ಸಿದ್ಧರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲಿಯೇ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ಮಾಡಲಾಗಿದೆ. ಬೆಂಗಳೂರು ಪೊಲೀಸ್‌ ನೂತನ ಆಯುಕ್ತರನ್ನಾಗಿ ಬಿ. ದಯಾನಂದ್‌ ಅವರನ್ನು ನೇಮಕ ಮಾಡಲಾಗಿದೆ

ಬೆಂಗಳೂರು (ಮೇ. 30): ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲಿಯೇ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ಮಾಡಲಾಗಿದೆ. ಬೆಂಗಳೂರಿನ ನೂತನ ಪೊಲೀಸ್‌ ಆಯುಕ್ತರನ್ನಾಗಿ ಬಿ.ದಯಾನಂದ್‌ ಅವರನ್ನು ನೇಮಕ ಮಾಡಲಾಗಿದೆ. ಇಲ್ಲಿವರೆಗೂ ಬೆಂಗಳೂರು ಪೊಲೀಸ್‌ ಆಯುಕ್ತರಾಗಿದ್ದ ಸಿಎಚ್‌ ಪ್ರತಾಪ್‌ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಟ್ರಾಫಿಕ್‌ನ ವಿಶೇಷ ಆಯುಕ್ತ ಹಾಗೂ ಎಡಿಜಿಪಿ ಎಂಎ ಸಲೀಂ ಅವರನ್ನು ಸಿಐಡಿ ವಿಭಾಗದ ಡಿಜಿಪಿ ಆಗಿ ನೇಮಿಸಲಾಗಿದೆ. ಇಲ್ಲಿಯವರೆಗೂ ಈ ಹುದ್ದೆಯಲ್ಲಿದ್ದ ಕೆವಿ ಶರತ್‌ ಚಂದ್ರ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.ಒಟ್ಟಾರೆ ನಾಲ್ವರು ಪ್ರಮುಖ ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಕಮೀಷನರ್‌ ಆಗಿಅದ್ದ ಸಿಎಚ್‌ ಪ್ರತಾಪ್‌ ರೆಡ್ಡಿ ಅವರ ಬದಲು ದಯಾಂದ್‌ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಪ್ರತಾಪ್‌ ರೆಡ್ಡಿ ಅವರನ್ನು ತಕ್ಷಣದಿಂದಲೇ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ನೇಮಿಸಲಾಗಿದೆ.