Asianet Suvarna News Asianet Suvarna News

Russia-Ukraine War: ಉಕ್ರೇನ್‌ನಲ್ಲಿ ಕನ್ನಡಿಗರು ಸಿಲುಕಿದ್ದರೆ ಈ ಸಂಖ್ಯೆಗೆ ಕರೆ ಮಾಡಿ

*   ಸಹಾಯವಾಣಿ ಸಂಖ್ಯೆ - 080-1070, 080-22340676
*   ಕನ್ನಡಿಗರ ರಕ್ಷಣೆಗೆ ನಿಂತ ರಾಜ್ಯ ಸರ್ಕಾರ
*   ಡಾ.ಮನೋಜ್‌ ರಾಜನ್‌ ನೊಡೆಲ್‌ ಅಧಿಕಾರಿಯಾಗಿ ನಿಯೋಜನೆ

Kannadigas Can Call to This Helpline Number Who Stuck in Ukraine grg
Author
Bengaluru, First Published Feb 25, 2022, 9:59 AM IST | Last Updated Feb 25, 2022, 10:06 AM IST

ಬೆಂಗಳೂರು(ಫೆ.25):  ಉಕ್ರೇನ್‌(Ukraine) ಮತ್ತು ರಷ್ಯಾ(Russia) ನಡುವಿನ ಯುದ್ಧದಿಂದಾಗಿ(War) ಉಕ್ರೇನ್‌ ರಾಷ್ಟ್ರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ(Government of Karnataka) ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರ ಆಯುಕ್ತ ಡಾ.ಮನೋಜ್‌ ರಾಜನ್‌ ಅವರನ್ನು ನೊಡೆಲ್‌ ಅಧಿಕಾರಿಯನ್ನಾಗಿ ನಿಯೋಜನೆ ಮಾಡಿದೆ.

ಉಕ್ರೇನ್‌ನ ಕೀವ್‌ನಲ್ಲಿನ ಭಾರತದ ರಾಯಭಾರಿ ಕಚೇರಿಯೊಂದಿಗೆ(Embassy of India) ಡಾ.ಮನೋಜ್‌ ರಾಜನ್‌(Dr Manoj Rajan) ಅವರು ಸಮನ್ವಯ ಸಾಧಿಸಲಿದ್ದಾರೆ. ಅಲ್ಲಿನ ಕನ್ನಡಿಗರ(Kannadigas) ಕುಂದುಕೊರತೆಯನ್ನು ಆಲಿಸುವುದರ ಜತೆಗೆ ರಕ್ಷಣೆಯ ಕಾರ್ಯವನ್ನು ಮಾಡಲಿದ್ದಾರೆ. ದೆಹಲಿಯಲ್ಲಿನ ಉಕ್ರೇನ್‌ ರಾಯಭಾರಿ ಕಚೇರಿಯು 24 ತಾಸುಗಳ ಕಾಲ ಸಹಾಯವಾಣಿ(Helpline) ತೆಗೆದಿದೆ. ಅಂತೆಯೇ ರಾಜ್ಯದಲ್ಲಿಯೂ(Karnataka) 24/7 ಸಹಾಯವಾಣಿ ಆರಂಭಿಸಿದೆ. ಇದರ ಜವಾಬ್ದಾರಿಯನ್ನು ಮನೋಜ್‌ ರಾಜನ್‌ ಅವರು ನಿರ್ವಹಿಸಲಿದ್ದಾರೆ.

Russia-Ukraine Crisis: ಬ್ಲಾಸ್ಟ್‌ ಆಗ್ತಿದೆ, ನಮ್ಮನ್ನು ಕರ್ಕೊಂಡು ಹೋಗಿ: ಉಕ್ರೇನ್‌ನಲ್ಲಿ ಕನ್ನಡಿಗರ ಆಕ್ರಂದನ

ಸಹಾಯವಾಣಿ: 

ಉಕ್ರೇನ್‌ ರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗ ವಿದ್ಯಾರ್ಥಿಗಳು(Students) ಮತ್ತು ನಾಗರಿಕರ ಪೋಷಕರು ಸಹಾಯವಾಣಿಯನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ. ಸಹಾಯವಾಣಿ ಸಂಖ್ಯೆ - 080-1070, 080-22340676, ಇ-ಮೇಲ್‌- manoarya@gmail.com, revenuedmkar@gmail.com ಗೆ ಸಂಪರ್ಕಿಸಬಹುದು.

