Grama One: ರಾಜ್ಯದ 3026 ಹಳ್ಳಿಗಳಲ್ಲಿ "ಗ್ರಾಮ ಒನ್‌’ಗೆ ಚಾಲನೆ

- ಗ್ರಾಮಗಳಲ್ಲೇ ಸರ್ಕಾರಿ ಸೇವೆ ಒದಗಿಸುವ ಯೋಜನೆ
- 12 ಜಿಲ್ಲೆಗಳಲ್ಲಿ ಜಾರಿ, ಮಾರ್ಚ್ ನಿಂದ ರಾಜ್ಯಾದ್ಯಂತ
- ತಾಲೂಕು ಕಚೇರಿಗೆ ಜನರ ಅಲೆದಾಟ ತಪ್ಪಲಿದೆ: ಸಿಎಂ

Karnataka Chief Minister Basavaraj Bommai on Wednesday launched Grama One technology driven programme san

ಬೆಂಗಳೂರು (ಜ. 27): ಸರ್ಕಾರದ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರಿಗೆ ತಲುಪಿಸುವ ಉದ್ದೇಶ ಹೊಂದಿರುವ ಮಹತ್ವಾಕಾಂಕ್ಷಿ ಯೋಜನೆ ‘ಗ್ರಾಮ ಒನ್‌’ (Grama One) ರಾಜ್ಯದ 12 ಜಿಲ್ಲೆಗಳಲ್ಲಿ ಆರಂಭವಾಗಿದೆ. ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆನ್‌ಲೈನ್‌ ಮೂಲಕ ರಾಜ್ಯದ 12 ಜಿಲ್ಲೆಗಳ 3026 ಗ್ರಾಮ ಪಂಚಾಯತಿಗಳಲ್ಲಿ ‘ಗ್ರಾಮ ಒನ್‌’ ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಈ ಯೋಜನೆಯನ್ನು ಮಾರ್ಚ್ (March)ಅಂತ್ಯದೊಳಗೆ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಪ್ರಕಟಿಸಿದರು. ಸರ್ಕಾರದ ಸೌಲಭ್ಯ ಪಡೆಯಲು ಜನರು ಸಮಯ ಹಾಗೂ ಹಣ ವ್ಯಯಿಸುವುದನ್ನು ತಪ್ಪಿಸಿ, ಗ್ರಾಮೀಣ ಜನರ ಬಳಿಯೇ ಸೇವೆಗಳನ್ನು ತಲುಪಿಸುವ ಧ್ಯೇಯದೊಂದಿಗೆ ಗ್ರಾಮ ಒನ್‌ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಕೃಷಿ, ತೋಟಗಾರಿಕೆ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಸೇರಿದಂತೆ ಹಲವು ಸೇವೆಗಳು ಗ್ರಾಮ ಮಟ್ಟದಲ್ಲಿ ಲಭ್ಯವಾಗಲಿವೆ. ತಾಲ್ಲೂಕು ಕಚೇರಿಯಲ್ಲಿ ಜನಸಂದಣಿ ತಪ್ಪಿಸಲು ಯೋಜನೆ ಜಾರಿಗೊಳಿಸಲಾಗಿದೆ ಎಂದರು.

ಗ್ರಾಮಸ್ಥರು ನೇರವಾಗಿ ಗ್ರಾಮ ಪಂಚಾಯತಿಗಳಿಗೆ (Grama Panchayat)ತೆರಳಿ ಗ್ರಾಮ ಒನ್‌ ಸೇವೆಗಳನ್ನು ಪಡೆಯಬಹುದಾಗಿದೆ. ಈ ಹಿಂದೆ 4 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿ, ಅನುಷ್ಠಾನದಲ್ಲಿನ ಎಲ್ಲ ತೊಡಕುಗಳನ್ನು ನಿವಾರಿಸಲಾಗಿದೆ. ಜನರಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವ ಕ್ರಾಂತಿಕಾರಿ ಬದಲಾವಣೆ ಇದಾಗಿದೆ. ತಳಮಟ್ಟದಲ್ಲಿ ಸರ್ಕಾರದ ಸೇವೆಗಳನ್ನು ಸಮರ್ಪಕವಾಗಿ ಸುಲಭವಾಗಿ ತಲುಪಿಸಲಾಗುವುದು. ಮನೆ ಮತ್ತು ಹೊಲದ ಹಕ್ಕು ಪತ್ರಗಳು, ಸಂಧ್ಯಾ ಸುರಕ್ಷಾ, ಅಂಗವಿಕಲರ ಮಾಸಾಶನ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹೀಗೆ ಜನರ ಹತ್ತಾರು ಸೇವೆಗಳ ಅವಶ್ಯಕತೆಗಳನ್ನು ಪೂರೈಸುವ ಪ್ರಯತ್ನ ಇದಾಗಿದೆ ಎಂದು ತಿಳಿಸಿದರು.

ಗ್ರಾಮ ಒನ್‌ನ ಪ್ರಾಯೋಗಿಕ ಹಂತದಲ್ಲಿಯೇ ಆರು ಲಕ್ಷಕ್ಕಿಂತ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿ ಸೇವೆಗಳನ್ನು ಪೂರೈಸಲಾಗಿದೆ. ತಹಶೀಲ್ದಾರರು, ಸಹಾಯಕ ಆಯುಕ್ತರ ಸಹಕಾರ ಬಹಳ ಮುಖ್ಯ. ಜಿಲ್ಲಾಧಿ​ಕಾರಿಗಳು ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ ಜವಾಬ್ದಾರಿ ಹಾಗೂ ನಾಯಕತ್ವ ವಹಿಸಬೇಕು. ಗ್ರಾಮೀಣ ಜನರ ಬದುಕಿನಲ್ಲಿ ಬದಲಾವಣೆ ತಂದು ಜೀವನಮಟ್ಟವನ್ನು ಉನ್ನತೀಕರಿಸಲು ಸರ್ಕಾರದ ಸೇವೆಗಳನ್ನು ಸುಲಭವಾಗಿ ದೊರಕಿಸಿಕೊಟ್ಟು ಗ್ರಾಮ ಒನ್‌ ವ್ಯವಸ್ಥೆಯ ಪರಿಕಲ್ಪನೆಯನ್ನು ಸಾಕಾರಗೊಳಿಸಬೇಕು. ಜನರ ಬದುಕನ್ನು ನಂ.1 ಮಟ್ಟಕ್ಕೆ ಏರಿಸಲು ಗ್ರಾಮ ಒನ್‌ ಸಹಕರಿಸುವಂತಾಗಲಿ ಎಂದು ಮುಖ್ಯಮಂತ್ರಿಗಳು ಆಶಿಸಿದರು.

Hijab Controversy: ಹಿಜಾಬ್‌ ಧರಿಸುವ ವಿದ್ಯಾರ್ಥಿನಿಯರಿಗೆ ಆನ್‌ಲೈನ್‌ ಪಾಠ ಎಂದ ಶಾಸಕ ರಘುಪತಿ ಭಟ್‌
ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯದಿಂದ ಅಟಲ್‌ ಬಿಹಾರಿ ವಾಜಪೇಯಿಯವರ ಗ್ರಾಮ ಸುರಾಜ್ಯದೆಡೆಗೆ ಗ್ರಾಮಗಳನ್ನು ಕೊಂಡೊಯ್ಯಲು ಆಧುನಿಕ ತಂತ್ರಜ್ಞಾನ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದ ಅವರು, ಶಾಸಕರು, ಸಚಿವರು ಮತ್ತು ಜನಪ್ರತಿನಿಧಿಗಳು ಗ್ರಾಮ ಒನ್‌ ವ್ಯವಸ್ಥೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ಹಾವೇರಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯೋಜನೆ ಉದ್ಘಾಟನೆ ವೇಳೆ ಗ್ರಾಮಸ್ಥರಿಂದ ಅರ್ಜಿ ಸ್ವೀಕರಿಸಿ ಆಯುಷ್ಮಾನ್‌ ಭಾರತ, ಆರ್‌ಟಿಸಿ, ಸಂಧ್ಯಾ ಸುರಕ್ಷಾ ಕಾರ್ಡ್‌ ಮುಂತಾದ ಪ್ರಮಾಣಪತ್ರಗಳನ್ನು ವಿತರಣೆ ಮಾಡಲಾಯಿತು.

ಎಲ್ಲೆಲ್ಲಿ ಜಾರಿ?: ಬೀದರ್‌, ಕೊಪ್ಪಳ, ಬಳ್ಳಾರಿ, ಬೆಳಗಾವಿ, ಹಾವೇರಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ.

ಏನೇನು ಸೇವೆ?: ಪಿಂಚಣಿ, ಪಹಣಿ, ಆರೋಗ್ಯ ಕಾರ್ಡ್‌ ಸೇರಿ ಕೃಷಿ, ತೋಟಗಾರಿಕೆ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಸೇವೆಗಳು. ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌.

Coronavirus: ಆಸ್ಪತ್ರೆಯಿಂದ ದೇವೇಗೌಡ ಡಿಸ್ಚಾರ್ಜ್, ವೈದ್ಯರಿಗೆ  ಗೌಡರು ಕೊಟ್ಟ ಪುಸ್ತಕ ಯಾವುದು?
ಎಲ್ಲ ಶಾಲೆ, ಕಾಲೇಜಲ್ಲಿ ರಾಯಣ್ಣನ ಫೋಟೋ ಅಳವಡಿಕೆ: ಬೊಮ್ಮಾಯಿ

ಬೆಂಗಳೂರು: ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಕೆ ಮತ್ತು ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಯಣ್ಣನ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios