ವಿಧಾನಸಭಾ ಉಪ ಸಭಾಪತಿ ರುದ್ರಪ್ಪ ಲಮಾಣಿ ಕಾರಿನಿಂದ ಇಳಿಯುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗಳಾಗಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿತ್ರದುರ್ಗ (ಮಾ14): ಕರ್ನಾಟಕ ವಿಧಾನಸಭಾ ಉಪ ಸಭಾಪತಿ ರುದ್ರಪ್ಪ ಲಮಾಣಿ ಅಧಿವೇಶನ ಮುಗಿಸಿ ಸ್ವಗ್ರಾಮದತ್ತ ಕಾರಿನಲ್ಲಿ ಹೋಗುವಾಗ, ಮೂತ್ರ ವಿಸರ್ಜನೆಗೆಂದು ಕಾರಿನಿಂದ ಇಳಿಯುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಆಕ್ಸಿಡೆಂಟ್ ಮಾಡಿದ್ದು ಗಂಭೀರ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಪ ಸಭಾಪತಿ ಶ್ರೀ ರುದ್ರಪ್ಪ ಲಮಾಣಿ ರವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಶಾಸಕರು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಜೆಜಿ ಹಳ್ಳಿ ಸಮೀಪ ಶುಕ್ರವಾರ ಸಂಜೆ ನಡೆದಿದೆ. ಶಾಸಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ರಾತ್ರಿ ವೇಳೆ ಸಂಭವಿಸಿದೆ. ಬೆಂಗಳೂರಿನಲ್ಲಿ ಅಧಿವೇಶನದ ಕಲಾಪವನ್ನು ಮುಗಿಸಿ ಹಾವೇರಿ ಜಿಲ್ಲೆಯ ಸ್ವಗ್ರಾಮಕ್ಕೆ ಹೋಗುವಾಗ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಬಳಿ ಕಾರಿಂದ ಕೆಳಗಿಳಿದು ಮೂತ್ರವಿಸರ್ಜನೆ ಮಾಡುತ್ತಿದ್ದ ರುದ್ರಪ್ಪ ಲಮಾಣಿ ಅವರಿಗೆ ಬೈಕ್ನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ನೆಲಕ್ಕೆ ಬಿದ್ದ ರುದ್ರಪ್ಪ ಲಮಾಣಿ ಅವರ ಹಣೆ, ಹಲ್ಲು ಮತ್ತು ಬಲ ಮೊಣಕಾಲಿಗೆ ಗಾಯವಾಗಿದೆ. ತಕ್ಷಣ ಹಿರಿಯೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ದಾವಣಗೆರೆ ದೊಡ್ಡ ಆಸ್ಪತ್ರೆಗೆ ತೆರಳಿದ್ದಾರೆ.
ಇದನ್ನೂ ಓದಿ: ಖಾಕಿ ಡ್ರೆಸ್‌ನಲ್ಲಿ ಸ್ವಾಮೀಜಿ ಕಾಲಿಗೆ ಬಿದ್ದ 6 ಪೊಲೀಸರು ಟ್ರಾನ್ಸ್‌ಫರ್! ಆ ಸ್ವಾಮೀಜಿ ಯಾರು ಗೊತ್ತಾ?
ಕಬಡ್ಡಿ ಆಡಲು ಹೋಗಿ ಮುಗ್ಗರಿಸಿ ಬಿದ್ದಿದ್ದ ರುದ್ರಪ್ಪ: ಇತ್ತೀಚೆಗೆ ಹಾವೇರಿ ಜಿಲ್ಲೆಯಲ್ಲಿ ಆಯೋಜನೆ ಮಾಡಲಾಗಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ತಾವು ಕೂಡ ರೈಡ್ ಮಾಡಲು ಹೋಗಿದ್ದು, ಬರಿಗಾಲಿನಲ್ಲಿ ಕಬಡ್ಡಿ ಮ್ಯಾಟ್‌ಮೇಲೆ ನಿಯಂತ್ರಣ ಸಾಧಿಸಿ ನಿಲ್ಲಲು ಸಾಧ್ಯವಾಗದೇ ಮುಗ್ಗರಿಸಿ ಬಿದ್ದಿದ್ದರು. ಈ ವೇಳೆ ಮ್ಯಾಟ್ ಹಾಕಿದ್ದರಿಂದ ಅವರಿಗೆ ಯಾವುದೇ ಗಾಯಗಳಾಗಿರಲಿಲ್ಲ. ಈ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲಿಯೇ ಇದೀಗ ಅವರು ಕಾರಿನಲ್ಲಿ ಊರಿಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.
