Asianet Suvarna News Asianet Suvarna News

Temple Mobile Ban:ಕರ್ನಾಟಕದ ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆ ನಿಷೇಧ

ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲ ದೇವಾಲಯಗಳಲ್ಲಿ ಮೊಬೈಲ್‌ ಫೋನ್‌ಗಳ ಬಳಕೆಯನ್ನು ನಿಷೇಧಿಸಿ ಸರ್ಕಾರದ ಆದೇಶ ಹೊರಡಿಸಿದೆ.

Kannada News Mobile phones Ban in Muzrai temples of Karnataka sat
Author
First Published Jul 17, 2023, 6:23 PM IST

ಬೆಂಗಳೂರು (ಜು.17): ನಮ್ಮ ರಾಜ್ಯದಲ್ಲಿರುವ ಎಲ್ಲ ಮುಜರಾಯಿ ಇಲಾಖಾ ದೇವಸ್ಥಾನಗಳಲ್ಲಿ ಭಕ್ತಾದಿಗಳು ಇನ್ನುಮುಂದೆ ಮೊಬೈಲ್‌ಗಳನ್ನು ಬಳಕೆ ಮಾಡುವಂತಿಲ್ಲ. ದೇವಸ್ಥಾನ ಪ್ರವೇಶಕ್ಕೂ ಮುನ್ನವೇ ಮೊಬೈಲ್‌ಗಳನ್ನು ಸ್ವಿಚ್‌ ಆಫ್‌ ಮಾಡಬೇಕು. ದೇವಸ್ಥಾನದೊಳಗೆ ಮೊಬೈಲ್‌ನಲ್ಲಿ ಮಾತನಾಡುವುದು, ಹಾಡು ಕೇಳುವುದು ಹಾಗೂ ಫೋಟೋ ತೆಗೆಯುವ ಮತ್ತು ತರಹೇವಾರಿ ರೀಲ್ಸ್‌ ಮಾಡುವುದಕ್ಕೆ ಮೊಬೈಲ್‌ ಬಳಕೆ ನಿಷೇಧದ ಮೂಲಕ ನಿರ್ಬಂಧ ಹೇರಲಾಗಿದೆ.

ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ (Muzrai department Temples) ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ (Mobile Phone) ಬಳಕೆಗೆ ನಿಷೇಧ ಹೇರಲಾಗಿದೆ. ಈಗಾಗಲೇ ತಮಿಳುನಾಡಿನಲ್ಲಿ ಸರ್ಕಾರದ ವ್ಯಾಪ್ತಿಗೆ ಬರುವ ಎಲ್ಲ ದೇವಾಲಗಳಲ್ಲಿ ಮೊಬೈಲ್‌ ಫೋನ್‌ ಬಳಕೆಯನ್ನು ನಿಷೇಧ ಮಾಡಲಾಗಿತ್ತು. ಈತ್ತೀಚೆಗೆ ಕೇದಾರನಾಥ ದೇವಸ್ಥಾನದಲ್ಲಿಯೂ ಮೊಬೈಲ್‌ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರದಿಂದ ಸೋಮವಾರ ಎಲ್ಲ ಧಾರ್ಮಿಕ ದತ್ತಿ ಇಲಾಖೆಗೊಳಪಡುವ ದೇವಾಲಯಗಳಲ್ಲಿ ಮೊಬೈಲ್‌ ಫೋನ್‌ಗಳ ಬಳಕೆಯನ್ನು ನಿಷೇಧಿಸಿ ಆದೇಶವನ್ನು ಹೊರಡಿಸಿದೆ. 

ಭೀಮನ ಅಮವಾಸ್ಯೆ: ಪಾದಪೂಜೆ ಮಾಡದೇ ತವರಿನಲ್ಲಿದ್ದ ಪತ್ನಿಯನ್ನು ಕಿಡ್ನಾಪ್‌ ಮಾಡಿದ ಪತಿರಾಯ

ಸರ್ಕಾರದ ಆದೇಶದದಲ್ಲಿ ಏನಿದೆ? : ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗುತ್ತಿದೆ. ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್‌ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ ಎಂದು ಕಂದಾಯ ಇಲಾಖೆ (ಧಾರ್ಮಿಕ ದತ್ತಿ) ಅಧೀನ ಕಾರ್ಯದರ್ಶಿ ಕೆ.ಪಿ. ಹೇಮಂತರಾಜು ಆದೇಶ ಹೊರಡಿಸಿದ್ದಾರೆ. 

Bengaluru PES College: ಪರೀಕ್ಷೆಯಲ್ಲಿ ಕಾಪಿ ಮಾಡ್ತಿದ್ದ ವಿದ್ಯಾರ್ಥಿಗೆ ಅವಮಾನ: 14ನೇ ಮಹಡಿಯಿಂದ ಬಿದ್ದು ಸಾವು

ದೇವಾಲಯಗಳ ಮುಂದೆ ಸೂಚನಾ ಫಲಕ: ಇನ್ನು ದೇವಾಲಯಗಳಲ್ಲಿ ಕಡ್ಡಾಯವಾಗಿ ಮೊಬೈಲ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತಿದೆ ಎಂಬ ಬಗ್ಗೆ ಸೂಚನಾ ಫಲಕಗಳನ್ನು ಅಳವಡಿಕೆ ಮಾಡಬೇಕು. ಈ ಮೂಲಕ ದೇವಾಲಯಗಳಿಗೆ ಬರುವ ಭಕ್ತಾದಿಗಳು ದೇವಾಲಯದ ಒಳಗೆ ನೆಮ್ಮದಿಯಿಂದ ದೇವರ ದರ್ಶನ ಮಾಡಿಕೊಂಡು ಹೋಗಲು ಅವಕಾಶ ನೀಡುವ ಬಗ್ಗೆ ತಿಳಿಸಬೇಕು ಎಂದು ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ. ಈವರೆಗೆ ರಾಜ್ಯದ ಕೆಲವು ದೇವಸ್ಥಾನಗಳ ಒಳಗಡೆ ಮಾತ್ರ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿತ್ತು. ಆದರೆ, ಈಗ ಧಾರ್ಮಿಕ ಮತ್ತು ದತ್ತಿ ಇಲಾಖೆಯೇ ಅಧಿಕೃತವಾಗಿ ಮೊಬೈಲ್‌ ಫೋನ್‌ ಬಳಕೆಗೆ ನಿಷೇಧ ಹೇರಿ ಆದೇಶ ಹೊರಡಿಸಿದೆ.

Follow Us:
Download App:
  • android
  • ios