ರಾಜ್ಯದಲ್ಲಿನ ಚುನಾವಣಾ ಸಿದ್ಧತೆ ಕುರಿತು ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಪೂರ್ವಭಾವಿ ಪರಿಶೀಲನೆ ನಡೆಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಮತ್ತವರ ತಂಡ ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿದ್ದು, ಚುನಾವಣಾ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದೆ. 

ನವದೆಹಲಿ(ಮಾ.29): ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಏಪ್ರಿಲ್‌ ಮೊದಲ ವಾರದಲ್ಲಿ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಉನ್ನತ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿನ ಚುನಾವಣಾ ಸಿದ್ಧತೆ ಕುರಿತು ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಪೂರ್ವಭಾವಿ ಪರಿಶೀಲನೆ ನಡೆಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಮತ್ತವರ ತಂಡ ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿದ್ದು, ಚುನಾವಣಾ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದೆ. ಪಾರದರ್ಶಕವಾಗಿ, ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮತದಾರರಿಗೆ ಆಮಿಷವೊಡ್ಡಿದರೆ ತಕ್ಷಣದಿಂದಲೇ ಕ್ರಮ: ರಾಜೀವ್‌ ಕುಮಾರ್‌

ಈ ಮೊದಲು, ಮಂಗಳವಾರ (ಮಾ.28) ಚುನಾವಣಾ ದಿನಾಂಕ ಘೋಷಣೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಘೋಷಣೆಯಾಗಿಲ್ಲ. ಹೀಗಾಗಿ, ಏಪ್ರಿಲ್‌ ಮೊದಲ ವಾರ ಅಂದರೆ, ಏಪ್ರಿಲ್‌ 3 ಅಥವಾ 4ರಂದು ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ, ಏಪ್ರಿಲ್‌ 4ರಂದು ಮಹಾವೀರ ಜಯಂತಿ ಇದ್ದು, ಅಂದು ಸಾರ್ವತ್ರಿಕ ರಜಾ ದಿನವಾಗಿದೆ.