- Home
- News
- State
- ಕರ್ನಾಟಕ ಬಜೆಟ್ 2026-27 ವಿಶ್ಲೇಷಣೆ - ಉದ್ಯಮ ವಲಯದಿಂದ 'ಉತ್ತಮ' ಸರ್ಟಿಫಿಕೇಟ್; ಒಪ್ಪಿಕೊಳ್ಳದ ವಿರೋಧ ಪಕ್ಷ!
ಕರ್ನಾಟಕ ಬಜೆಟ್ 2026-27 ವಿಶ್ಲೇಷಣೆ - ಉದ್ಯಮ ವಲಯದಿಂದ 'ಉತ್ತಮ' ಸರ್ಟಿಫಿಕೇಟ್; ಒಪ್ಪಿಕೊಳ್ಳದ ವಿರೋಧ ಪಕ್ಷ!

ಹಣದ ಬರ, ಗ್ಯಾರಂಟಿಗಳ ಭಾರ, ನಿರೀಕ್ಷೆಗಳ ಹೊರೆ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ ಮಂಡನೆಗೆ ಅಣಿಯಾಗಿದ್ದು, ಆರ್ಥಿಕ ಶಿಸ್ತು ಸರಿದಾರಿಗೆ ತರುವ ಜತೆ ಜನರ ನಿರೀಕ್ಷೆ ಈಡೇರಿಕೆಗೂ ಆದ್ಯತೆ ನೀಡುವ ಸಾಧ್ಯತೆಯಿದೆ. ರಾಜ್ಯದ ಮಟ್ಟಿಗೆ ಅತಿ ಹೆಚ್ಚು ಹಾಗೂ ದೇಶದಲ್ಲಿ ಎರಡನೇ ಅತಿ ಹೆಚ್ಚು ಆಯವ್ಯಯ ಮಂಡಿಸಿರುವ ಸಿದ್ದರಾಮಯ್ಯ ಅವರು ಶುಕ್ರವಾರ ಬೆಳಗ್ಗೆ 10.15 ಗಂಟೆಗೆ ಕರ್ನಾಟಕದ ಆಯ-ವ್ಯಯ ಲೆಕ್ಕ ಬಿಚ್ಚಿಡಲಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಕಡಿವಾಣ ಹಾಕದೆ ಆರ್ಥಿಕ ಶಿಸ್ತು ಪಾಲನೆಗೆ ಬಜೆಟ್‌ನಲ್ಲಿ ಸಿಎಂ ಒತ್ತು ನೀಡುವ ಸಾಧ್ಯತೆ ಇದೆ.
Karnataka Budget Live Updates: ಕರ್ನಾಟಕ ಬಜೆಟ್ 2026-27 ವಿಶ್ಲೇಷಣೆ - ಉದ್ಯಮ ವಲಯದಿಂದ 'ಉತ್ತಮ' ಸರ್ಟಿಫಿಕೇಟ್; ಒಪ್ಪಿಕೊಳ್ಳದ ವಿರೋಧ ಪಕ್ಷ!
Karnataka Budget Live Updates: ಸೋಷಿಯಲ್ ಮೀಡಿಯಾ ಬ್ಯಾನ್ ಬೆನ್ನಲ್ಲೇ ಸಚಿವ ಲಾಡ್ ಸ್ಫೋಟಕ ಹೇಳಿಕೆ, ನಮ್ಮ ಸ್ಕ್ರೀನ್ ಟೈಂ ಕೂಡ ಏಳೆಂಟು ಗಂಟೆ ಆಗಿದೆ!
Karnataka Budget Live Updates: ಉನ್ನತ ಶಿಕ್ಷಣಕ್ಕೆ ಬಜೆಟ್ ಬಲ - ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ, ರೋಹಿತ್ ವೇಮುಲ ಕಾಯ್ದೆ ಜಾರಿಗೆ
ಈ ಸಾಲಿನ ಬಜೆಟ್‌ನಲ್ಲಿ ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರವು ಮಹತ್ವದ ಉತ್ತೇಜನ ನೀಡಿದ್ದು, ಮೂಲಸೌಕರ್ಯ ಅಭಿವೃದ್ಧಿ, ಹೊಸ ಕಾಲೇಜುಗಳ ಸ್ಥಾಪನೆ, ಹಾಗೂ 2,000 ಬೋಧಕ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ. ವಿದ್ಯಾರ್ಥಿನಿಯರಿಗೆ ವಿಶೇಷ ಸೌಲಭ್ಯ, ಹೊಸ ತಂತ್ರಜ್ಞಾನ ಆಧಾರಿತ ಕೋರ್ಸುಗಳ ಆರಂಭ .
