ಎಕ್ಸಿಟ್ ಪೋಲ್‌ಗಳು ತಲೆಕೆಳಗಾಗಲಿವೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿಕೆ ಶಿವಕುಮಾರ

ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

Karnataka bypoll result Congress will win in Channapatnam says DCM DK Shivakumar at  karwar rav

ಕಾರವಾರ: ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿಗೆ ಮರಳುವ ಮುನ್ನ ಮುರ್ಡೇಶ್ವರ ಗಾಲ್ಫ್ ಕ್ಲಬ್‌ನ ಹೆಲಿಪ್ಯಾಡ್ ಬಳಿ ಮಾಧ್ಯಮ ಪ್ರತಿನಿಧಿಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಉಪಚುನಾವಣೆ ಫಲಿತಾಂಶ ಶನಿವಾರ ಪ್ರಕಟವಾಗುತ್ತಿದ್ದು, ಮಹಾರಾಷ್ಟ್ರದ ಚುನಾವಣೋತ್ತರ ಸಮೀಕ್ಷೆ ಕುರಿತು ಪ್ರಶ್ನಿಸಿದಾಗ, ನಾವು ಅಲ್ಲಿಯೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ಆತ್ಮವಿಶ್ವಾಸವಿದೆ. ನನಗೆ ಆ ರಾಜ್ಯದ ಬಗ್ಗೆ ಹೆಚ್ಚು ಚಿತ್ರಣವಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸರಳ ಬಹುಮತ ಪಡೆದು ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ನಾನು ಕೂಡ ಪ್ರಚಾರಕ್ಕೆ ಹೋಗಿದ್ದೆ. ಆಗ ಕಾಂಗ್ರೆಸ್ ಪರ ಅಲೆ ಕಂಡಿತು. ಆದರೆ ಮತ ಪೆಟ್ಟಿಗೆಯಲ್ಲಿ ಏನಿದೆ ಎಂಬುದು ಯಾರಿಗೂ ತಿಳಿಯುವುದಿಲ್ಲ. ಜಾರ್ಖಂಡ್ ಬಗ್ಗೆ ಗೊತ್ತಿಲ್ಲ ಎಂದರು.

ಚನ್ನಪಟ್ಟಣದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೇವಲ 16 ಸಾವಿರ ಮತಗಳು ದೊರೆತಿದ್ದವು. ಆದರೆ ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ಆತ್ಮವಿಶ್ವಾಸ ನನಗಿದೆ. ರಾಮನಗರದಲ್ಲಿ ಇಕ್ಬಾಲ್ ಹುಸೇನ್, ಮಾಗಡಿಯಲ್ಲಿ ಬಾಲಕೃಷ್ಣ, ಕನಕಪುರದಲ್ಲಿ ನಾನು ಗೆದ್ದಿದ್ದೆವು. ಚನ್ನಪಟ್ಟಣದಲ್ಲಿ ಮಾತ್ರ ಗೆದ್ದಿರಲಿಲ್ಲ. ಈ ಬಾರಿ ಗೆಲುವು ಖಂಡಿತ ಎಂದರು.

ವಕ್ಫ್‌ ವಿರುದ್ಧ ಜನರು ದಂಗೆ ಏಳುತ್ತಿದ್ರೂ, ಪಿಟೀಲು ನುಡಿಸುತ್ತಿರುವ ಸಿಎಂ: ಆರ್ ಅಶೋಕ್ ವಾಗ್ದಾಳಿ

ಕುಮಾರಸ್ವಾಮಿ ಅವರ ಮೈ ಬಣ್ಣದ ಬಗ್ಗೆ ಮಾತನಾಡಿದ ಸಚಿವ ಜಮೀರ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಅವರ ಹೇಳಿಕೆ ಕುರಿತು ಪಕ್ಷದೊಳಗೆ ಅಸಮಾಧಾನ ಇರುವ ಬಗ್ಗೆ ಗಮನ ಸೆಳೆದಾಗ, ಜಮೀರ್ ಅವರು ಉತ್ತಮ ಕೆಲಸಗಾರ. ಇದು ಪಕ್ಷದ ಆಂತರಿಕ ವಿಚಾರ. ಅವರಿಗೆ ಈ ಬಗ್ಗೆ ಬುದ್ಧಿ ಹೇಳಲಾಗಿದೆ. ಅವರು ಆತುರವಾಗಿ ಒಂದಷ್ಟು ಹೇಳಿಕೆ ಕೊಟ್ಟಿದ್ದಾರೆ. ಇದು ತಪ್ಪು ಎಂದು ಹೇಳಿದ್ದೇವೆ. ಪಕ್ಷದ ಅಧ್ಯಕ್ಷನಾಗಿ ನಾನೇ ಅವರಿಗೆ ಬುದ್ಧಿ ಹೇಳಿದ್ದೇನೆ. ನನ್ನ ಹೊರತಾಗಿ ಮತ್ತಿನ್ಯಾರು ಅವರಿಗೆ ಬುದ್ಧಿವಾದ ಹೇಳಬೇಕು, ಜಮೀರ್ ಅವರು ಈಗಾಗಲೇ ಅವರ ಹೇಳಿಕೆಯ ಬಗ್ಗೆ ಕ್ಷಮೆ ಕೇಳಿದ್ದಾರೆ. ಅವರಿಗೆ ತಮ್ಮ ತಪ್ಪಿನ ಅರಿವಾಗಿದೆ ಎಂದರು.

ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಕುರಿತು ಮುಖ್ಯಮಂತ್ರಿ ಹಾಗೂ ಸಚಿವ ಎಚ್.ಕೆ. ಪಾಟೀಲ್ ಅವರ ಬಳಿ ಚರ್ಚೆ ಮಾಡಲಾಗುವುದು. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು. ಕರಾವಳಿಯ ಪ್ರಕೃತಿ ಸಂಪತ್ತು ಸದ್ಬಳಕೆಯಾಗಬೇಕು. ಬಂಡವಾಳ ಹೂಡಿಕೆದಾರರು ಬಂದರೆ ಉತ್ತಮ ರೀತಿಯಲ್ಲಿ ಉದ್ಯೋಗ ಸೃಷ್ಟಿಯಾಗುತ್ತದೆ. ಇದರಿಂದ ಜನರಿಗೆ ಅನುಕೂಲವಾಗುತ್ತದೆ ಎಂದರು.

ನಾನು 15-20 ವರ್ಷಗಳ ಹಿಂದೆ ಬ್ಯಾಂಕಾಕಿಗೆ ಹೋಗಿದ್ದ ವೇಳೆ ಗಮನಿಸಿದಂತೆ ಅಲ್ಲಿನ ಯುವಕರಿಗಿಂತ ನಮ್ಮ ಕರಾವಳಿಯ ಹುಡುಗರು ಹೆಚ್ಚು ಕ್ರಿಯಾಶೀಲವಾಗಿದ್ದಾರೆ. ಇಲ್ಲಿ ಅಂತಾರಾಷ್ಟೀಯ ಮಟ್ಟದ ಅನುಕೂಲತೆ ನೀಡುವಂತಹ ವಾತಾವರಣ ಇದೆ. ಈ ಕಾರಣಕ್ಕಾಗಿ ಇಲ್ಲಿ ಉಳಿದುಕೊಂಡು ಅನುಕೂಲತೆಗಳನ್ನು ವೀಕ್ಷಣೆ ಮಾಡಿದೆ ಎಂದರು.

ಡಿ.9ರಿಂದ ಚಳಿಗಾಲದ ಅಧಿವೇಶನ; ಮುಡಾ ಆರೋಪಿ ಸಿದ್ದು ಸೈಲೆಂಟಾದ್ರೆ, ಯಾರಾಗಲಿದ್ದಾರೆ ವಿಧಾನಸಭೆ ವೀರ?

ಇಲ್ಲಿನ ಸಮುದ್ರ ಕಿನಾರೆಗಳು ಗೋವಾಕ್ಕಿಂತ ಹೆಚ್ಚು ಸುಂದರವಾಗಿವೆ. ಅದಕ್ಕಾಗಿ ಸ್ವತಃ ಕಣ್ಣಾರೆ ನೋಡಲು ಬಂದೆ. ನಾನು ಕಿವಿಗಳಿಗಿಂತ ಹೆಚ್ಚು ಕಣ್ಣನ್ನು ನಂಬುತ್ತೇನೆ. ಸ್ಕೂಬಾ ಡೈವಿಂಗ್ ಮಾಡಿದೆ ಎಂದರು. ಸಂಪುಟ ವಿಸ್ತರಣೆಯ ಬಗ್ಗೆ ಊಹಾಪೋಹಗಳ ಬಗ್ಗೆ ಪ್ರಶ್ನಿಸಿದಾಗ, ನಾನು ಮುಖ್ಯಮಂತ್ರಿ ಅಲ್ಲ, ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ. ಅವರು ಇದರ ಬಗ್ಗೆ ಉತ್ತರ ಹೇಳುತ್ತಾರೆ ಎಂದರು ಮೀನುಗಾರಿಕೆ ಸಚಿವರಾದ ಮಾಂಕಾಳ ವೈದ್ಯ, ಶಾಸಕ ಭೀಮಣ್ಣ ನಾಯ್ಕ ಇದ್ದರು.

Latest Videos
Follow Us:
Download App:
  • android
  • ios