ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಮೇ.10ರಂದು ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ‍್ಯ ಮೇ.13 ರಂದು ದೇವನಹಳ್ಳಿಯ ಪ್ರಸನ್ನಹಳ್ಳಿಯಲ್ಲಿರುವ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ನಡೆಯಲಿದ್ದು, ಮತ ಎಣಿಕೆ ಕಾರ್ಯಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.d
ದೊಡ್ಡಬಳ್ಳಾಪುರ(ಮೇ.12) : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಮೇ.10ರಂದು ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ‍್ಯ ಮೇ.13 ರಂದು ದೇವನಹಳ್ಳಿಯ ಪ್ರಸನ್ನಹಳ್ಳಿಯಲ್ಲಿರುವ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ನಡೆಯಲಿದ್ದು, ಮತ ಎಣಿಕೆ ಕಾರ್ಯಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ಮತದಾನ ನಡೆದ 1137 ಮತಗಟ್ಟೆಗಳ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್‌್ತ ನಲ್ಲಿ ಇರಿಸಲಾಗಿದೆ ಎಂದು ಅವರು ವಿವರಿಸಿದರು.
Karnataka assembly election: ಘಟಾನುಘಟಿ ರಾಜಕಾರಣಿಗಳನ್ನು ಕೊಟ್ಟ ದೊಡ್ಡಬಳ್ಳಾಪುರ
ಎಣಿಕೆ ಬೆಳಗ್ಗೆ 8ಕ್ಕೆ ಆರಂಭ:
ಮತ ಎಣಿಕೆ ಕಾರ್ಯವನ್ನು ಶನಿವಾರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭಿಸಲಾಗುವುದು ಹಾಗೂ ನಾಲ್ಕು ಕೊಠಡಿಯಲ್ಲಿ ನಡೆಸಲಾಗುವುದು. ಮತ ಎಣಿಕೆ ಕಾರ್ಯಗಳು 21 ಹಾಗೂ 20 ಸುತ್ತುಗಳು ನಡೆಯಲಿವೆ. ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕಾಗಿ 14 ಟೇಬಲ್ ಗಳನ್ನು ನಿಗದಿಪಡಿಸಲಾಗಿದ್ದು, ಪ್ರತಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ನ್ನು ನೇಮಕ ಮಾಡಲಾಗಿದೆ ಎಂದರು.
ಅಂಚೆ ಮತ ಎಣಿಕೆಗೆ ಪ್ರತ್ಯೇಕ ಟೇಬಲ್:
ಅಂಚೆ ಮತ ಎಣಿಕೆ ಕಾರ್ಯಕ್ಕಾಗಿ 1 ಪ್ರತ್ಯೇಕ ಟೇಬಲ್ ನ್ನು ನಿಗದಿಪಡಿಸಲಾಗಿದ್ದು, ಸದರಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್‌ಅನ್ನು ನೇಮಕ ಮಾಡಲಾಗಿದೆ.
130 ಸೇವಾ ಮತದಾರರಿಗೆ ಅಂಚೆ ಮತ ಪತ್ರವನ್ನ ಇಟಿಪಿಬಿಎಸ್ ತಂತ್ರಾಂಶ ಮುಖಾಂತರ ರವಾನಿಸಲಾಗಿದ್ದು, ಸದರಿ ಮತಪತ್ರಗಳ ಎಣಿಕೆ ಕಾರ್ಯವನ್ನು ಮೊದಲು ಕೈಗೊಳ್ಳಲಾಗುವುದು. 74 ಸಾಮಾನ್ಯ ಮತದಾರರಿಗೆ (ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿಗೆ) ಅಂಚೆ ಮತ ಪತ್ರವನ್ನು ವಿತರಿಸಲಾಗಿದ್ದು, ಈವರೆಗೆ 74 ಅಂಚೆ ಮತ ಪತ್ರಗಳು ಸ್ವೀಕೃತವಾಗಿವೆ ಎಂದರು.
56 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ:
ಇವಿಎಂ ಮತ ಎಣಿಕೆ ಮುಗಿದ ನಂತರ 5 ಮತಗಟ್ಟೆಗಳ ವಿವಿಪ್ಯಾಟ್ ಯಂತ್ರದಲ್ಲಿರುವ ಸ್ಲಿಪ್‌ಗಳ ಎಣಿಕೆ ಕಾರ್ಯವನ್ನು ನಡೆಸಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 56 ಅಭ್ಯರ್ಥಿಗಳಿದ್ದು ಮತ ಎಣಿಕೆ ಕಾರ್ಯ ನಡೆಯಲಿದೆ. ಮತ ಎಣಿಕೆ ಕೇಂದ್ರದಲ್ಲಿ ಚುನಾವಣಾ ವೀಕ್ಷಕರು, ಮಾಧ್ಯಮ ಪ್ರತಿನಿಧಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಮತ ಎಣಿಕೆ ಕಾರ್ಯವು ಎಂಕೋರ್ ತಂತ್ರಾಂಶ ಮುಖಾಂತರ ನಡೆಯಲಿದ್ದು, ಮತ ಎಣಿಕೆ ಕೇಂದ್ರದಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳ ಏರ್ಪಾಟು ಮಾಡಲಾಗಿದೆ ಎಂದು ವಿವರಿಸಿದರು.
ನಮ್ದೇ ಸರ್ಕಾರ, ನಾನೇ ಸಿಎಂ, ಮೈತ್ರಿಗೆ 9 ಕಂಡೀಷನ್ ಹಾಕಿದ ಹೆಚ್‌ಡಿಕೆ!
ವ್ಯಾಪಕ ಬಂದೋಬಸ್‌್ತ
ಮತ ಎಣಿಕೆ ಕಾರ್ಯ ಶಾಂತಿಯುತವಾಗಿ ನಡೆಯಲು ಮತ ಎಣಿಕೆ ಕೇಂದ್ರದ ಸುತ್ತ ಹಾಗೂ ಮತ ಎಣಿಕೆ ಕೇಂದ್ರದ ಒಳಗೆ 2 ಎಸಿಪಿ, 9 ಇನ್ಸೆ$್ಪಕ್ಟರ್ 29 ಜನ ಪಿಎಸ್‌ಐ ಹಾಗೂ 250 ಪೊಲೀಸ್ ಸಿಬ್ಬಂದಿಗಳನ್ನು ಹಾಗೂ 3 ಕೆಎಸ್ ಆರ್ ಪಿ ತುಕಡಿ ಮತ್ತು 2 ಕಂಪನಿ ಬಿಎಸ್‌ಎಫ್ ಅನ್ನು ನಿಯೋಜಿಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ..