Karnataka Budget Live Updates: Karnataka Budget - ಅಬಕಾರಿ ನೀತಿಗೆ ಸರ್ಜರಿ; ಮದ್ಯದ ಅಂಶದ ಮೇಲೆ ಹೊಸ ತೆರಿಗೆ, ಬೆಲೆ ನಿರ್ಧಾರ ಉತ್ಪಾದಕರಿಗೇ ಮುಕ್ತ!
ಸಿದ್ದರಾಮಯ್ಯನವರು 2026-27ರ ಬಜೆಟ್‌ನಲ್ಲಿ 60 ವರ್ಷ ಹಳೆಯ ಅಬಕಾರಿ ಕಾಯ್ದೆಗೆ ಮೇಜರ್ ಸರ್ಜರಿ ಮಾಡಿದ್ದಾರೆ. ಏಪ್ರಿಲ್ 2026 ರಿಂದ 'ಮದ್ಯದ ಅಂಶ ಆಧಾರಿತ ತೆರಿಗೆ' (AIB) ಪದ್ಧತಿ ಜಾರಿಯಾಗಲಿದ್ದು, ತೆರಿಗೆ ಸೋರಿಕೆ ತಡೆಯಲು ಬ್ಲಾಕ್‌ಚೈನ್ -ಜಿಯೋ-ಫೆನ್ಸ್ಡ್ ಲಾಕ್‌ನಂತಹ ಹೈಟೆಕ್ ತಂತ್ರಜ್ಞಾನ ಅಳವಡಿಕೆ.
Karnataka Budget Live Updates: 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್: ಮನಃಶಾಸ್ತ್ರಜ್ಞರ ಸ್ವಾಗತ
ಉಡುಪಿ: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬ್ಯಾನ್ ಮಾಡುತ್ತಿರುವುದನ್ನು ಮನೋವೈದ್ಯ ಡಾ.ಪಿ.ವಿ.ಭಂಡಾರಿ ಸ್ವಾಗತಿಸಿದ್ದಾರೆ. ವಾರ್ಡ್‌ನಲ್ಲಿ ಪ್ರತಿದಿನ ಇಬ್ಬರು ಅಂಡರ್ 18 ಮಕ್ಕಳು ಅಡ್ಮಿಟ್ ಆಗ್ತಾರೆ. ಸಾಮಾಜಿಕ ಜಾಲತಾಣಗಳ ಬಳಕೆಯಿಂದಲೇ ಹೀಗಾಗುತ್ತಿದೆ. ಸೋಷಿಯಲ್ ಮೀಡಿಯಾ ಮೂಲಕ ಅಪರಿಚಿತರಿಂದ ಮೋಸ ಹೋದ ಮಕ್ಕಳೂ ಇವೆ. ಇದು ಸಮಯೋಚಿತ ನಿರ್ಧಾರ. ತಕ್ಷಣವೇ ಇದು ಯಾವ ಪರಿಣಾಮ ಬೀರುತ್ತೋ ಗೊತ್ತಿಲ್ಲ. 18 ವರ್ಷದೊಳಗಿನ ಮಕ್ಕಳಿಗೆ ಬೀಡಿ ಸಿಗರೇಟು ಕೊಡಬಾರದೆಂಬ ಕಾನೂನು ಎಷ್ಟರ ಮಟ್ಟಿಗೆ ಜಾರಿಯಾಗಿದೆ?
ಮೊಬೈಲ್ ಪೋನ್ ಖಾಸಗಿ ಸ್ವತ್ತು. ಅದರಲ್ಲಿ ಮಕ್ಕಳು ಏನು ನೋಡ್ತಾರೆ, ಏನು ನೋಡಲ್ಲ ಅಂತ ಪತ್ತೆ ಮಾಡೋದು ಸುಲಭವಲ್ಲ. ಪೋಷಕರು ಮತ್ತು ಶಾಲಾ ಆಡಳಿತದ ಸಹಕಾರ ಬೇಕು. ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಮೊಬೈಲ್ ಜೊತೆ ಶಾಲೆಗೆ ಪ್ರವೇಶ ನೀಡಲ್ಲ. ಸರ್ಕಾರಿ ಶಾಲೆಯೊಳಗೆ ಉಪಯೋಗ ಮಾಡಲ್ಲ.
ಹೊರಗೆ ಕಡಿವಾಣ ಹಾಕೋದು ಕಷ್ಟ
ಇದು ರೂಲ್ ಅಂತ ತಂದ್ರೆ ಮುಂದಿನ ಪೀಳಿಗೆಯನ್ನಾದ್ರೂ ನಿಯಂತ್ರಿಸಬಹುದು.ಈಗಿನ ಟೀನೇಜರ್ಸ್ ಕಡಿವಾಣ ಹಾಕೋದು ಕಷ್ಟ. ಈಗ 10-12 ವರ್ಷದ ಮಕ್ಕಳನ್ನು ನಿಯಂತ್ರಿಸಬಹುದು. ಉಪಯೋಗ ಮಾಡಲು ಇಲ್ಲ ಅನ್ನೋ ಕಾನೂನು ಬಂದ್ರೆ ಸ್ವಲ್ಪ ಜನವಾದರೂ ದೂರ ಸರಿಯುತ್ತಾರೆ. ಯುವಕರು ಆತಂಕ, ಖಿನ್ನತೆಗೆ ಒಳಗಾಗಿದ್ದಾರೆ. ಅತಿಯಾದ ಮೊಬೈಲ್ ಉಪಯೋಗಿಸಿ, ಬಿಡಲಾಗದ ಸ್ಥಿತಿ ತಲುಪಿದ್ದು, ಶಾಲಾ ಕಾಲೇಜು ತೊರೆಯುತ್ತಿದ್ದಾರೆಂದರು.
Karnataka Budget Live Updates: Karnataka Budget - ಉರ್ದು ಶಾಲೆಗಳ ಅಭಿವೃದ್ಧಿಗೆ ₹400 ಕೋಟಿ ಅನುದಾನ; ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಭಾಗ್ಯ!
Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ವಿಶೇಷ ಒತ್ತು ನೀಡಲಾಗಿದ್ದು, ಶಿಕ್ಷಣ, ಉದ್ಯೋಗ ಮತ್ತು ಸಾಮಾಜಿಕ ಭದ್ರತೆಗೆ ಬಂಪರ್ ಕೊಡುಗೆಗಳನ್ನು ಘೋಷಿಸಲಾಗಿದೆ.
Karnataka Budget Live Updates: ಆಸ್ಪತ್ರೆಗಳಿಗೆ ಆಹಾರ ಪೂರೆಕೆ ವಿಸ್ತರಣೆ
- ಇಸ್ಕಾನ್ ಮೂಲಕ ರೋಗಿಗಳಿಗೆ ಆಹಾರ ಪೂರೈಕೆಯ ಯಶಸ್ವಿ ಮಾದರಿಯನ್ನು ರಾಜ್ಯದ ಆಯ್ದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗುವುದು.
-. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಆಯ್ದ ಆಯುಷ್ ಆಸ್ಪತ್ರೆಗಳಲ್ಲಿ ಪಂಚಕರ್ಮ ಘಟಕಗಳನ್ನು ಸ್ವಾವಲಂಬಿ (self-sustaining) ಮಾದರಿಯಲ್ಲಿ ಸ್ಥಾಪಿಸಲಾಗುವುದು.
- ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.
Karnataka Budget Live Updates: ಡಿಜಿಟಲ್ ಆರೋಗ್ಯ ಕಾರ್ಯಕ್ರಮಕ್ಕೆ ಒತ್ತು
• ʻಸಮಸ್ತʼ ಮೊಬೈಲ್ ಅಪ್ಲಿಕೇಶನ್ ಮೂಲಕ ಆರೋಗ್ಯ ಇಲಾಖೆಯ ಎಲ್ಲಾ ಕ್ಷೇತ್ರ ಸಿಬ್ಬಂದಿ ನಿರ್ವಹಿಸುತ್ತಿರುವ ವಹಿಗಳ ಡಿಜಿಟಲೀಕರಣ;
• ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ರೋಗಿಗಳಿಗೆ ಸಂಪೂರ್ಣ ಗಣಕೀಕೃತ ನೋಂದಣಿ, ಆರೋಗ್ಯ ದಾಖಲೆಗಳ ಡಿಜಿಟಲೀಕರಣ ಮತ್ತು ಯುಪಿಐ ಆಧಾರಿತ ಶುಲ್ಕ ಪಾವತಿ ವ್ಯವಸ್ಥೆ ಜಾರಿ;
• ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಟೆಲಿ-ರೇಡಿಯಾಲಜಿ (Scanning) ಮತ್ತು ಟೆಲಿ-ಲೇಬರ್ ರೂಮ್‌ಗಳ (Smart Labour Room) ಅಳವಡಿಕೆ.
