ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್‌ ಆದೇಶವನ್ನು ಧಿಕ್ಕರಿಸಿ ಮಾಡುತ್ತಿರುವ ಹೋರಾಟಕ್ಕೆ ಕಸಾಪ ಅಧ್ಯಕ್ಷ ಮಹೇಶ್‌ಜೋಷಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಂಡ್ಯ (ಸೆ.22): ರಾಜ್ಯದಾದ್ಯಂತ ಕಾವೇರಿ ಹೋರಾಟದ ಕುರಿತಾಗಿ ಹೋರಾಟ ನಡೆಯುತ್ತಿವೆ. ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ನೀರಿನ ಹೋರಾಟದಲ್ಲಿ ಸೋಲುಂಟಾದ ಬೆನ್ನಲ್ಲಿಯೇ ಮಂಡ್ಯದ ಕೆಆರ್‌ಎಸ್‌ ಜಲಾಶಯದಿಂದ ಮುಂದಿನ 15 ದಿನಗಳ ಕಾಲ ತಲಾ 5,000 ಕ್ಯೂಸೆಕ್ಸ್‌ ನೀರು ಹರಿಸುವಂತೆ ಆದೇಶ ಹೊರಡಿಸಿದೆ. ಆದರೆ, ನಮ್ಮ ರಾಜ್ಯದಲ್ಲಿ ಕುಡಿಯಲೂ ನೀರಿಲ್ಲದಿರುವಾಗ ತಮಿಳುನಾಡಿಗೆ ಕೃಷಿ ಬೆಳಗಾಗಿ ನೀರು ಹರಿಸುತ್ತಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ಹೋರಾಟಗಾರರಿಗೆ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಬೆಂಬಲ ನೀಡಲಾಗಿದೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಅವರು, ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಸಮರ್ಥಾಗಿ ವಾದ ಮಂಡಿಸಿಲ್ಲ. ಸುಪ್ರೀಂ ಕೋರ್ಟ್‌ ಆದೇಶ ಕರ್ನಾಟಕದ ಪಾಲಿಗೆ ಬರದ ಶಾಸನವಾಗಿದೆ. ಕಾವೇರಿ ವಿಚಾರದಲ್ಲಿ ಕಾನೂನಿನಿಂದ ನ್ಯಾಯ ಸಿಗೋದಿಲ್ಲ. ತಮಿಳುನಾಡು ಕರ್ನಾಟಕಕ್ಕೆ ಸಹೋದರತ್ವದ ಸಂಬಂಧ‌‌ ಇದೆ. ಮಾತುಕತೆ ಮೂಲಕ ರಾಜ್ಯ ಸರ್ಕಾರ ವಿವಾದ ಬಗೆ ಹರಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ವರನಟ ರಾಜ್‌ಕುಮಾರ್‌ ಬಳಿಕ ಕಾವೇರಿ ಹೋರಾಟಕ್ಕಿಳಿದ ದೊಡ್ಡಮನೆ ಕುಡಿ: ಪ್ರಾಣಾನೇ ಮುಡಿಪಾಗಿಡೋದಾಗಿ ಪ್ರಮಾಣ

ಇನ್ನು ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸಂವಿಧಾನಬದ್ಧ ಅಧಿಕಾರವನ್ನು ಬಳಸಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ಹಾಗೂ ತಮಿಳುನಾಡಿನ ವಿವಾದದ ಬಗ್ಗೆ ಮಧ್ಯಸ್ಥಿಕೆ ವಹಿಸಬೇಕು. ಎರಡು ರಾಜ್ಯಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು. ಈ ಬಗ್ಗೆ ನಮ್ಮ ರಾಜ್ಯದಿಂದ ಆಯ್ಕೆಯಾದ ಕೇಂದ್ರ ಸಚಿವರು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಆಗ್ರಹ ಎಂದು ಆಗ್ರಹಿಸಿದರು. ಇನ್ನು ಕಾವೇರಿ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್ ಸಾಥ್ ನೀಡುತ್ತಿದೆ. ರೈತರ ಹೋರಾಟದಲ್ಲಿ ಭಾಗಿಯಾಗಿ ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರೋಧ ವ್ಯಕ್ತಪಡಿಸಲಾಗುತ್ತಿದೆ ಎಂದು ಹೇಳಿದರು.

ಕಾವೇರಿ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್ ಬೆಂಬಲ ನೀಡಿದ ಬೆನ್ನಲ್ಲೇ ರೈತ ಹಿತ ರಕ್ಷಣಾ ಸಮಿತಿ ಹೋರಾಟದಲ್ಲಿ ಭಾಗಿಯಾದ ಕಸಾಪ ಅಧ್ಯಕ್ಷ ಮಹೇಶ್ ಜೋಶಿ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಹೇಶ್‌ ಜೋಶಿ ಕುಳಿತು ಹೋರಾಟ ಆರಂಭಿಸಿದ್ದಾರೆ. ಈ ವೇಳೆ ಸುಪ್ರೀಂ ಕೋರ್ಟ್ ಆದೇಶಕ್ಕೆ ಕಸಾಪ ಖಂಡನೆ ವ್ಯಕ್ತಪಡಿಸಿದೆ. ಕಸಾಪ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಸಾಥ್ ನೀಡಿವೆ.

ಕರ್ನಾಟಕಕ್ಕೆ ಮತ್ತೆ ಶಾಕ್‌ ಕೊಟ್ಟ ಸುಪ್ರೀಂ ಕೋರ್ಟ್‌! ಪ್ರತಿದಿನ 5000 ಕ್ಯೂಸೆಕ್ಸ್‌ ಕಾವೇರಿ ನೀರು ಬಿಡಲು ಆದೇಶ

ಟಿ.ಕೆ. ಹಳ್ಳಿ ಸಂಸ್ಕರಣಾ ಘಟಕ ಒಡೆಯುವ ಎಚ್ಚರಿಕೆ: ಕಾವೇರಿ ಹೋರಾಟಕ್ಕಿಳಿದ ಕನ್ನಡಪರ ಸಂಘಟನೆಗಳು ಕಾವೇರಿ ನೀರು ಸಂಸ್ಕರಣಾ ಘಟಕ ಒಡೆದು ಹಾಕುವ ಎಚ್ಚರಿಕೆ ನೀಡಿದ್ದಾರೆ. ಆದ್ದರಿಂದ ಕಾವೇರಿ ಪರ ದನಿ ಎತ್ತದ ಬೆಂಗಳೂರಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡಪರ ಸಂಘಟನೆಗಳು ಬೆಂಗಳೂರಿಗೆ ನೀರು ನಿಲ್ಲಿಸಲು ಆಗ್ರಹಿಸಿದ್ದಾರೆ. ಜೊತೆಗೆ, ಬೆಂಗಳೂರಿಗೆ ನೀರು ಸರಬರಾಜು ಮಾಡುವ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ.ಕೆ.ಹಳ್ಳಿ ಸಂಸ್ಕರಣಾ ಘಟಕ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನಾಕಾರರನ್ನು ಗೇಟ್ ಬಳಿ ಪೊಲೀಸರು ತಡೆದಿದ್ದಾರೆ. ಟಿ.ಕೆ. ಹಳ್ಳಿ ನೀರು ಸಂಸ್ಕರಣಾ ಘಟಕದ ಒಳಗೆ ಪ್ರತಿಭಟನಾಕಾರರು ನುಗ್ಗದಂತೆ ಬಂದೋಬಸ್ತ್ ಮಾಡಲಾಗಿದೆ.