ಗೃಹಲಕ್ಷ್ಮಿ ಯೋಜನೆಗೆ ಉಚಿತ ಅರ್ಜಿ ಸಲ್ಲಿಕೆ: ಮನೆ ಬಾಗಿಲಿಗೆ ಬರ್ತಾರೆ ಪ್ರಜಾಪ್ರತಿನಿಧಿಗಳು
ಗೃಹಲಕ್ಷ್ಮಿ ಯೋಜನೆ (ಬಡ ಕುಟುಂಬದ ಮನೆ ಯಜಮಾನಿಗೆ 2000 ರೂ.) ಅರ್ಜಿಗಳನ್ನು ಉಚಿತವಾಗಿ ಭರ್ತಿ ಮಾಡಲು ಸರ್ಕಾರವೇ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡುತ್ತಿದೆ.
ಬೆಂಗಳೂರು (ಜು.14): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಮಹಿಳೆಯರ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಅನುಕೂಲ ಆಗುವಂತೆ ಗ್ರಾಮಕ್ಕೊಬ್ಬರಂತೆ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಇನ್ನು ಈ ಪ್ರಜಾಪ್ರತಿನಿಧಿಗಳು ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಅರ್ಜಿಯನ್ನು ಭರ್ತಿ ಮಾಡಿಕೊಂಡು ಹೋಗುತ್ತಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರ 2023-24ನೇ ಸಾಲಿನಲ್ಲಿ ಜಾರಿಗೊಳಿಸುತ್ತಿರುವ ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿದಾರರು Mobile App ಮೂಲಕವು ಸಹ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲು ಪ್ರಜಾ ಪ್ರತಿನಿಧಿ (Citizen Volunteer)ಗಳನ್ನು ಗೌರವ ಸೇವೆ ಆಧಾರದ ಮೇಲೆ ನೇಮಕ ಮಾಡಲು ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದ್ದಾರೆ. ಪ್ರತಿ 1 ಸಾವಿರ ಜನರಿಗೆ ಅಥವಾ ಒಂದು ಸಾವಿರ ಜನರ ಒಂದು ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲಾಗುತ್ತಿದೆ. ಇಬ್ಬರಲ್ಲಿ ಒಬ್ಬರು ಮಹಿಳಾ ಪ್ರಜಾಪ್ರತಿನಿಧಿಗಳ ಆಯ್ಕೆ ಕಡ್ಡಾಯವಾಗಿದೆ. ಒಂದು ತಿಂಗಳ ಮಟ್ಟಿಗೆ ಪ್ರಜಾಪ್ರತಿನಿಧಿ ಗಳ ನೇಮಕ ಮಾಡಲಾಗುತ್ತಿದೆ.
ಇಸ್ರೋ ರಾಕೆಟ್ ಪೂಜೆ ಖಂಡಿಸಿದ ಪ್ರಗತಿಪರರಿಗೆ ಚಂದ್ರಯಾನವೇ ಗೊತ್ತಿಲ್ಲ! ಮಂಗಳಯಾನವೆಂದು ಖಂಡನೆ
ಗೃಹಲಕ್ಷ್ಮಿ ಯೋಜನೆಯಡಿ ಪ್ರಜಾ ಪ್ರತಿನಿಧಿ ನೇಮಕಾತಿ ಕುರಿತು ಮಾರ್ಗಸೂಚಿ: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುವ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಉಂಟಾಗುವ ಒತ್ತಡವನ್ನು ತಪ್ಪಿಸಲು ಹಾಗೂ ಅರ್ಜಿದಾರರಿಗೆ ಅನುಕೂಲವಾಗುವಂತೆ Mobile App ಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವುದು, ಈ Mobile App ನ ಮೂಲಕ ಅರ್ಜಿ ