Asianet Suvarna News Asianet Suvarna News

ಕೆಲವೇ ದಿನಗಳಲ್ಲಿ ಕಾಶಿ ದರ್ಶನ್‌ ರೈಲು ಆರಂಭ: ಸಚಿವೆ ಶಶಿಕಲಾ ಜೊಲ್ಲೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಕರ್ನಾಟಕ-ಭಾರತ್‌ ಗೌರವ್‌ ಕಾಶಿ ದರ್ಶನ್‌’ ರೈಲಿನ ಸಿದ್ಧತೆಗಳನ್ನು ಈ ತಿಂಗಳ 30ರೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟಅಧಿಕಾರಿಗಳಿಗೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ. 

Karnataka Bharath Gaurav Kashi Darshan Minister Shashikala Jolle Inspects Railway Tour Preparation gvd
Author
First Published Oct 21, 2022, 11:40 AM IST

ಬೆಂಗಳೂರು (ಅ.21): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಕರ್ನಾಟಕ-ಭಾರತ್‌ ಗೌರವ್‌ ಕಾಶಿ ದರ್ಶನ್‌’ ರೈಲಿನ ಸಿದ್ಧತೆಗಳನ್ನು ಈ ತಿಂಗಳ 30ರೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟಅಧಿಕಾರಿಗಳಿಗೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ಐಆರ್‌ಸಿಟಿಸಿ, ಕೆಎಸ್‌ಟಿಡಿಸಿ, ರೈಲ್ವೆ ಅಧಿಕಾರಿಗಳು ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಿದ್ಧತೆಗಳನ್ನು ಚುರುಕುಗೊಳಿಸುವಂತೆ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಭವ್ಯ ಕಾಶಿ-ದಿವ್ಯ ಕಾಶಿಯ ಭವ್ಯತೆಯನ್ನು ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ನೋಡಿ ಆನಂದಿಸಬೇಕು ಎನ್ನುವ ಉದ್ದೇಶದಿಂದ ಈ ಬಾರಿಯ ಬಜೆಟ್‌ನಲ್ಲಿ ರಿಯಾಯಿತಿ ದರದ ಪ್ಯಾಕೇಜ್‌ ಪ್ರವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಮುತುವರ್ಜಿಯಿಂದ ಭಾರತ್‌ ಗೌರವ್‌ ಯೋಜನೆಯಡಿಯಲ್ಲಿ ವಿಶೇಷ ರೈಲನ್ನು ಸಿದ್ಧಗೊಳಿಸಲಾಗಿದೆ. ಈ ಸಿದ್ಧತೆಗಳು ಅಂತಿಮ ಹಂತಕ್ಕೆ ಬಂದಿದ್ದು, ಇನ್ನು ಕೆಲವೇ ದಿನದಲ್ಲಿ ರೈಲು ಉದ್ಘಾಟನೆಯಾಗಲಿದೆ. 

ಸನಾತನ ಧರ್ಮದ ಸಂಪ್ರದಾಯ ಬೆಳೆಸಲು ದೀಪಾವಳಿಯಂದು ದೇವಸ್ಥಾನಗಳಲ್ಲಿ ಗೋಪೂಜೆ: ಸಚಿವೆ ಜೊಲ್ಲೆ

ರೈಲಿನಲ್ಲಿ ಯಾತ್ರೆ ಕೈಗೊಳ್ಳಲು ಬುಕ್ಕಿಂಗ್‌ ಅನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು. ಯೋಜನೆಯಡಿಯಲ್ಲಿ ಪ್ರವಾಸ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಐದು ಸಾವಿರ ರು. ಸಹಾಯ ಧನವನ್ನೂ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ. ಕೆಎಸ್‌ಟಿಡಿಸಿ ಮತ್ತು ಐಆರ್‌ಸಿಟಿಸಿ ಸಂಸ್ಥೆಗಳು ಈ ಬಗ್ಗೆ ವೆಬ್‌ಸೈಟ್‌ ಮತ್ತು ಇತರೆ ಅಗತ್ಯ ವಿಷಯಗಳನ್ನು ಇನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಬೇಕು. ನವೆಂಬರ್‌ ಮೊದಲ ವಾರದಲ್ಲಿ ಯೋಜನೆಯ ಮೊದಲ ರೈಲನ್ನು ಪ್ರಾರಂಭಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ತಿಳಿಸಲಾಗಿದೆ.

ಏತ ನೀರಾವರಿ ಯೋಜನೆಗಳಿನ್ನು ಹೊರಗುತ್ತಿಗೆಗೆ: ಜಲಸಂಪನ್ಮೂಲ ಇಲಾಖೆಯಡಿಯ ಏತ ನೀರಾವರಿ ಯೋಜನೆಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯ ಕರಡು ನೀತಿ ಮತ್ತು ಮಾರ್ಗಸೂಚಿಗಳಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರುವಾರ ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ, ಜಲಸಂಪನ್ಮೂಲ ಇಲಾಖೆಯಡಿ ಬರುವ ಏತ ನೀರಾವರಿ ಯೋಜನೆಗಳ ಜಾರಿ ಬಳಿಕ ನಿರ್ವಹಣೆ ಮಾಡುವುದು ಕಷ್ಟಕರವಾಗುತ್ತಿರುವ ಕಾರಣ ಹೊರಗುತ್ತಿಗೆ ನೀಡಲು ಹೊಸ ನೀತಿ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.

ಸರ್ಕಾರವು ಯೋಜನೆಗಳ ಜಾರಿ ಬಳಿಕ ಪಂಪ್‌ಸೆಟ್‌ಗಳ ನಿರ್ವಹಣೆ, ನೀರು ಸರಿಯಾಗಿ ಬಳಕೆಯಾಗುತ್ತಿರುವುದು ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿಭಾಯಿಸಲು ಕಷ್ಟಕರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೊರಗುತ್ತಿಗೆ ನೀಡಿ ಇಂತಿಷ್ಟುವರ್ಷಗಳ ಕಾಲ ನಿರ್ವಹಣೆಯ ಅವಧಿಯನ್ನು ನಿರ್ದಿಷ್ಟಗೊಳಿಸಲಾಗುವುದು. ಸ್ಥಳೀಯ ಕಾರ್ಯಾಚರಣೆ ಮತ್ತು ನಿರ್ವಹಣಾ ಏಜೆನ್ಸಿಗಳಲ್ಲಿ ವೃತ್ತಿಪರತೆ ಕೊರತೆ, ಅನನುಭವಿ ಕಾರ್ಯಾಚರಣೆ ಸಿಬ್ಬಂದಿ, ಯಂತ್ರಗಳ ಕಾರ್ಯಕ್ಷಮತೆಯ ಸಮಸ್ಯೆ ಸೇರಿದಂತೆ ಇತ್ಯಾದಿ ಸಮಸ್ಯೆಗಳನ್ನು ಏತ ನೀರಾವರಿ ಯೋಜನೆಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯಲ್ಲಿ ಎದುರಿಸಲಾಗುತ್ತಿತ್ತು. 

Navratri 2022 : ನಿಪ್ಪಾಣಿ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಶಶಿಕಲಾ ಜೊಲ್ಲೆ

ಹೊಸ ನೀತಿಯಲ್ಲಿ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು. ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಕಾರ್ಯಾಚರಣೆಯ ದಕ್ಷತೆಯನ್ನು ಸುಧಾರಿಸುವುದು ಮತ್ತು ಕಾರ್ಯಕ್ಷಮತೆಯನ್ನು ಕಾಯ್ದುಕೊಳ್ಳಬಹುದು. ಏತ ನೀರಾವರಿ ಯೋಜನೆಗಳ ಅಂದಾಜುಗಳನ್ನು ತಯಾರಿಸಲು ಮಾರ್ಗಸೂಚಿ ಮತ್ತು ಕಾರ್ಯಾಚರಣೆ ಮತ್ತು ನಿರ್ವಹಣೆ ಒಪ್ಪಂದಗಳಿಗೆ ಟೆಂಡರ್‌ ಮಾರ್ಗಸೂಚಿ ಸಿದ್ಧಪಡಿಸುವ ಅಂಶಗಳು ನೀತಿಯಲ್ಲಿರಲಿವೆ. ಅಚ್ಚುಕಟ್ಟು ಪ್ರದೇಶದಲ್ಲಿ ನಿಗದಿತ ಸ್ಥಳಗಳಲ್ಲಿ ಅಗತ್ಯವಾದ ಬೆಳೆಗಳಿಗೆ ನೀರಿನ ಅವಶ್ಯಕತೆಯ ಅನುಗುಣವಾಗಿ ನೀರಾವರಿ ವೇಳಾಪಟ್ಟಿಯ ಪ್ರಕಾರ ನೀರನ್ನೊದಗಿಸಲು ಮತ್ತು ಕೆರೆ ತುಂಬುವ ಅವಶ್ಯಕತೆಗಳನ್ನು ಸುಸ್ಥಿರ ಮಿತವ್ಯಯಕಾರಿ ಕಾರ್ಯಚರಣೆ ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸುವುದು ನೀತಿಯ ಉದ್ದೇಶವಾಗಿದೆ.

Follow Us:
Download App:
  • android
  • ios