Karnataka Budget Live Updates: ಪುತ್ತೂರಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ
-. ಹಿಂದಿನ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು 300 ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದಿಸಲಾಗಿರುತ್ತದೆ. ಅಲ್ಲದೆ, ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಘಟಕ ಕಾಲೇಜನ್ನು ಸ್ಥಾಪಿಸಲು ಕ್ರಮ
- ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿ.
-. ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪನೆ.
- ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಮುನಿರಾಬಾದ್-ಟಿ.ಬಿ.ಡ್ಯಾಂನಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ.
- ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ GBA ಸಹಯೋಗದೊಂದಿಗೆ ಸ್ಥಾಪನೆ.
- ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿIVF ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ
- ವಿಕ್ಟೋರಿಯಾ ಆಸ್ಪತ್ರೆ ಇನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ. ಬೆಂಗಳೂರು ವೈದ್ಯಕೀಯ ಕಾಲೇಜಿನ MBBS ಮತ್ತು BDS ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ 10 ಕೋಟಿ ರೂ.
Karnataka Budget Live Updates: ಕಾರವಾರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ
- ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಸೌಕರ್ಯವನ್ನು ಇನ್ನಷ್ಟು ಸದೃಢಗೊಳಿಸಲು ಕೆಳಕಂಡ ಪ್ರಮುಖ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ:-
- ಕಾರವಾರದಲ್ಲಿ 198 ಕೋಟಿ ರೂ. ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರಿನಲ್ಲಿ 10 ಕೋಟಿ ರೂ. ವೆಚ್ಚದ ಟ್ರಾಮಾ ಕೇರ್ ಕೇಂದ್ರ ಮತ್ತು ಮೈಸೂರು ಹಾಗೂ ತುಮಕೂರಿನಲ್ಲಿ ೯೨ ಕೋಟಿ ರೂ. ವೆಚ್ಚದ ಪೆರಿಫೆರಲ್ ಕ್ಯಾನ್ಸರ್ ಕೇಂದ್ರಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. • ೨೩೬ ಕೋಟಿ ರೂ. ವೆಚ್ಚದ ಹುಬ್ಬಳ್ಳಿಯ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಕಟ್ಟಡವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆಗೊಳಿಸಲಾಗುವುದು. • ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ 1,000 ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಟರ್ಷಿಯರಿ ಆರೈಕೆ ಮತ್ತು ಅಂಗಾಂಗ ಕಸಿ ಆಸ್ಪತ್ರೆಯನ್ನು ನಿರ್ಮಿಸಲು ಒಡಂಬಡಿಕೆ.
- 2026-೨೭ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರೂ.ಗಳ ಅನುದಾನ. ಉಪಕರಣಗಳ ಖರೀದಿಗಾಗಿ 220 ಕೋಟಿ ರೂ.ಅನುದಾನ ಮೀಸಲು.
-ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 180 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ
Karnataka Budget Live Updates: ಬಜೆಟ್ ನಲ್ಲೂ ಉಪ ಚುನಾವಣಾ ತಂತ್ರಗಾರಿಕೆ
ಬಜೆಟ್ ನಲ್ಲೇ 100 ಕೋಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ. ಎಸ್.ಶಿವಶಂಕರಪ್ಪ ನಿಧನದಿಂದ ಮೃತರಾದ ದಾವಣೆಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, 100 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುತ್ತಿರುವ ವಿವಿಧ ಭಾಗಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ 100 ಕೋಟಿ ಮೀಸಲು. ಇನ್ನು ಕೆಲವೇ ತಿಂಗಳಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ.
