ಕೇಂದ್ರ ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಎಲೆಕ್ಟ್ರಾನಿಕ್ಸ್ ಮತ್ತು ಟೆಕ್ನಾಲಜಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ವಿಜಯ್ ದಿವಸ್ ಅಂಗವಾಗಿ ಶನಿವಾರ(ಡಿ.16) ಮಧ್ಯಾಹ್ನ 12.45ಕ್ಕೆ ನಗರದ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಿದ್ದಾರೆ. ಪಾಕಿಸ್ತಾನದ ಸೇನೆಯನ್ನು ಸೋಲಿಸಿ ಬಾಂಗ್ಲಾದೇಶವನ್ನು ವಿಮೋಚನೆಗೊಳಿಸಿದ ಸ್ಮರಣಾರ್ಥ ಪ್ರತಿ ವರ್ಷ ಡಿ.16ರಂದು ವಿಜಯ್ ದಿವಸ್ ಆಚರಿಸಲಾಗುತ್ತದೆ.

ಬೆಂಗಳೂರು (ಡಿ.16) :  ಕೇಂದ್ರ ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಎಲೆಕ್ಟ್ರಾನಿಕ್ಸ್ ಮತ್ತು ಟೆಕ್ನಾಲಜಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ವಿಜಯ್ ದಿವಸ್ ಅಂಗವಾಗಿ ಶನಿವಾರ(ಡಿ.16) ಮಧ್ಯಾಹ್ನ 12.45ಕ್ಕೆ ನಗರದ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಿದ್ದಾರೆ. ಪಾಕಿಸ್ತಾನದ ಸೇನೆಯನ್ನು ಸೋಲಿಸಿ ಬಾಂಗ್ಲಾದೇಶವನ್ನು ವಿಮೋಚನೆಗೊಳಿಸಿದ ಸ್ಮರಣಾರ್ಥ ಪ್ರತಿ ವರ್ಷ ಡಿ.16ರಂದು ವಿಜಯ್ ದಿವಸ್ ಆಚರಿಸಲಾಗುತ್ತದೆ.

ಗ್ಲೋಬಲ್ ಕಾನ್‌ಕ್ಲೇವ್‌ನಲ್ಲಿ ಭಾಗಿ: ಮಧ್ಯಾಹ್ನ 1.15ಕ್ಕೆ ನಗರದ ಖಾಸಗಿ ಹೊಟೇಲ್‌ನಲ್ಲಿ ಮನಿ ಕಂಟ್ರೋಲ್ ಆಯೋಜಿಸಿರುವ ಕೃತಕ ಬುದ್ಧಿಮತ್ತೆ ಕುರಿತಾದ ಗ್ಲೋಬಲ್ ಕಾನ್‌ಕ್ವೇಲ್‌ನಲ್ಲಿ ಸಚಿವರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಹೊಸಕೋಟೆಯ ನಿಲವಾಗಿಲುನಲ್ಲಿ ಆಯೋಜಿಸಲಾಗಿರುವ ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಸಚಿವ ರಾಜೀವ್ ಚಂದ್ರಶೇಖರ್ ಅವರು ಪಾಲ್ಗೊಳ್ಳಲಿದ್ದಾರೆ.

ಬೆರಳುಗಳು ಇಲ್ಲದೇ ಇದ್ರೂ ಆಧಾರ್‌ ಸಾಧ್ಯ, ಇದೆ ಸರ್ಕಾರದ ನೋಟಿಫಿಕೇಶನ್: ರಾಜೀವ್‌ ಚಂದ್ರಶೇಖರ್‌!