Asianet Suvarna News Asianet Suvarna News

ಸಿಎಂ ವಿರುದ್ಧ ಪ್ರಾಸಿಕ್ಯೂಷನ್: ತುರ್ತು ಸಚಿವ ಸಂಪುಟ ಸಭೆ ರದ್ದು, ನಿವಾಸಕ್ಕೆ ಸಚಿವರ ದೌಡು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಇಂದು ಸಂಜೆ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಆದರೆ ಈಗ ರದ್ದು ಮಾಡಲಾಗಿದೆ.

Karnataka Cabinet meeting about Governor decision CM siddaramaiah prosecution on MUDA scam case gow
Author
First Published Aug 17, 2024, 11:17 AM IST | Last Updated Aug 17, 2024, 12:16 PM IST

ಬೆಂಗಳೂರು (ಆ.17): ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ  ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌  ಅಧಿಸೂಚನೆ ಹೊರಡಿಸಿರುವ ಬೆನ್ನಲ್ಲೇ ಇಂದು ಸಂಜೆ ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿತ್ತು. ಆದರೆ ಇಂದು ಕರೆದಿದ್ದ ತುರ್ತು ಸಚಿವ ಸಂಪುಟ ಸಭೆಯನ್ನು ರದ್ದು ಮಾಡಲಾಗಿದೆ. ಸಿಎಂ ಜೊತೆ ಸಚಿವರ ಸಭೆಯಲ್ಲಿ ತೀರ್ಮಾನ ಮಾಡಿ, ಕ್ಯಾಬಿನೆಟ್ ಮೀಟಿಂಗ್ ರದ್ದುಗೊಳಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಭೆ ರದ್ದಾಗಲು ಕಾರಣ ತಿಳಿದುಬಂದಿಲ್ಲ.  

ಸಂಜೆ 5 ಗಂಟೆಗೆ ತುರ್ತು ಸಂಪುಟ ಸಭೆ  ‌ಕರೆಯಲಾಗಿತ್ತು, ಎಲ್ಲಾ ಸಚಿವರಿಗೆ ಸಂಪುಟ ಸಭೆಗೆ ಬರಲು ಸೂಚನೆ  ಕೂಡ ನೀಡಲಾಗಿತ್ತು. ಜಿಲ್ಲಾ ಕೇಂದ್ರದಲ್ಲಿ ಇರುವ ಸಚಿವರು ಕೂಡ ತಕ್ಷಣವೇ ಬರುವಂತೆ ಕೂಡ ಸೂಚನೆ ನೀಡಲಾಗಿತ್ತು. ಆದರೆ ಈಗ ಸಭೆ ರದ್ಧಾಗಿದೆ.  

ಸಿಎಂ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ಹಾಗೂ ಭಾರತೀಯ ನಾಗರೀಕ ಸುರಕ್ಷಾ  ಸಂಹಿತೆ sec 218  ಅಡಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಸನ್ ಗೆ ಅನುಮತಿ‌ ನೀಡಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಕಾನೂನು ಸಲಹೆಗಾರ ಪೊನ್ನಣ್ಣ ಆಗಮಿಸಿದ್ದಾರೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಸಚಿವರ ದೌಡಾಯಿಸುತ್ತಿದ್ದಾರೆ. ಪ್ರಿಯಾಂಕಾ ಖರ್ಗೆ, ಬೈರತಿ ಸುರೇಶ್, ಸಚಿವ ಶರಣ್ ಪ್ರಕಾಶ ಪಾಟೀಲ್  ಸೇರಿ ಅನೇಕ ಸಚಿವರು ಬರುತ್ತಿದ್ದಾರೆ. ಇದೆಲ್ಲದರ ನಡುವೆ ಇಂದೇ ರಾಜ್ಯಪಾಲರ ನಿರ್ಣಯದ ಮೇಲೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಇಂದೇ ವಿಚಾರಣೆಗೆ ತೆಗೆದುಕೊಳ್ಳುವಂತೆ ಮುಖ್ಯ ನ್ಯಾಯಮೂರ್ತಿಗಳಿಗೆ ಸಿಎಂ ಪರ ವಕೀಲರು ಮನವಿ ಮಾಡಲಿದ್ದಾರೆ.

MUDA Scam: ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ನಂತರ ಮುಂದೇನು?

ಮೈಸೂರು ನಗರಾಭಿವೃದ್ಧಿ ಪ್ರಾಧೀಕಾರದಲ್ಲಿ ಅಕ್ರಮವಾಗಿ 14 ಸೈಟ್ ಪಡೆದುಕೊಂಡ ಆರೋಪದ ಮೇಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಟಿಜೆ ಅಬ್ರಾಹಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್‌ ಎನ್ನುವವರು   ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮೂರು ದೂರು ಸಲ್ಲಿಸಿದ್ದರು. ದೂರಿನ ಅನ್ವಯ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ಕೂಡ ನೀಡಿದ್ದಾರೆ.  

Latest Videos
Follow Us:
Download App:
  • android
  • ios