Karnataka Budget Live Updates: ಬೆಂಗಳೂರು ರಸ್ತೆಗೆ ಮುಂದಿನ ಮೂರು ವರ್ಷಗಳಲ್ಲಿ ವೈಟ್ ಟಾಪಿಂಗ್
ರಸ್ತೆಗಳ ಧೀರ್ಘ ಕಾಲದ ಬಾಳಿಕೆಗಾಗಿ ಮುಂದಿನ ಮೂರು ವರ್ಷಗಳಲ್ಲಿ ವೈಟ್ ಟಾಪಿಂಗ್. 450 KM ಗೂ ಹೆಚ್ಚು ಉದ್ದದ ರಸ್ತೆಗಳನ್ನು 3000 ಕೋಟಿ ವೆಚ್ಚದಲ್ಲಿ ವೈಟ್ ಟಾಪಿಂಗ್. ಬೆಂಗಳೂರು ನಗರ ಪಾಲಿಕೆಗಳ ಸ್ವಂತ ಸಂಪನ್ಮೂಲದಲ್ಲಿ ಮೇಲ್ದರ್ಜೆಗೇರಿಸಲು ಸೂಚನೆ.
ಬಜೆಟ್ ನಲ್ಲಿ ಸೂಚನೆ ಕೊಟ್ಟಿರುವ ಸಿಎಂ ಸಿದ್ದರಾಮಯ್ಯ.
3 ವರ್ಷಗಳಲ್ಲಿ 175 ಜಂಕ್ಷನ್ ಗಳ ಸೌಂದರ್ಯೀಕರಣ.
500 ಕಿ.ಮೀ ಉದ್ದದ ಪಾದಚಾರಿ ಮಾರ್ಗ ಮೇಲ್ದರ್ಜೆಗೇರಿಸಲು ನಿರ್ಧಾರ.
100 ಸ್ಕೈವಾಕ್ ಗಳ ನಿರ್ಮಾಣ ಮಾಡಲು ಉದ್ದೇಶ.
GBA 5 ಪಾಲಿಕೆಗಳು ತಮ್ಮ ಬ್ಯಾಲೆನ್ಸ್ ಶೀಟ್ ಆಧಾರದಲ್ಲಿ ಮುನಿಸಿಪಲ್ ಬಾಂಡ್ ಗಳ ಹೊರಡಿಸುವುದು.
ಆ ಮೂಲಕ ಅಭಿವೃದ್ಧಿ ಕಾಮಗಾರಿಗಳ ಸಂಪನ್ಮೂಲ ಕ್ರೋಡೀಕರಿಸಲು ಮುಂದಾದ ಸರ್ಕಾರ.
Karnataka Budget Live Updates: ಸಿಎಂಗೆ ರಿಜ್ವಾನ್ ಅರ್ಷದ್ ಅಭಿನಂದನೆ
ಶಾಸಕ ರಿಜ್ವಾನ್ ಅರ್ಷದ್ ಹೇಳಿಕೆ. ಸಿಎಂ ಸಿದ್ದರಾಮಯ್ಯ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಗ್ಯಾರಂಟಿ ಸ್ಕಿಂ ಈ ಬಜೆಟ್‌ನಲ್ಲಿ ಮುಂದುವರಿಸಲಾಗಿದೆ. ಸಾರ್ವಜನಿಕರ ಆರೋಗ್ಯಕ್ಕೆ ಹೆಚ್ಚು ಒತ್ತು ಕೊಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಇನ್ವಸ್ಟ್‌ಮೆಂಟ್ ಮಾಡಲಾಗಿದೆ.
