Shiradi Ghat Road ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರ ಗ್ರೀನ್ ಸಿಗ್ನಲ್, ಸಿಎಂ ಧನ್ಯವಾದ
* ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರ ಗ್ರೀನ್ ಸಿಗ್ನಲ್
* ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವ ಭರವಸೆ
* ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಅಭಿನಂದನೆ ಸಲ್ಲಿಸದ ಸಿಎಂ ಬೊಮ್ಮಾಯಿ
ಬೆಂಗಳೂರು, (ಜ.20) : ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು(Shiradi Ghat Road) ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ.
ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಅವರು ತಿಳಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai)ಮಾಹಿತಿ ನೀಡಿದ್ದಾರೆ.
Hassan: ಬೆಂಗ್ಳೂರು-ಮಂಗ್ಳೂರು ರಾ.ಹೆ ಚತುಷ್ಪಥ ಕಾಮಗಾರಿ: ಶಿರಾಡಿ ಘಾಟ್ ಮತ್ತೆ ಬಂದ್?
ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದೆ. ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಹೆಚ್ 75 ನ್ನು ಚತುಷ್ಪಥವಾಗಿಸುವ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿಗೊಳಿಸಬಹುದಾಗಿದೆ.
ಶಿರಾಡಿ ಘಾಟ್ ಮೂಲಕ ಷಟ್ಪಥ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು ಎನ್.ಹೆಚ್. ಎ. ಐ. ಗೆ ಕೇಂದ್ರ ಸಚಿವರು ಸೂಚಿದ್ದಾರೆ.
ನಿತಿನ್ ಗಡ್ಕರಿಗೆ ಬೊಮ್ಮಾಯಿ ಧನ್ಯವಾದ
ಬಹುದಿನ ಕನಸಾಗಿದ್ದ ಈ ಕಾಮಗಾರಿ ಗ್ರೀನ್ ಸಿಗ್ನಲ್ ನೀಡಿರುವ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧನ್ಯವಾದ ತಿಳಿಸಿದ್ದಾರೆ.
ಶಿರಾಡಿ ಘಾಟ್ ರಸ್ತೆ ರಾಜ್ಯದ ಜೀವನಾಡಿ ಇದ್ದಂತೆ. ಈಗಿರುವ ರಸ್ತೆ ಕಿರಿದಾಗಿದೆ. ಇದನ್ನು ನಾಲ್ಕು ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ರಸ್ತೆ ಮತ್ತೆ ಬಂದ್ ಆಗುವ ಆತಂಕ ಎದುರಾಗಿದೆ. ಹೌದು, ಕಳೆದ ಏಳು ವರ್ಷಗಳಿಂದ ನಿರಂತರವಾಗಿ ರಾಜಕಮಲ್ ನೇತೃತ್ವದಲ್ಲಿ ನಡೆಯುತ್ತಿರುವ ಹಾಸನ ಮಾರನಹಳ್ಳಿ ನಡುವಿನ 40 ಕಿಮಿ ಚತುಷ್ಪಥ ಕಾಮಗಾರಿ ಆಮೆವೇಗದಲ್ಲಿ ನಡೆಯುತ್ತಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಒಂದು ವರ್ಷದಿಂದ ಕಾಮಗಾರಿ ಸ್ವಲ್ಪ ವೇಗ ಪಡೆದುಕೊಂಡಿದೆ. ಹಾಸನದಿಂದ ಸಕಲೇಶಪುರದವರೆಗಿನ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಹೀಗಾಗಿ ಶಿರಾಡಿ ಘಾಟ್ ಮತ್ತೆ ಬಂದ್ ಆಗುವ ಸಾಧ್ಯತೆ ಇದೆ,