Asianet Suvarna News Asianet Suvarna News

ಫೆ.16ರ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ದಿನವೇ ರಾಜ್ಯ ಬಜೆಟ್ ಮಂಡನೆ: ಸರ್ಕಾರದ ಮರ್ಮವನ್ನರಿತ ಬಿಜೆಪಿ ನಾಯಕರು!

ಶಿಕ್ಷಕರ ಕ್ಷೇತ್ರದ ಉಪಚುನಾವಣೆ ದಿನವೇ ರಾಜ್ಯ ಸರ್ಕಾರ ಬಜೆಟ್ ಮಂಡಿಸುತ್ತಿರುವುದು ಪೀಪಲ್ ಆಫ್ ರೆಪ್ರೆಸೆಂಟೇಟಿವ್ ಕಾಯ್ದೆಗೆ ವಿರುದ್ಧವಾಗಿದೆ ಎಂದು ಬಿಜೆಪಿ ನಾಯಕರು ದೂರು ನೀಡಿದ್ದಾರೆ.

Karnataka budget 2024 presentation on Feb 16 same day will held teachers constituency election sat
Author
First Published Jan 24, 2024, 4:32 PM IST | Last Updated Jan 27, 2024, 12:43 PM IST

ಬೆಂಗಳೂರು (ಜ.24): ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಪೂರ್ಣಕಾಲಿಕ 2024-25ನೇ ಸಾಲಿನ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಫೆ.16ರಂದು ಮಂಡನೆ ಮಾಡುತ್ತಿದ್ದಾರೆ. ಆದರೆ, ಇದೇ ದಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದೆ. ಆದರೆ, ಇದು ಪೀಪಲ್ ಆಫ್ ರೆಪ್ರೆಸೆಂಟೇಟಿವ್ ಆಕ್ಟ್ ಪ್ರಕಾರ ವಿರುದ್ಧವಾಗಿದ್ದು, ಈ ಬಗ್ಗ ಒಂದನ್ನು ರದ್ದುಗೊಳಿಸುವಂತೆ ಬಿಜೆಪಿ ನಿಯೋಗ ರಾಜ್ಯಾಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ.

ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಗವು, ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಅಥವಾ ರಾಜ್ಯ ಸರ್ಕಾರದ ಬಜೆಟ್ ದಿನಾಂಕವನ್ನು ಮುಂದೂಡಬೇಕು ಎಂದು ಮನವಿ ಮಾಡಿದ್ದಾರೆ. 2024-25ನೇ ಸಾಲಿನ ಬಜೆಟ್ ಹಾಗೂ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ನಡೆಸಲಾಗುತ್ತಿದೆ. ಚುನಾವಣೆ ದಿನ ನೀತಿ ಸಂಹಿತೆಯಿದ್ದರೂ ಸರ್ಕಾರ ಬಜೆಟ್‌ನಲ್ಲಿ ಕೆಲವೊಂದು ಘೋಷಣೆಗಳನ್ನು ಮಾಡುವ ಮೂಲಕ ಉಪ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಸಂಚು ರೂಪಿಸಿದೆ. ಇದು ಪೀಪಲ್ ಆಫ್ ರೆಪ್ರೆಸೆಂಟೇಟಿವ್ ಆಕ್ಟ್ ಪ್ರಕಾರ ವಿರುದ್ಧವಾಗಿದೆ ಎಂದು ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಮೇಲುಕೋಟೆ ಶಿಕ್ಷಕಿ ಹಂತಕ ಹೊಸಪೇಟೆಯಲ್ಲಿ ಅರೆಸ್ಟ್: 'ಅಪ್ಪಾಜಿ ದೀಪಿಕಾ ಅಕ್ಕಾ ಸಿಕ್ಕಿದ್ರಾ' ಅಂತ ಕೇಳಿದ್ದ ಕೊಲೆಗಾರ!

ರಾಜ್ಯಪಾಲರಿಗೆ ದೂರು ಸಲ್ಲಿಕೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಅವರು, ಎಲೆಕ್ಷನ್ ಕಮೀಷನ್ ಆಫ್ ಇಂಡಿಯಾವು ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಘೋಷಣೆ ಮಾಡಿದೆ. ಆದರೆ, ಇದೇ ದಿನಾಂಕದಲ್ಲಿ ರಾಜ್ಯ ಸರ್ಕಾರ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದೆ. ಆದರೆ, ಚುನಾವಣೆ ದಿನ ಬಜೆಟ್ ಮಂಡನೆ ಮಾಡಿದಲ್ಲಿ ಇದು ಚುನಾವಣೆ ಮೇಲೆ ನೇರ ಪರಿಣಾಮ ಬೀರಲಿದೆ. ಹೀಗಾಗಿ, ಬಿಜೆಪಿ ರಾಜ್ಯಪಾಲರ ಭೇಟಿ ಮಾಡಿ, ಚುನಾವಣೆ ದಿನ ಬಜೆಟ್ ಮಂಡಿಸಬಾರದು ಅಂತ ಮನವಿ ಮಾಡಿದ್ದೇವೆ. ಇದಕ್ಕೆ ರಾಜ್ಯಪಾಲರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸರ್ಕಾರಕ್ಕೆ ತಿಳಿಸೋದಾಗಿ ಹೇಳಿದ್ದಾರೆ ಎಂದರು.

ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವಧಿ ಮುಕ್ತಾಯ: ಸರ್ಕಾರದ ವಿರುದ್ಧ ಅಸಮಾಧಾನ!

ಬಿಜೆಪಿ ನಾಯಕರು ದೊಣ್ಣೆ ಒಂದು ಕೈಯಲ್ಲಿ, ಮಂತ್ರಾಕ್ಷತೆ ಒಂದು ಕೈಯಲ್ಲಿ ತೆಗೆದುಕೊಂಡು ಹೆದರಿಸ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ ಬಗ್ಗೆ ಮಾತನಾಡಿದ ಅಶ್ವತ್ಥನಾರಾಯಣ ಅವರು, ಎಲ್ಲರೂ 500 ವರ್ಷದಿಂದ ಪ್ರತಿಯೊಬ್ಬ ಭಾರತೀಯರು ರಾಮಮಂದಿರ ನಿರ್ಮಾಣಕ್ಕೆ ಕಾಯುತ್ತಿದ್ದರು. ನಾವೆಲ್ಲಾ ರಾಮಭಕ್ತರು ಅಂತ ಕಾಂಗ್ರೆಸ್ ನವರು ಹೇಳ್ತಾರೆ. ಆದರೆ, ಅಧಿಕಾರ ಇರೋ ಕಾಂಗ್ರೆಸ್‌ನವರು ಕಾರಣ ಹೇಳ್ತಿದ್ದಾರೆ. ಇದರಲ್ಲಿ ಮತ್ತೊಬ್ಬ ಸಚಿವರು ಹೇಳ್ತಾರೆ ನಾನು ರಾಮಭಕ್ತನಲ್ಲ ಅಂತ. ಕಾಂಗ್ರೆಸ್ ನಾಯಕರು ಜನರ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ಕೊಡ್ತಿದ್ದಾರೆ ಎಂದು ಕಿಡಿಕಾರಿದರು.

Latest Videos
Follow Us:
Download App:
  • android
  • ios