ಐಟಿಬಿಟಿ ಉದ್ಯೋಗಕ್ಕೆ ಒತ್ತು
ನಿರ್ಮಾಣ ಕಾರ್ಯಗಳಿಗೆ ಸುಮಾರು 70 ಸಾವಿರ ಕೋಟಿ ಮೀಸಲು ಇಡಲಾಗಿದೆ. ಉತ್ತರ ಕರ್ನಾಟಕಕ್ಕೆ ಹೆಚ್ಚು ಅನುದಾನ ಕೊಡಲಾಗಿದೆ. ಬಿಜೆಪಿಯ ನನ್ನ ಸ್ನೇಹಿತರು ಏನು ಹೇಳಿದ್ರು ಅದನ್ನ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಮಾಡಿ ತೋರಿಸಿದ್ದಾರೆ. ಬೆಂಗಳೂರು ನಗರದ ಟನಲ್, ಕೆರೆಗಳಿಗೆ ಅನುದಾನ ಬಜೆಟ್‌ನಲ್ಲಿ ಕೊಡಲಾಗಿದೆ
ಫೆರಿಫರಲ್ ರಿಂಗ್ ರೋಡ್ ಬಜೆಟ್ ಮೀಸಲು
ಬಿಜೆಪಿ ಕಾಲದಲ್ಲಿ 510 ಸಾವಿರ ಕೋಟಿ ಕೊಟ್ಟು ಕೈ ತೋಳದುಕೊಳ್ಳತ್ತಾ ಇದ್ರು. ಆದ್ರೆ ಸಿದ್ದರಾಮಯ್ಯ ಬೆಂಗಳೂರಿಗೆ ಲಕ್ಷಾಂತರ ಕೋಟಿ ಅನುದಾನ ಬೆಂಗಳೂರಿಗೆ ಕೋಡಲಾಗಿದೆ.
16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ವಿಚಾರ
ಸೋಷಿಯಲ್ ಮೀಡಿಯಾ ಮಕ್ಕಳ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಎಲ್ಲಾರ ಮನೆಯಲ್ಲೂ ಸಣ್ಣ ಮಕ್ಕಳು ಇದ್ದಾರೆ. ಅವರಿಗೆ ಮಾಹಿತಿ ಫಿಲ್ಟರ್ ಆಗಿ ಹೋಗಬೇಕಾಗುತ್ತೆ. ಚಿಕ್ಕ ಮಕ್ಕಳನ್ನ ಸೋಷಿಯಲ್ ಮೀಡಿಯಾದಿಂದ ದೂರ ಇಡಬೇಕು.ಇದು ಯಾವ ರೀತಿ ಮಾಡಬೇಕು ಅನ್ನೋದು ಚರ್ಚೆ ಆಗ್ತಾ ಇದೆ.
Karnataka Budget Live Updates: ಜೈಲಿನ ಅಕ್ರಮ ತಡೆಯಲು AI ಅಳವಡಿಕೆ
ರಾಜ್ಯದ ಎಲ್ಲಾ ಕಾರಾಗೃಹ ಗಳಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಎಐ ಡಿಟಕ್ಷನ್ ಸಿಸ್ಟಮ್. ಮೊಬೈಲ್, ಗಾಂಜಾ ಹಾಗೂ ಇತರೆ ನಿಷೇಧಿತ ವಸ್ತುಗಳ ಬಳಕೆ ಹಾಗೂ ಅಕ್ರಮ ಚಟುವಟಿಕೆಗಳ ತಡೆಗಟ್ಟಲು ಕಠಿಣ ಕ್ರಮ.
Karnataka Budget Live Updates: ಮಕ್ಕಳಿಗೆ ಮೊಬೈಲ್ ಬ್ಯಾನ ಮಾಡಿರೋದು ಒಳ್ಳೆಯ ಕೆಲಸ
16 ವರ್ಷದ ಮಕ್ಕಳಿಗೆ ಮೊಬೈಲ್ ಬ್ಯಾನ್ ವಿಚಾರ . MLC ಪುಟ್ಟಣ್ಣ ಹೇಳಿಕೆ
ಮಕ್ಕಳಿಗೆ ಮೊಬೈಲ್ ಬ್ಯಾನ ಮಾಡಿರೋದು ಒಳ್ಳೆಯ ಕೆಲಸ. ಮಾದಕ ವಸ್ತು ಯಾವ ರೀತಿ ಮಕ್ಕಳ ಹಾಳು ಮಾಡ್ತಿದೆ. ಅದಕ್ಕಿಂತ ಹೆಚ್ಚಿನ ರೀತಿಯಲ್ಲಿ ಮೊಬೈಲ್ ಮಕ್ಕಳನ್ನ ಹಾಳು ಮಾಡ್ತಿದೆ. ಸಿಎಂ ಮೊಬೈಲ್ ಬ್ಯಾನ್ ಮಾಡಿರೋದನ್ನ ಸ್ವಾಗತಿಸುತ್ತೇವೆ. ಮಾನಸಿಕ ತಜ್ಞರನ್ನ ನೇಮಕ ಮಾಡುತ್ತೇವೆ ಎಂದಿದ್ದಾರೆ
ಪೋಷರಿಗೆ ಕೌನ್ಸಿಲಿಂಗ್ ಮಾಡಬೇಕು. ಉನ್ನತ ಶಿಕ್ಷಣ ಇಲಾಖೆಯಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚಾಗಿದೆ. ಮೊದಲ ಹಂತದಲ್ಲಿ ಮೊಬೈಲ್ ಬ್ಯಾನ್ ಮಾಡಿದ್ದಾರೆ. ಇದೇ ರೀತಿಯಲ್ಲಿ ಗಲ್ಲು ಶಿಕ್ಷೆಯಂತಹ ಕಾನೂನು ಬರಬೇಕು. ಸಾಮಾಜಿಕ ಜಾಲತಾಣದಲ್ಲಿ ಮಕ್ಕಳನ್ನ ಸೆಳೆಯುತ್ತಿರುವ ವಿಚಾರಗಳನ್ನ ಬ್ಯಾನ್ ಮಾಡಬೇಕೆಂದು ಆಗ್ರಹಿಸಿದ್ದಾರೆ.
