ರಾಜ್ಯ ಸಂಪುಟ ಸಭೆ : ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್‌ಕಿನ್ ವಿತರಣೆ ಸೇರಿ ಹಲವು ತೀರ್ಮಾನ
- ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ
- ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನ
- ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್ ವಿತರಣೆ ಸೇರಿ ಹಲವು ಮಹತ್ವದ ತೀರ್ಮಾನ
ಬೆಂಗಳೂರು (ಆ.19): ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು ಸಭೆಯಲ್ಲಿ ಹಲವು ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು.
ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. 10 ದಿನ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನ ಸೇರಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಕ್ಯಾಬಿನೆಟ್ ಸಭೆಯಲ್ಲಿ ತೆಗೆದುಕೊಂಡು ತೀರ್ಮಾನಗಳು ಈ ಕೆಳಗಿನಂತಿವೆ.
* ಸೆಪ್ಟೆಂಬರ್ 13 ರಿಂದ 24ರವರೆಗೆ ಬೆಂಗಳೂರಿನಲ್ಲಿ 10 ದಿನ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.
* ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಬಗ್ಗೆ ಯಾವುದೇ ವಿಚಾರವನ್ನೂ ಪ್ರಸ್ತಾಪಿಸಿಲ್ಲ
*ರಾಜ್ಯದ ಸಚಿವ ಸಂಪುಟ ಉಪಸಮಿತಿಗಳನ್ನು ರಚನೆ ಮಾಡಲು ತಿರ್ಮಾನ
*14 ಸಂಪುಟ ಉಪಸಮಿತಿಯ ರಚನೆಗೆ ಸಿಎಂ ಅವರಿಗೆ ಅಧಿಕಾರ ನೀಡಿದ ಸಂಪುಟ ಸಭೆ..
*ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಆರೈಕೆ ನಿಯಮ, 2021 ಅನುಮೋದನೆ
*2020-21 ನೇ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ- ಕಾಲೇಜುಗಳ ಹದಿಹರೆಯದ ಹೆಣ್ಣುಮಕ್ಕಳಿಗೆ "ಶುಚಿ" ಕಾರ್ಯಕ್ರಮದಡಿ ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್‌ಗಳನ್ನು ವಿತರಿಸಲು 47 ಕೋಟಿ ರೂ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ
ರೇಷನ್ ಕಾರ್ಡ್ ಹೊಂದಿರುವ ಎಲ್ಲ ಮನೆಗೂ ವಿದ್ಯುತ್ ಸಂಪರ್ಕ
*ರಾಜ್ಯದಲ್ಲಿನ 2859 ಆರೋಗ್ಯ ಉಪಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನಾಗಿ ರೂ. 478,91 ಕೋಟಿ ಮೊತ್ತದಲ್ಲಿ ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ..
*ಕಲಬುರಗಿ ಜಿಲ್ಲೆ, ಆಳಂದ ತಾಲ್ಲೂಕು ಮಿನಿ ವಿಧಾನ ಸೌಧ ಕಟ್ಟಡ ಕಾಮಗಾರಿಯ ರೂ. 12,48 ಕೋಟಿ ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ
*ಮಂಗಳೂರು ಮಹಾನಗರ ವ್ಯಾಪ್ತಿಯ ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಂಗ್ರಹವಾಗಿರುವ ಪಾರಂಪರಿಕ ತ್ಯಾಜ್ಯ (Legacy waste) ನಿರ್ವಹಣೆಗೆ 73.73 ಕೋಟಿ ರೂಗಳ ವಿಸ್ತ್ರತ ಯೋಜನಾ ವರದಿಗೆ ಸಂಪುಟ ಅನುಮೋದನೆ
* 75 ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಿನ್ನೆಲೆ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ ಯೋಜನೆಯನ್ನು ಜಾರಿ ಮಾಡಲು ಸಂಪುಟ ಸಭೆ ಅನುಮೋದನೆ ಸೇರಿದಂತೆ ವಿವಿಧ ವಿಚಾರಗಳ ಚರ್ಚೆ ನಡೆಯಿತು.
ಬಸವರಾಜ ಬೊಮ್ಮಾಯಿ ಮುಂದೆ ಮೀಸಲಾತಿ ಫೈಲ್: ಸರ್ಕಾರಕ್ಕೆ ದೊಡ್ಡ ಸವಾಲ್
ಇನ್ನು ಇಂದು ನಡೆದ ಸಂಪುಟ ಸಭೆಯಲ್ಲಿ ಅಸಮಾಧಾನಿತ ಸಚಿವ ಆನಂದ್ ಸಿಂಗ್ ಗೈರಾಗಿದ್ದರು. ಅಲ್ಲದೇ ಸಾರಿಗೆ ಸಚಿವ ಶ್ರೀರಾಮುಲು ಹಾಗು ಆರ್ ಅಶೋಕ್ ಕೂಡ ಗೈರು ಹಾಜರಾಗಿದ್ದರು.
ಸಚಿವ ಆರ್.ಅಶೋಕ್ ಅವರು ಕೇಂದ್ರ ಸಚಿವ ಭಗವಂತ್ ಖೂಬಾ ಅವರ ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಿದ್ದ ಹಿನ್ನೆಲೆ ಸಭೆ ಅಗಮಿಸಿಲ್ಲ.