Language War: ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ: ನಿರಾಣಿ

*  ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ
*  ಹೊಸಬರಿಗೆ ಸ್ಥಾನ ಕೊಡುವುದರ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ
*  ಜಿಲ್ಲಾವಾರು ಹಾಗೂ ಜಾತಿವಾರು ಅಳೆದು ತೂಗಿ ಸಚಿವ ಸ್ಥಾನ ನೀಡ್ತಾರೆ 

Kannada is the Regional Language, Hindi is the National Language Says Murugesh Nirani grg

ಮೈಸೂರು(ಏ.29):  ಕನ್ನಡ(Kannada) ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ! ಹಿಂದಿ(Hindi) ಭಾಷೆಯೂ ನಮಗೆ ಬೇಕು. ಬೇರೆ ಭಾಷೆ ಕಲಿಯುವುದರಲ್ಲಿ ತಪ್ಪೇನಿಲ್ಲ ಎಂದು ಸಚಿವ ಮುರುಗೇಶ್‌ ನಿರಾಣಿ(Murugesh Nirani) ಹೇಳಿದರು. 

ಹಿಂದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿ(National Language) ಮಾಡಬೇಕು ಎಂಬುದು ಮೊದಲಿನಿಂದಲೂ ಇದೆ, ಹೆಚ್ಚು ಭಾಷೆ ಕಲಿಯುವುದರಿಂದ ನಾವು ಶ್ರೀಮಂತರಾಗುತ್ತೇವೆ. ನಾವು ಕನ್ನಡಿಗರು(Kannadigas), ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಆ ಬಳಿಕ ಬೇರೆ ಬೇರೆ ಭಾಷೆಗಳನ್ನು ಕಲಿಯಬೇಕು. ನಾನು ಗ್ರಾಮೀಣ ಪ್ರದೇಶದವನಾಗಿರೋದರಿಂದ ಕನ್ನಡವನ್ನು ಪ್ರೀತಿಸುತ್ತೇನೆ. ಇತರ ಭಾಷೆಗಳನ್ನೂ ಪ್ರೀತಿಸುತ್ತೇನೆ ಎಂದರು.

ಅಜಯ್‌ ದೇವಗನ್‌ ವಿವಾದ: ‘ಹಿಂದಿ ರಾಷ್ಟ್ರ ಭಾಷೆ’ ಅಲ್ಲ, ಕನ್ನಡಿಗರ ಗರ್ಜನೆ

ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ: 

ಸಚಿವ ಸಂಪುಟ ವಿಸ್ತರಣೆ(Cabinet Expansion) ಮುಖ್ಯಮಂತ್ರಿಗಳ ಪರಮಾಧಿಕಾರ. ರಾಜ್ಯ ಬಿಜೆಪಿ(BJP) ಅಧ್ಯಕ್ಷರು, ಕೇಂದ್ರದ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಈಗಾಗಲೇ ನಮಗೆ ಜವಾಬ್ದಾರಿ ನೀಡಿದ್ದು, ಅದರಲ್ಲಿ ಉತ್ತಮ ಸಾಧನೆ ಮಾಡುವುದು ನಮ್ಮ ಕೆಲಸ. ಸಂಪುಟ ವಿಸ್ತರಣೆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

ಹೊಸಬರಿಗೆ ಸ್ಥಾನ ಕೊಡುವುದರ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ. ಆಕಾಂಕ್ಷಿಗಳು ಹೆಚ್ಚಿರುವುದರಲ್ಲಿ ತಪ್ಪಿಲ್ಲ. ಜಿಲ್ಲಾವಾರು ಹಾಗೂ ಜಾತಿವಾರು ಅಳೆದು ತೂಗಿ ಸ್ಥಾನ ನೀಡುತ್ತಾರೆ. ಅದನ್ನು ನಡೆಸಿಕೊಂಡು ಹೋಗುವುದು ನಮ್ಮ ಜವಾಬ್ದಾರಿ ಎಂದರು.

ಮೇನಲ್ಲಿ ಕೈಗಾರಿಕಾ ಸಮಸ್ಯೆ ಕುರಿತು ಸಭೆ: 

ದಾಸರಹಳ್ಳಿ: ಸಣ್ಣ ಕೈಗಾರಿಕೆಗಳ ಸಮಸ್ಯೆಗಳ ಬಗ್ಗೆ ಕೇಳಿದರೆ ಕಣ್ಣಲ್ಲಿ ನೀರು ಬರುವ ಬದಲಿಗೆ ರಕ್ತ ಬರುತ್ತದೆ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ.