Karnataka Budget Live Updates: ಯುವ ನಿಧಿಗಿಲ್ಲ ಈ ವರ್ಷ ಅನುದಾನ, ಬೇರೆ ಯೋಜನೆಗಳ ಮುಂದುವರಿಕೆ
ಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯೂ ಹಣ ಮೀಸಲಿಟ್ಟ ಸರ್ಕಾರ
* ಗೃಹಲಕ್ಷ್ಮಿ ಯೋಜನೆಗೆ 28608 ಕೋಟಿ ಹಣ ಮೀಸಲು
* ಅನ್ನ ಭಾಗ್ಯ ಯೋಜನೆಗೆ 6,200 ಕೋಟಿ ಮೀಸಲು
* ಗೃಹ ಜ್ಯೋತಿ ಯೋಜನೆಗೆ ಈ ವರ್ಷ 10578 ಕೋಟಿ ಮೀಸಲು
* ಶಕ್ತಿ ಯೋಜನೆಗೆ 5300 ಕೋಟಿ ಹಣ ಮೀಸಲು
ಯುವ ನಿಧಿಗೆ ಯಾವುದೇ ಅನುದಾನ ಮೀಸಲಿಡದ ಸರ್ಕಾರ
Karnataka Budget Live Updates: Karnataka Budget - ಗ್ರಾಮ ಪಂಚಾಯಿತಿಗಳಿಗೆ 'ಮಹಾತ್ಮ ಗಾಂಧಿ' ಹೆಸರು; ನರೇಗಾ ರದ್ದು ಮಾಡಿದ ಕೇಂದ್ರದ ವಿರುದ್ಧ ಸಮರ!
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ. ನರೇಗಾ ರದ್ದತಿಯನ್ನು ಖಂಡಿಸಿ, ಗ್ರಾಮ ಪಂಚಾಯಿತಿಗಳ ಮರುನಾಮಕರಣ, 'ಅನಂತ' ಸೋಲಾರ್ ಯೋಜನೆ, ಮತ್ತು 'ಕಲ್ಯಾಣ ಪಥ' ಹಾಗೂ 'ಪ್ರಗತಿ ಪಥ' ರಸ್ತೆ ಯೋಜನೆಗಳಂತಹ ಪ್ರಮುಖ ಘೋಷಣೆಗಳನ್ನು ಮಾಡಲಾಗಿದೆ.
Karnataka Budget Live Updates: Karnataka Budget - ಕುಕ್ಕೆ, ಕೊಲ್ಲೂರು ಕ್ಷೇತ್ರಗಳ ಅಭಿವೃದ್ಧಿಗೆ 'ಪ್ರಾಧಿಕಾರ' ರಚನೆ; ವೈಷ್ಣೋದೇವಿ ಯಾತ್ರಾರ್ಥಿಗಳಿಗೆ ₹5,000 ಸಹಾಯಧನ!