ಉಕ್ರೇನ್‌ನಲ್ಲಿ ಸಿಲುಕಿದ ಕನ್ನಡಿಗರು: ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ: ಬೊಮ್ಮಾಯಿ

ಬೆಂಗಳೂರು:  ಉಕ್ರೇನ್‌(Ukraine) ವಿರುದ್ಧ ರಷ್ಯಾ(Russia) ಯುದ್ಧ ಸಾರಿರುವ ಹಿನ್ನೆಲೆಯಲ್ಲಿ ಉಕ್ರೇನ್‌ನಲ್ಲಿರುವ ರಾಜ್ಯದ(Karnataka) ವಿದ್ಯಾರ್ಥಿಗಳನ್ನು ಕರೆತರಲು ಕೆಲಸ ಮಾಡುತ್ತಿದ್ದೇವೆ. ಅಲ್ಲಿನ ರಾಯಭಾರಿ ಕಚೇರಿ ಜತೆ ನಿರಂತರ ಸಂಪರ್ಕದಲ್ಲಿದ್ದು, ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್‌ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿರುವ ನೂರಾರು ವಿದ್ಯಾರ್ಥಿಗಳಿದ್ದಾರೆ(Students). ಈ ವಿಚಾರ ಗಮನಕ್ಕೆ ಬಂದ ತಕ್ಷಣ ಕೇಂದ್ರ ಸರ್ಕಾರ, ವಿದೇಶಾಂಗ ಕಾರ್ಯದರ್ಶಿ ಹಾಗೂ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಜತೆ ಸಂಪರ್ಕ ಸಾಧಿಸಿದ್ದೇವೆ. ವಿದೇಶಾಂಗ ಸಚಿವರೊಂದಿಗೆ ಮಾತನಾಡಲೂ ಸಹ ಪ್ರಯತ್ನಿಸಲಾಗುತ್ತಿದೆ ಎಂದರು.

‘ಕೇಂದ್ರ ಸರ್ಕಾರ(Central Government) ನೀಡಿದ ಮಾಹಿತಿಯಂತೆ ಉಕ್ರೇನ್‌ನಲ್ಲಿರುವ ಭಾರತೀಯರು(Indians) ತಂಡಗಳಾಗಿ ದೇಶಕ್ಕೆ ಮರಳುತ್ತಿದ್ದಾರೆ. ಕೊನೆಯ ತಂಡವು ವಿಮಾನ ನಿಲ್ದಾಣ ತಲುಪಿದ್ದು, ವಿಮಾನಗಳ ಸಂಚಾರ ಸ್ಥಗಿತವಾಗಿ ಪ್ರಯಾಣ ಸಾಧ್ಯವಾಗಿಲ್ಲ. ರಾಜ್ಯದ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯರ ಜೊತೆಗೆ ಭಾರತದಲ್ಲಿರುವ ಉಕ್ರೇನ್‌ ರಾಯಭಾರಿ ಕಚೇರಿ ಹಾಗೂ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳ ಸಂಪರ್ಕದಲ್ಲಿದ್ದಾರೆ. ರಾಜ್ಯ ಸರ್ಕಾರವು ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೀಲಿಸಿ ಸಂಪರ್ಕದಲ್ಲಿದೆ. ರಾಜ್ಯದ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Russia Ukraine Crisis: ವೈದ್ಯಕೀಯ ಶಿಕ್ಷಣಕ್ಕೆ ರಷ್ಯಾ, ಉಕ್ರೇನ್‌ ತೆರಳುವುದೇಕೆ?

ಕನ್ನಡಿಗರ ಕರೆತರುವ ಪ್ರಯತ್ನ ನಡೆದಿದೆ

ಉಕ್ರೇನ್‌ನಲ್ಲಿ ರಾಜ್ಯದ ಎಷ್ಟು ಮಂದಿ ಇದ್ದಾರೆ ಎಂಬುದರ ಕುರಿತು ಸದ್ಯಕ್ಕೆ ನಿಖರವಾದ ಮಾಹಿತಿ ಲಭ್ಯವಿಲ್ಲ. ಕೇಂದ್ರ ಸರ್ಕಾರದ ಬಳಿ ಎಲ್ಲ ಮಾಹಿತಿ ಇದೆ. ಯಾವುದೇ ತೊಂದರೆಯಾಗದಂತೆ ವಿದ್ಯಾರ್ಥಿಗಳೂ ಸೇರಿದಂತೆ ರಾಜ್ಯದವರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನ ನಡೆದಿದೆ. ಈ ನಿಟ್ಟಿನಲ್ಲಿ ಕೇಂದ್ರದ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ತಿಳಿಸಿದ್ದಾರೆ. 

ಹಿಂಸಾಚಾರವನ್ನು ತಕ್ಷಣವೇ ಕೊನೆ ಮಾಡಿ, ಪುಟಿನ್ ಗೆ ಮೋದಿ ಮನವಿ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Mod) ಅವರು ಗುರುವಾರ  ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. ಈ ವೇಳೆ ರಷ್ಯಾ ಅಧ್ಯಕ್ಷ  ಪುಟಿನ್ ಅವರು ಉಕ್ರೇನ್‌ಗೆ (Ukraine) ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿವರಣೆ ನೀಡಿದರು. ರಷ್ಯಾ ಮತ್ತು ನ್ಯಾಟೋ (NATO) ಗುಂಪಿನ ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಾಮಾಣಿಕ ಮತ್ತು ನಂಬಿಕಸ್ತ ಸಂವಾದದ ಮೂಲಕ ಮಾತ್ರ ಪರಿಹರಿಸಬಹುದು ಎಂಬ ತಮ್ಮ ದೀರ್ಘಕಾಲದ ನಂಬಿಕೆಯನ್ನು ಪ್ರಧಾನಿ ಪುನರುಚ್ಚರಿಸಿದರು.
 

Latest Videos
Follow Us:
Download App:
  • android
  • ios