ಪೀಣ್ಯದಲ್ಲಿ ಬೆಂಗಳೂರು ಉತ್ತರ ವಲಯ ಲಘು ಉದ್ಯೋಗ ಭಾರತಿ ಆಯೋಜಿಸಿದ್ದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸ್ಥಿತಿಗತಿ ಕುರಿತು ಕೈಗಾರಿಕೋದ್ಯಮಿಗಳ ಜೊತೆಗಿನ ಸಂವಾದ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಸಂವಾದ ಕಾರ್ಯಕ್ರಮದಲ್ಲಿ ಲಘು ಉದ್ಯೋಗ ಭಾರತಿ, ಪೀಣ್ಯ ಕೈಗಾರಿಕಾ ಸಂಘದ ಪದಾಧಿಕಾರಿಗಳು, ಪೀಣ್ಯ ಸುತ್ತಮುತ್ತಲಿನ ರೆವಿನ್ಯೂ ಕೈಗಾರಿಕಾ ಪ್ರದೇಶಗಳ ಸಂಘಗಳ ಪದಾಧಿಕಾರಿಗಳು, ಕಾಸಿಯಾ ಮುಖಂಡರು ತಮ್ಮ ಕೈಗಾರಿಕಾ ಪ್ರದೇಶಗಳ ಮೂಲಭೂತ ಸೌಕರ್ಯಗಳ ಸಮಸ್ಯೆಗಳು ಹಾಗೂ ಕೊರೋನಾ ನಂತರ ಕೈಗಾರಿಗಳ ಸ್ಥಿತಿ ಗತಿಗಳ ಬಗ್ಗೆ ಎಳೆಎಳೆಯಾಗಿ ಸಚಿವರ ಮುಂದೆ ಬಿಚ್ಚಿಟ್ಟರು.

ಹಿಂದಿ ಭಾಷಾ ವಿಚಾರ, ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ದ್ವಂದ್ವ ಹೇಳಿಕೆ

ಸಮಸ್ಯೆಗಳನ್ನು ಆಲಿಸಿದ ನಂತರ ಮಾತನಾಡಿದ ಸಚಿವ ಮುರುಗೇಶ ನಿರಾಣಿ, ರಾಜ್ಯದ 188 ಕೈಗಾರಿಕಾ ಪ್ರದೇಶಗಳು ಹಾಗೂ ಕೈಗಾರಿಕೋದ್ಯಮಿಗಳ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮೇ 12ರ ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸಮಕ್ಷಮದಲ್ಲಿ ಕೈಗಾರಿಕಾ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಕೈಗಾರಿಕೋದ್ಯಮಿಗಳ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.

ದಾಸರಹಳ್ಳಿ ಶಾಸಕ ಆರ್‌.ಮಂಜುನಾಥ್‌, ಎಫ್‌ಕೆಸಿಸಿಐ ನಿರ್ದೇಶಕ, ಬಿಬಿಎಂಪಿ ಮಾಜಿ ಸದಸ್ಯ ಕೆ.ವಿ.ರಾಜೇಂದ್ರ ಕುಮಾರ್‌, ಲಘು ಉದ್ಯೋಗ ಭಾರತಿ ಅಧ್ಯಕ್ಷ ಕೆ.ಎಸ್‌..ಅಶ್ವತ್ಥ್ ನಾರಾಯಣ್‌, ಪ್ರಧಾನ ಕಾರ್ಯದರ್ಶಿ ಮಯಾಂಕ್‌ ಕೌಶಿಕ್‌, ಪೀಣ್ಯ ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಅಸ್ರಣ್ಣ, ಪ್ರಕಾಶ್‌, ಕ್ರಾಸ್ಟಾ, ದೊಡ್ಡಣ್ಣ, ಕೈಗಾರಿಕಾ ಪ್ರದೇಶ ಅಧ್ಯಕ್ಷ ರವಿರಾಜ ಶೆಟ್ಟಿ ಮೊದಲಾದವರು ಸಂವಾದದಲ್ಲಿ ಭಾಗವಹಿಸಿದ್ದರು.
 

Latest Videos
Follow Us:
Download App:
  • android
  • ios