Asianet Suvarna News Asianet Suvarna News

ರಾಜ್ಯದಲ್ಲಿ ವರ್ಷವಿಡೀ ಕನ್ನಡ ಜನೋತ್ಸವ ಸಂಭ್ರಮ: ಸಿದ್ದರಾಮಯ್ಯ

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. ಕರ್ನಾಟಕ ಸುವರ್ಣ ಸoಭ್ರಮ -50 ಸಮಾರೋಪ ಸಮಾರಂಭ ವಿಧಾನಸೌಧದ ಮುಂಭಾಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ

Kannada Janotsava is celebrated throughout the year in Karnataka Says CM Siddaramaiah grg
Author
First Published Sep 20, 2024, 10:09 AM IST | Last Updated Sep 20, 2024, 10:09 AM IST

ಬೆಂಗಳೂರು(ಸೆ.20):  ರಾಜ್ಯದಲ್ಲಿ ವರ್ಷವಿಡೀ ನಡೆದ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ - 2024 ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. ಕರ್ನಾಟಕ ಸುವರ್ಣ ಸoಭ್ರಮ -50 ಸಮಾರೋಪ ಸಮಾರಂಭ ವಿಧಾನಸೌಧದ ಮುಂಭಾಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.

ಸಿಎಂಗೆ ಮತ್ತೊಂದು ಗೌರ್ನರ್‌ ಕಂಟಕ: ಸಿಬಿಐ ತನಿಖೆಗೆ ಆಗ್ರಹಿಸಿ ಗೆಹಲೋತ್‌ಗೆ ದೂರು

ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನಡೆಯುತ್ತಿದ್ದು, ಹಂಪಿಯಿಂದ ಆರಂಭವಾದ ಕನ್ನಡ ರಥ ಯಾತ್ರೆ ಈಗಾಗಲೇ 28 ಜಿಲ್ಲೆಗಳಲ್ಲಿ ಸಾಗಿದ್ದು, ರಥಯಾತ್ರೆಯ ಸಮಾರೋಪ ಸಮಾರಂಭ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆಯಲಿದೆ. ಸುವರ್ಣ ಸಂಭ್ರಮದ ಸಮಾರೋಪ ಮತ್ತು ರಾಜ್ಯೋತ್ಸವದ ದಿನದಂದು ಮನೆ ಮನೆಯಲ್ಲಿ ಕನ್ನಡ ಬಾವುಟ ಹಾರಿಸಲು ಮನವಿ ಮಾಡಲಾಗುವುದು ಎಂದರು.

ರಾಜ್ಯದ ನಾಲ್ಕು ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಮೈಸೂರಿನಲ್ಲಿ ಚಿಂತನಾ ಸಮಾವೇಶ, ರಾಯಚೂರಿಗೆ ಗೋಕಾಕ್‌ ಚಳವಳಿ ಸಂಸ್ಮರಣೆ, ಮಹಾರಾಷ್ಟ್ರದ ಜತ್‌ ತಾಲೂಕಿನಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ ಮತ್ತು ಮಂಗಳೂರಿನಲ್ಲಿ ವಿವಿಧ ಅಕಾಡೆಮಿ ಸಹಯೋಗದಲ್ಲಿ ಬಹುಸಂಸ್ಕೃತಿ ಉತ್ಸವ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯೋತ್ಸವ ಪ್ರಶಸ್ತಿಗೆ ಸಮಿತಿ:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಸಮಿತಿ ರಚಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆ.30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಹಾಗೆಯೇ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ಅದ್ಧೂರಿಯಾಗಿ ಆಚರಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ರಾಜ್ಯೋತ್ಸವದ ದಿನವೇ ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಅನಾವರಣ ಮಾಡಬೇಕಿದೆ.ಕನ್ನಡದ ಸಾಹಿತಿಗಳ ನುಡಿಮುತ್ತುಗಳನ್ನು ಎಲ್ಲಾ ಜಿಲ್ಲೆಗಳ ಪ್ರಮುಖ ಸ್ಥಳಗಳಲ್ಲಿ, ಕೆಎಸ್‌ಆರ್‌ಟಿಸಿ ಬಸ್‌ ಮತ್ತಿತರ ಕಡೆಗಳಲ್ಲಿ ಪ್ರಚುರಪಡಿಸಬೇಕು ಎಂದು ಹೇಳಿದರು.

ಅರಸು, ವಿವಿಧ ಸಾಧಕರ ಪ್ರತಿಮೆ: 

ಮೈಸೂರಿನಲ್ಲಿ ದೇವರಾಜು ಅರಸು ಪ್ರತಿಮೆ, ಬಳ್ಳಾರಿಯಲ್ಲಿ ರಂಜಾನ್‌ಸಾಬ್‌ ಸ್ಮಾರಕ, ಗದಗದಲ್ಲಿ ಅಂದಾನಪ್ಪ ದೊಡ್ಡಮೇಟಿ ಸ್ಮಾರಕ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಧಾರವಾಡದಲ್ಲಿ ಅದರಗುಂಚಿ ಶಂಕರಗೌಡ ಸ್ಮಾರಕ ನಿರ್ಮಿಸಲು ಅಂದಾಜು ವೆಚ್ಚ ಸಲ್ಲಿಸಲಾಗಿದೆ ಎಂದು ಹೇಳಿದರು.

ನಾನು ನಾಯಕನಾಗಲು ಹೊರಟಿಲ್ಲ; ರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ಟಾಂಗ್

ಡಿಸೆಂಬರ್‌ನಲ್ಲಿ ಕೃತಿಗಳ ಬಿಡುಗಡೆ: 

ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 50 ಸಾಧಕ ಮಹಿಳೆಯರ ಕುರಿತು 100 ಪುಟಗಳ 50 ಕೃತಿಗಳು. ಕರ್ನಾಟಕದ ಬಹು ಸಂಸ್ಕೃತಿ, ಸೌಹಾರ್ದ ಸಂಸ್ಕೃತಿ, ಬಹುತ್ವದ ಕುರಿತು 100 ಪುಸ್ತಕಗಳು ಮುದ್ರಿಸಿ ಡಿಸೆಂಬರ್‌ನಲ್ಲಿ ಬಿಡುಗಡೆ ಮಾಡಲಾಗುವುದು. ನಾಡಿನ ಕಲೆ, ಸಾಹಿತ್ಯ, ಕೃಷಿ, ತೋಟಗಾರಿಕೆ, ಕೈಗಾರಿಕೆ ಕುರಿತಾದ 5 ಸಂಪುಟಗಳನ್ನು ಸಿದ್ಧಪಡಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಸ್ಮರಣ ಸಂಭ್ರಮ ಸಂಪುಟ ಹೊರತರಲಾಗುತ್ತಿದೆ ಎಂದರು.

ಸಭೆಯಲ್ಲಿ ಕನ್ನಡ ಮತ್ತು ಸoಸ್ಕೃತಿ ಇಲಾಖೆ ಸಚಿವ ಶಿವರಾಜ ತoಗಡಗಿ, ಗೃಹ ಸಚಿವ ಜಿ.ಪರಮೇಶ್ವರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios