ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದೆ. ತಪ್ಪು ಮಾಹಿತಿ ಹಂಚಿಕೊಳ್ಳುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗ ಸ್ಪಷ್ಟಪಡಿಸಿದೆ.

ಬೆಂಗಳೂರು (ನ.19): ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳುವುದಾಗಿ ಆಯೋಗ ಎಚ್ಚರಿಸಿದೆ. 

ಜಾತಿ ಗಣತಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ:

ಹೈಕೋರ್ಟ್‌ ಸೂಚನೆ ಮೇರೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿ ಮಾಹಿತಿ ಮತ್ತು ದತ್ತಾಂಶಗಳನ್ನು ಗೌಪ್ಯವಾಗಿ ಇಡಲಾಗಿದೆ. ಆದರೂ, 2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂಬ ಶೀರ್ಷಿಕೆ ಅಡಿಯಲ್ಲಿ ವಿವಿಧ ಜಾತಿಗಳ ಜನಸಂಖ್ಯೆಯ ತಪ್ಪು ಮಾಹಿತಿಯನ್ನು ಕೆಲವರು ಹರಡುತ್ತಿದ್ದಾರೆ. ಹೀಗೆ ಸುಳ್ಳು ಮಾಹಿತಿ ಹಂಚಿಕೊಂಡವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗಿದೆ. ಮುಂದೆಯೂ ವಾಟ್ಸ್‌ಆ್ಯಪ್‌ ಸೇರಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಳ್ಳುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಲಾಗಿದೆ.

ಹೀಗಾಗಿ ಯಾರೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ, ಜನಸಂಖ್ಯೆ ಕುರಿತಂತೆ ಸುಳ್ಳು ಮಾಹಿತಿ ಹಂಚಿಕೊಳ್ಳಬಾರದು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.