ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಸಂಘರ್ಷ ತಡೆಯಲು ಕೋಮುವಾದಿ ನಿಗ್ರಹ ದಳ ರಚನೆಯಾಗಲಿದೆ. ಪ್ರಚೋದನಕಾರಿ ಭಾಷಣ, ಕೋಮು ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ದಳಕ್ಕೆ ಸಂಪೂರ್ಣ ಅಧಿಕಾರ ನೀಡಲಾಗುವುದು. ಕಾರ್ಕಳದ ನಕ್ಸಲ್ ನಿಗ್ರಹ ಪಡೆಯನ್ನು ರದ್ದುಗೊಳಿಸಿ, ಅದರ ಅಧಿಕಾರಿಗಳನ್ನೇ ಈ ದಳಕ್ಕೆ ನಿಯೋಜಿಸಲಾಗುವುದು. ಜಿಲ್ಲೆಗಳಲ್ಲಿ ಶಾಂತಿ ನೆಲೆಸುವುದು ಸರ್ಕಾರದ ಆದ್ಯತೆ.

ಬೆಂಗಳೂರು (ಮೇ 03): ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಸಂಘರ್ಷವನ್ನು ತಪ್ಪಿಸಲು ಒಂದು ಆಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಅನ್ನು ರಚಿಸಲಾಗುವುದು. ಇದು ಯಾರು ಕಮ್ಯೂನಲ್ ಚಟುವಟಿಕೆಗಳನ್ನು ಮಾಡುತ್ತಾರೋ, ಅವರಿಗೆ ಸಪೋರ್ಟ್ ಮಾಡುತ್ತಾರೋ ಹಾಗೂ ಪ್ರಚೋದನಕಾರಿ ಭಾಷಣ ಮಾಡುತ್ತಾರೋ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಕ್ಕೆ ಈ ಪಡೆಯ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನಡಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದರು.

ಯಾರು ಕಮ್ಯೂನಲ್ ಆಕ್ಟಿವಿಟಿ ಮಾಡುತ್ತಾರೋ, ಅವರಿಗೆ ಸಪೋರ್ಟ್ ಮಾಡುತ್ತಾರೋ ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಕ್ಕೆ ಈ ಪಡೆಗೆ ಅಧಿಕಾರವನ್ನು ಕೊಡಲಾಗುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಶಾಂತಿಯನ್ನು ಕಾಪಾಡುವ ಉದ್ದೇಶದಿಂದ ಈ ಕಾರ್ಯಪಡೆಯನ್ನು ರಚಿಸಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ರಾಜ್ಯದಲ್ಲಿ ಯಾರು ಪ್ರಚೋದನೆ ಭಾಷಣಗಳನ್ನು ಮಾಡುತ್ತಾರೋ ಅಂಥವರ ಮೇಲೆ ಕಾನೂನು ಪ್ರಕಾರನ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಕ್ಕೆ ಸೂಚನೆ ನೀಡಲಾಗಿದೆ ಎಂದರು.

ಕಾರ್ಕಳದಲ್ಲಿ ಈಗಾಗಲೇ ಇರುವ ಆಂಟಿ ನಕ್ಸಲ್ ಕಾರ್ಯಪಡೆಯ ಮಾದರಿಯಲ್ಲಿಯೇ ಇದೀಗ ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಂಟಿ ಟಾಸ್ಕ್‌ ಫೋರ್ಸ್ ಆಗಿ ಮಾಡಲಾಗುವುದು. ಇದೀಗ ರಾಜ್ಯದಲ್ಲಿ ಎಲ್ಲ ನಕ್ಸಲ್ ಚಟುವಟಿಕೆ ಸಂಪೂರ್ಣವಾಗಿ ನಾಶವಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಕಳ ಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಕ್ಸಲ್ ನಿಗ್ರಹ ಪಡೆಯನ್ನು ರದ್ದುಗೊಳಿಸಿ, ಅದರಲ್ಲಿರುವ ಅಧಿಕಾರಿಗಳನ್ನೇ ಕೋಮುವಾದಿ ನಿಗ್ರಹ ದಳವನ್ನಾಗಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಒಂದು ಕಾಲದಲ್ಲಿ ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಶಾಂತಿ ನೆಲೆಸಿದ ಸ್ಥಳ ಎಂದು ಇಲ್ಲಿಗೆ ಹುಡುಕಿಕೊಂಡು ಬರುತ್ತಿದ್ದರು. ಅದೇ ರೀತಿ ಇನ್ನುಮುಂದಿನ ದಿನಗಳಲ್ಲಿಯೂ ದಕ್ಷಿಣ ಕನ್ನಡವನ್ನು ಶಾಂತಿಯುತ ಜಿಲ್ಲೆಯನ್ನಾಗಿ ಕಾಪಾಡುವುದಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದರು.

