ರಾಜ್ಯದ ಈ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದ್ದು, ಭಾರೀ ಚರ್ಚೆಗೂ ಗ್ರಾಸವಾಗಿದೆ. ಲೋಕಸಭಾ ಚುನಾವಣೆ ಇನ್ನು 6 ತಿಂಗಳು ಇರುವಾಗ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೊಷಣೆ ಮಾಡಲಾಗಿದೆ. 

ಬೆಂಗಳೂರು: 2019 ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಇನ್ನು ಗರಿಷ್ಠ 6 ತಿಂಗಳಷ್ಟೇ ಇರುವಾಗ ಕರ್ನಾಟಕದ 3 ಲೋಕಸಭಾ ಸ್ಥಾನಗಳಿಗೆ ಉಪ ಚುನಾವಣೆ ಪ್ರಕಟವಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ಬಹಿರಂಗ ವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಲೋಕಸಭೆಯ ಆಯುಸ್ಸೇ ಕೇವಲ 6 ತಿಂಗಳಿರುವಾಗ ಉಪಚುನಾವಣೆ ನಡೆಸುವ ಔಚಿತ್ಯವೇನಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಮುಖ್ಯಮಂತ್ರಿ ಡಾ|ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ. 

ಇದೇ ವೇಳೆ, ಬಿಜೆಪಿ ಹಾಗೂ ಕಾಂಗ್ರೆಸ್-ಜೆಡಿಎಸ್ ದೋಸ್ತಿಗಳಿಗೆ ಈ ಉಪಚುನಾವಣೆಯು ಸಾರ್ವತ್ರಿಕ ಚುನಾವಣೆಗೆ ತಮ್ಮ ತಂತ್ರಗಾರಿಕೆಯ ‘ಟೆಸ್ಟ್ ರನ್’ ಮಾಡಲು ಅನುಕೂಲವಾಗಬಹುದು ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.