2026-27ರ ಬಜೆಟ್‌ನಲ್ಲಿ, ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಾಲಯಗಳ ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರಗಳನ್ನು ರಚಿಸಲು ಸರ್ಕಾರ ನಿರ್ಧರಿಸಿದೆ. ಹೊರರಾಜ್ಯದ ಪುಣ್ಯಕ್ಷೇತ್ರಗಳಲ್ಲಿ ಯಾತ್ರಿನಿವಾಸಗಳನ್ನು ಅಭಿವೃದ್ಧಿಪಡಿಸಲು ಅನುದಾನ ಘೋಷಿಸಲಾಗಿದೆ.
Karnataka Budget Live Updates: ಬಿಇ ಕಾಲೇಜುಗಳ ಬಲವರ್ಧನೆ
- ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ, ಹೆಸರಘಟ್ಟ ಇಲ್ಲಿ ನಡೆಸಲಾಗುತ್ತಿರುವ ಸೌಂಡ್ ರೆಕಾರ್ಡಿಂಗ್ ಮತ್ತು ಇಂಜಿನಿಯರಿಂಗ್ ಹಾಗೂ ಸಿನಿಮಾಟೋಗ್ರಫಿ ಕೋರ್ಸುಗಳಿಗೆ ಅಗತ್ಯವಿರುವ ಆಧುನಿಕ ಉಪಕರಣಗಳನ್ನು ಒದಗಿಸಲಾಗುವುದು.
- ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು.
- ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ನಮ್ಮ ಸರ್ಕಾರವು ಉದ್ದೇಶಿಸಿದೆ.
- ಧಾರವಾಡ ಮತ್ತು ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗುವುದು.
- ಕರ್ನಾಟಕದಲ್ಲಿ NCC ಯನ್ನು ಉತ್ತೇಜಿಸುವ ಸಲುವಾಗಿ ಪ್ರಸ್ತುತ ಇರುವ 96,000 NCC ಕೆಡೆಟ್ಗಳ ಕಾರ್ಯಬಲವನ್ನು ಮುಂದಿನ ಎರಡು ವರ್ಷಗಳಲ್ಲಿ 10,000 ಗಳಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
- ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು 25 ಎಕರೆ ಜಮೀನನ್ನು ನೀಡಲು ಚಿಂತನೆ.
Karnataka Budget Live Updates: ಮಹಿಳಾ ಉಪನ್ಯಾನಸಕರಿಗೆ ಮಾತೃತ್ವ ರಜೆ
- AnitaB.org India ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯೊಂದಿಗೆ ವೃತ್ತಿ ಜೀವನದ ಆರಂಭಿಕ ಹಂತದಲ್ಲಿರುವ ವಿಜ್ಞಾನ, ತಾಂತ್ರಿಕ, ಗಣಿತ ಮತ್ತು ಇಂಜಿನಿಯರಿಂಗ್ (STEM) ವಿಭಾಗಗಳಲ್ಲಿನ ಆಯ್ದ 3,000 ಮಹಿಳಾ ಪದವೀಧರರಿಗೆ ಕೌಶಲ್ಯಾಭಿವೃದ್ಧಿ/ವೃತ್ತಿನಿರತ ತರಬೇತಿಗಳನ್ನು ಒಟ್ಟು 13.50 ಕೋಟಿ ರೂ. ವೆಚ್ಚದಲ್ಲಿ ಜಾರಿ.
- ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು IIT ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರದ ವತಿಯಿಂದ ಈಗಾಗಲೇ 100 ಕೋಟಿ ರೂ. ಒದಗಿಸಲಾಗುತ್ತಿದ್ದು, ಮುಂದುವರಿಯಲಿದೆ.
- ಸರ್ಕಾರಿ ಶಾಲಾ ಕಾಲೇಜುಗಳಲ್ಲಿ 10 ಮತ್ತು 12ನೇ ತರಗತಿಗಳನ್ನು ವ್ಯಾಸಂಗ ಮಾಡಿ 2025-26ನೇ ಸಾಲಿನಿಂದ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರುವ 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ.ಗಳ ವಿದ್ಯಾರ್ಥಿ ವೇತನವನ್ನು ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ಹಾಗೂ ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ʻದೀಪಿಕಾ ವಿದ್ಯಾರ್ಥಿ ವೇತನʼ ಯೋಜನೆಯಡಿ ನೀಡಲಾಗುತ್ತಿದೆ. ಇದು ಮುಂದುವರೆಯಲಿದೆ.
-. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು.