಸಿದರು.

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ: ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದೊಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರೂ ಇಂತಹ ಮದುವೆಯನ್ನು ಬಾಲ್ಯ ವಿವಾಹ ಎಂದು ಪರಿಗಣಿಸಿ , ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ)ಅದಿನಿಯಮ 2016 ರ ಪ್ರಕಾರ ಈ ಮದುವೆಯನ್ನು ನಿಷೇಧಿಸಲಾಗಿದ್ದು, ಇದನ್ನು ಶಿಕ್ಷಾರ್ಹ ಅಫರಾಧ ಎಂದು ಪರಿಣಿಸಲಾಗುವುದು ಎಂದರು.

ಹೋರಾಟ ಮಾಡುವ ಬಿಜೆಪಿ ಕಿಟಕಿ ಸ್ವಚ್ಛವಾಗಿದೆಯೇ?: ಸುರ್ಜೆವಾಲ

ಭಾಲ್ಯ ವಿವಾಹ ಏರ್ಪಡಿಸುವ ಪೋಷಕರು ಅಥವಾ ಪಾಲಕರು,18 ವರ್ಷದೊಳಗಿನ ಹುಡುಗಿಯನ್ನು ಮದುವೆಯಾಗುವ ವಯಸ್ಕ ವ್ಯಕ್ತಿ ಮತ್ತು ಮದುವೆಯಲ್ಲಿ ಭಾಗವಹಿಸುವ ಎಲ್ಲಾ ರೀತಿಯಲ್ಲೂ ಸಹಕರಿಸಿದ ಕುಟುಂಬಸ್ಥರನ್ನು ಸಹ ತಪ್ಪಿತಸ್ಥರು ಎಂದು ಇವರುಗಳಿಗೆ ಬಾಲ್ಯ ವಿವಾಹ ನಿಷೇದ ಕಾಯ್ದೆ ಪ್ರಕಾರ 1 ವರ್ಷಕ್ಕೆ ಕಡಿಮೆಯಿಲ್ಲದೆ ಗರಿಷ್ಠ 2 ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ಅಥವಾ 1ಲಕ್ಷ ರೂಪಾಯಿಗಳವರೆಗೆ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಬಹುದಾಗಿರುತ್ತದೆ ಎಂದರು.