Karnataka Budget 2023: ಬಜೆಟ್‌ನಲ್ಲಿ ಪುನೀತ್‌ ನೆನಪು, ಪವರ್‌ಸ್ಟಾರ್‌ ಸ್ಮರಣಾರ್ಥ ಜಿಲ್ಲಾಸ್ಪತ್ರೆಗಳಲ್ಲಿ AED


ಹೊಸ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ್‌ ಅವರನ್ನು ನೆಪು ಮಾಡಿಕೊಂಡಿದ್ದು, ಅವರ ಸ್ಮರಣಾರ್ಥ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ AED ಅಳವಡಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

Karnataka Budget 2023 puneeth rajkumar AED Center in district Hospital says Siddaramaiah san

ಬೆಂಗಳೂರು (ಜು.7): ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ ಅವರ ಸ್ಮರಣಾರ್ಥವಾಗಿ ಹಠಾತ್‌ ಹೃದಯ ಸಂಬಂಧ ಸಾವುಗಳನ್ನು ತಡೆಗಟ್ಟಲು ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್ ಅಥವಾ Automated External Defibrillator ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು ಎಂದು ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇದಕ್ಕಾಗಿ ಆರು ಕೋಟಿ ಅನುನಾದ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅದರೊಂದಿಗೆ ರಾಜ್ಯದಲ್ಲಿ 15 ಸಿಟಿ ಸ್ಕ್ಯಾನಿಂಗ್‌ ಮತ್ತು ಆರು ಎಂಆರ್‌ಐ ಸ್ಕ್ಯಾನಿಂಗ್‌ ಕೇಂದ್ರಗಳನ್ನು ಕೆಲವು ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ. ಈ ಸೇವೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಅಸ್ಪತ್ರೆಗಳಲ್ಲಿ ವಿಸ್ತರಣೆ ಮಾಡಲಾಗುತ್ತದೆ. ಇದೇ ಸರ್ಕಾರದ ಹಿಂದಿನ ಅವಧಿಯಲ್ಲಿ ಬಡವರಿಗೆ ಉಚಿತ ಡಯಾಲಿಸಿಸ್‌ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು ಎಂದ ಸಿದ್ಧರಾಮಯ್ಯ, ಈಗಾಗಲೇ ಅಸ್ತಿತ್ವದಲ್ಲಿರುವ 173 ಡಯಾಲಿಸಿಸ್‌  ಕೇಂದ್ರಗಳಲ್ಲಿ 219ಕ್ಕೆ ಏರಿಸಲಾಗುತ್ತದೆ. ಇದಕ್ಕಾಗಿ ಬಜೆಟ್‌ನಲ್ಲಿ 92 ಕೋಟಿ ರೂಪಾಯಿ ಒದಗಿಸಲಾಗುತ್ತದೆ ಎಂದು ಘೋಷಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆ ಬಲಪಡಿಸುವ ಸಲುವಾಗಿ ಈಗಾಗಲೇ 23 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಈ ಸಿಎಚ್‌ಸಿಗಳನ್ನು ಕಾರ್ಯಗತಗೊಳಿಸಲು ಬೇಕಿರುವ ಅಗತ್ಯ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಲು 70 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.



ನವಜಾತ ಶಿಶುಗಳು, ಮಕ್ಕಳು, ಗರ್ಭಿಣಿಯರು ಹಾಗೂ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ರಕ್ತ ಹೀನತೆ ಃಆಗೂ ಅಪೌಷ್ಠಿಕತೆಯನ್ನು ನಿವಾರಿಸಲು ಆರೋಗ್ಯ ಕಾರ್ಯಕರ್ತರ ಸಾಮರ್ಥ್ಯ ಬಲವರ್ಧನೆಗಾಗಿ ಕಾರ್ಯಕ್ರಮ ಜಾರಿಗೆ ತರಲಾಗುತ್ತದೆ. ಇದಕ್ಕಾಗಿ 25 ಕೋಟಿ ಒದಗಿಸಲಾಗುತ್ತದೆ. ಕಳೆದ ವರ್ಷ ನಿಮಾನ್ಸ್‌ ಸಹಯೋಗದೊಂದಿಗೆ ಮೆದುಳಿನ ಆರಗ್ಯ ಸೇವೆ ಉತ್ತೇಜಿಸಲು ಮೂರು ಜಿಲ್ಲೆಗಳಲ್ಲಿ ಬ್ರೇನ್‌ ಹೆಲ್ತ್‌ ಇನೀಶಿಯೇಟಿವ್‌ ಎನ್ನುವ ವಿಶಿಷ್ಠ ಯೋಜನೆ ಕೈಗೊಂಡಿತ್ತು. ಇದರ ಯಶಸ್ವಿ ಪ್ರಾಯೋಗಿಕ ಅನುಷ್ಠಾನದ ಬಳಿಕ ಇಡೀ ರಾಜ್ಯಕ್ಕೆ ಹಬ್‌ ಮತ್ತು ಸ್ಪೋಕ್‌ ಮಾದರಿಯಲ್ಲಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಷ್ಠಾನ.

Karnataka Budget 2023 Live Updates |ಅಬಕಾರಿ ಸುಂಕ ಹೆಚ್ಚಳ, ಮದ್ಯ ಪ್ರಿಯರಿಗೆ ಶಾಕ್

ಆಶಾಕಿಣ ಕಾರ್ಯಕ್ರಮದಲ್ಲಿ ಅಭಿಯಾನ ರೂಪದಲ್ಲಿ ಕಣ್ಣಿನ ಚಿಕಿತ್ಸೆಗಳ ಚಟುವಟಿಕೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳನ್ನು ನಡೆಸಲಾಗುತ್ತದೆ. 2023-24ರಲ್ಲಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಿಂದ 21 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಾರಂಭ ಮಾಡಲಾಗುತ್ತದೆ. ಬಡವರಲ್ಲಿ ಕ್ಷಯರೋಗವನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆ ಹಚ್ಚಲು ರಾಜ್ಯದಲ್ಲಿ 8 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಪ್ರತಿ ಜಿಲ್ಲೆಗೆ ಎರಡರಂತೆ ಕೈಚಾಲಿತ ಕ್ಷ ಕಿರಣ ಉಪಕರಣ ಒದಗಿಸಲಾಗುತ್ತದೆ. ಪ್ರತಿ ಎಕ್ಸ್‌ ರೇ ಯಂತ್ರಕ್ಕೆ 20 ಲಕ್ಷ ರೂಪಾಯಿಯಂತೆ ಮೂರು ಕೋಟಿ ಒದಗಿಸಲಾಗುತ್ತದೆ.

Karnataka Budget 2023: ಕೈ ಗ್ಯಾರಂಟಿಗೆ ಲಾಟ್ರಿ, 52 ಸಾವಿರ ಕೋಟಿ ಭರ್ಜರಿ!
 

Latest Videos
Follow Us:
Download App:
  • android
  • ios