ಬೆಳಗಾವಿಯಲ್ಲಿ ಅದ್ಧೂರಿ ರಾಜ್ಯೋತ್ಸವಕ್ಕೆ ಸಿದ್ಧತೆ ; 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ: ಡಿಸಿ ನಿತೇಶ್ ಪಾಟೀಲ

ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಬೆಳಗಾವಿ ನಗರದಲ್ಲಿ ನಡೆಯುವ ರಾಜ್ಯೋತ್ಸವ ಸಂಭ್ರಮದಲ್ಲಿ ಅಂದಾಜು 3 ರಿಂದ 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. ಈ ಬಾರಿ ಕೂಡ‌ ಕರಾಳ ದಿನಾಚರಣೆಗೆ ಯಾವುದೇ ರೀತಿಯ ಅನುಮತಿ ನೀಡಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

Kannada Rajyotsava Belgavi DC Nitesh Patil press conference today rav

ಬೆಳಗಾವಿ (ಅ.31): ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಬೆಳಗಾವಿ ನಗರದಲ್ಲಿ ನಡೆಯುವ ರಾಜ್ಯೋತ್ಸವ ಸಂಭ್ರಮದಲ್ಲಿ ಅಂದಾಜು 3 ರಿಂದ 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. ಈ ಬಾರಿ ಕೂಡ‌ ಕರಾಳ ದಿನಾಚರಣೆಗೆ ಯಾವುದೇ ರೀತಿಯ ಅನುಮತಿ ನೀಡಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ರಾಜ್ಯೋತ್ಸವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ಈ ವಿಷಯ ತಿಳಿಸಿದರು.

ನ.1ರಿಂದ 1 ವರ್ಷ ‘ಕರ್ನಾಟಕ ಹಬ್ಬ’: ಸಚಿವ ಶಿವರಾಜ ತಂಗಡಗಿ

ಪ್ರತಿವರ್ಷದಂತೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಬೆಳಗಾವಿ ಗಡಿ ಪ್ರವೇಶಿಸದಂತೆ 3 ಮಹಾ ಸಚಿವರು, ಒಬ್ಬ ಸಂಸದರಿಗೆ ನಿರ್ಬಂಧ

ಈ ಬಾರಿಯ ರಾಜ್ಯೋತ್ಸವದಲ್ಲಿ ಜಿಲ್ಲಾಡಳಿತದ ವತಿಯಿಂದ ಕನ್ನಡಪರ ಹೋರಾಟಗಾರರು ಹಾಗೂ ಮಾಧ್ಯಮ ಪ್ರತಿನಿಧಿಗಳು ಸೇರಿ ಒಟ್ಟಾರೆ 25 ಜನರನ್ನು ಗೌರವಿಸಿ ಸನ್ಮಾನಿಸಲಾಗುವುದು  ರಾಜ್ಯೋತ್ಸವ ಮೆರವಣಿಗೆಯಲ್ಲಿ 75 ಸ್ತಬ್ಧಚಿತ್ರಗಳು ಭಾಗವಹಿಸಲಿವೆ. ಈ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎಂದರು.

Latest Videos
Follow Us:
Download App:
  • android
  • ios