ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದು, ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿ ಕೋಲಾಹಲಕ್ಕೆ ಕಾರಣವಾಯಿತು.

ಬೆಂಗಳೂರು (ಫೆ.16): ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದು, ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿ ಕೋಲಾಹಲಕ್ಕೆ ಕಾರಣವಾಯಿತು.

ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ(CM Siddaramaiah) ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದು, ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ಬಜೆಟ್​ ಅನ್ನು ಕೇಂದ್ರದ ವಿರುದ್ಧ ಟೀಕೆಗೆ ಬಳಸಿಕೊಳ್ಳುತ್ತೀರಾ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದರು. ಈ ವೇಳೆ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಸ್ಪೀಕರ್ ಯುಟಿ ಖಾದರ್ ಪರಿಪರಿಯಾಗಿ ಬೇಡಿಕೊಂಡರೂ ಪ್ರತಿಪಕ್ಷ ನಾಯಕರು ಆಕ್ರೋಶದ ಮಾತುಗಳನ್ನು ಕಡಿಮೆ ಮಾಡಲಿಲ್ಲ. 

ಕರ್ನಾಟಕ ಬಜೆಟ್ 2024 ಲೈವ್ ಅಪ್‌ಡೇಟ್ಸ್‌ : ಇಂದು ದಾಖಲೆಯ 15ನೇ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ

ಬಜೆಟ್ ಮಂಡನೆ ವೇಳೆ ಸರಕು ಮತ್ತು ಸೇವಾ ತೆರಿಗೆಯನ್ನು ಪರಿಚಯಿಸುವಾಗ, ಕೇಂದ್ರ ಸರ್ಕಾರವು 14% ರಷ್ಟು ಬೆಳವಣಿಗೆಯಾಗಲಿದೆ ಮತ್ತು ಆದಾಯದ ಬೆಳವಣಿಗೆಯಲ್ಲಿ ಕೊರತೆಯಿದ್ದಲ್ಲಿ ರಾಜ್ಯಗಳಿಗೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿತ್ತು. 14% ಯೋಜಿತ ಬೆಳವಣಿಗೆಯ ದರದಲ್ಲಿ, GST ತೆರಿಗೆ ಸಂಗ್ರಹವು ರೂ. 2017 ರಿಂದ 2023-24 ರವರೆಗೆ 4,92,296 ಕೋಟಿ ರೂ. ಆದರೆ, ಕೇವಲ 3,26,764 ಕೋಟಿ ಜಿಎಸ್‌ಟಿ ಆದಾಯ ಸಂಗ್ರಹವಾಗಿದ್ದು, ಜಿಎಸ್‌ಟಿ ಕೊರತೆಯ ವಿರುದ್ಧ ರೂ. 1,65,532 ಕೋಟಿ, ಕೇಂದ್ರ ಸರ್ಕಾರ 1,06,258 ಕೋಟಿ ರೂ.ಗಳನ್ನು ರಾಜ್ಯಕ್ಕೆ ಪರಿಹಾರವಾಗಿ ಬಿಡುಗಡೆ ಮಾಡಿತ್ತು. ಹಾಗಾಗಿ ಕಳೆದ 7 ವರ್ಷಗಳಲ್ಲಿ ಜಿಎಸ್‌ಟಿಯ ಅವೈಜ್ಞಾನಿಕ ಅನುಷ್ಠಾನದಿಂದ ರಾಜ್ಯಕ್ಕೆ 59,274 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಹೇಳಿದರು.

ಸದನದಲ್ಲಿ ಮತ್ತೆ ಗುನುಗಿದ 'ಏನಿಲ್ಲ... ಏನಿಲ್ಲ..'

ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಸದಸ್ಯರು ಬಜೆಟ್​ಗೆ ಬಹಿಷ್ಕಾರ ಹಾಕಿ ಹೊರನಡೆದರು. ಸಭಾತ್ಯಾಗ ಮಾಡುತ್ತಲೇ ಏನಿಲ್ಲಾ.. ಏನಿಲ್ಲಾ... ಬಜೆಟ್ ನಲ್ಲಿ ಏನಿಲ್ಲ.. ಎಂದು ಗುನುಗಿಸುತ್ತಲೇ ಹೊರ ನಡೆದರು. ವಿಧಾನಸಭೆ ಪ್ರವೇಶದ್ವಾರದ ಬಾಗಿಲಿಗೆ ಬಿಜೆಪಿ ಶಾಸಕರು ಪೋಸ್ಟರ್ ಅಂಟಿಸಿ ಪ್ರತಿಭಟಿಸಿದರು.

ಕೇಂದ್ರ ಸರ್ಕಾರ ಮಾಡದ ಕೆಲಸವನ್ನು ನಾವು ಮಾಡಿದ್ದೇವೆ. ಆದರೆ ಗ್ಯಾರಂಟಿ ಯೋಜನೆಯಿಂದ ದೇಶ ದಿವಾಳಿ ಎಂದರು. ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಆದರೆ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಕೇಂದ್ರ ಸರ್ಕಾರವು ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಕಾಪಿ ಮಾಡಿದೆ. ಆದರೆ, ಕೇಂದ್ರ ಸರ್ಕಾರವು ಸಂಪತ್ತಿನ ಸಮಾನ ಹಂಚಿಕೆ ಮಾಡದೆ, ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು. ಇದು ಬಿಜೆಪಿ ಸದಸ್ಯರ ಆಕ್ರೋಶಕ್ಕೆ ಕಾರಣವಾಯಿತು.

ಚಾಮುಂಡಿಬೆಟ್ಟ ಪ್ರಾಧಿಕಾರವೂ ಇಲ್ಲ, ಚಿತ್ರನಗರಿಯ ಸದ್ದು ಇಲ್ಲ: ಏಕತಾಮಾಲ್‌ಗೆ ಸಚಿವ ಸಂಪುಟ ಅನುಮೋದನೆ

2023-24ರಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಒಟ್ಟು ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯವು 2ನೇ ಸ್ಥಾನದಲ್ಲಿದೆ. ಜನವರಿ ತಿಂಗಳ ಅಂತ್ಯದವರೆಗು 58,180 ಕೋಟಿ ರೂ.ಗಳ SGST ತೆರಿಗೆ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ ಶೇ.14 ರಷ್ಟು ಬೆಳವಣಿಗೆಯಾಗಿರುತ್ತದೆ. ತೆರಿಗೆ ಸಂಗ್ರಹದಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಹೆಚ್ಚಳವಾಗಿದೆ. ಇದರ ಪರಿಣಾಮ ತೆರಿಗೆ ಸಂಗ್ರಹ ಹೆಚ್ಚಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.