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಬೆನ್ನಲ್ಲೇ ರಾಜ್ಯಾದ್ಯಂತ ಅಲರ್ಟ್ ಆಗಿದೆ. ಆಯಾ ವಿಭಾಗದ ಎಲ್ಲಾ ಐಜಿಪಿಗಳಿಂದ‌ ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ. ಹೀಗೆ ಎಲ್ಲಾ ಐಜಿಪಿಗಳಿಂದ ತಮ್ಮ ವ್ಯಾಪ್ತಿಯ ಜಿಲ್ಲಾ ಎಸ್ ಪಿಗಳಿಗೆ ಖುದ್ದು ಕಟ್ಟೆಚರ ನೀಡುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಸೂಚನೆ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ವ್ಯಾಪ್ತಿಯಲ್ಲಿ ಇನ್ಸ್ ಪೆಕ್ಟರ್ ಮತ್ತು ಡಿವೈಎಸ್ ಪಿಗಳ ಅಲರ್ಟ್ ಕಡ್ಡಾಯವಾಗಿರಲೂ ಸೂಚಿಸಲಾಗಿದೆ.

ಇದರಲ್ಲಿ ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ ಜಿಲ್ಲೆಗಳನ್ನು ಅತಿ ಸೂಕ್ಷ್ಮ ಪ್ರದೇಶಗಳೆಂದು ಪರಿಗಣಿಸಲಾಗಿದೆ. ಜೊತೆಗೆ ಶಿವಮೊಗ್ಗ, ಬಾಗಲಕೋಟೆ, ವಿಜಯಪುರ, ಬೆಂಗಳೂರು, ತುಮಕೂರು, ಕೋಲಾರ ಜಿಲ್ಲೆಗಳಲ್ಲಿಯೂ ಈ ಹಿಂದೆ ಕೋಮು ಗಲಭೆಗಳು ನಡೆಯುವ ಸಾಧ್ಯತೆಗಳೂ ಇರುವ ಹಿನ್ನೆಲೆಯಲ್ಲಿ ಇವುಗಳನ್ನು ಸೂಕ್ಷ ಪ್ರದೇಶಗಳೆಂದು ಪರಿಗಣಿಸಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಇನ್ನು ಪ್ರತಿಭಟನೆಗಳು, ರ್ಯಾಲಿಗಳು ಅಥವಾ ಜನಜಂಗುಳಿ ಸೇರಿದ ಸಂದರ್ಭದಲ್ಲಿ ಪೊಲೀಸರು ಕಡ್ಡಾಯವಾಗಿ ಎಲ್ಲರ ಮೇಲೂ ನಿಗಾವಹಿಸುವಂತೆ ಸೂಚಿಸಲಾಗಿದೆ.

ಆಯಾ ಜಿಲ್ಲೆಗಳಲ್ಲಿರುವ ಪರಿಸ್ಥಿತಿಗಳನ್ನ ನೋಡಿಕೊಂಡು ಅನುಮತಿ ಕೊಡುವ ವಿಚಾರವನ್ನು ಕಡ್ಡಾಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಸೋಷಿಯಲ್ ಮೀಡಿಯಾಗಳ ಬಗ್ಹೆ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಸ್ಪೆಷಲ್ ಸೈಬರ್ ಟೀಂ ನಿಗಾವಹಿಸಬೇಕು. ಪ್ರಚೋದನಕಾರಿ ಬರಹ, ಪ್ರಚೋದನೆ ಕೊಡುವ ರೀತಿಯಲ್ಲಿ ಮಾತನಾಡುವ ಬಗ್ಗೆ ಮಾಹಿತಿ ಕಲೆಹಾಕಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಬೀಟ್ ವ್ಯವಸ್ಥೆ ಮಾಡಿಕೊಂಡು ಗಸ್ತು ತಿರುಗಬೇಕು. ರಾತ್ರಿ ಪಾಳಿಯಲ್ಲಿ ಗಸ್ತು ಹೆಚ್ಚಳಕ್ಕೆ ಹಿರಿಯ ಅಧಿಕಾರಿಗಳು ಸೂಚಿಸಬೇಕು. ಬೆಂಗಳೂರಿನಲ್ಲಿ 8 ವಿಭಾಗದ‌ ಎಲ್ಲಾ ಸೂಕ್ಣ್ಮ ಪ್ರದೇಶದಲ್ಲಿ ಪೊಲೀಸರು ಬಂದೋಬಸ್ತ್ ಕೈಗೊಳ್ಳಬೇಕು. ಮುಖ್ಯವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಪ್ರತಿಭಟನೆ ರ್ಯಾಲಿಗೆ ಅವಕಾಶ ಕೊಡದಂತೆ ಸೂಚನೆ ನೀಡಲಾಗಿದೆ.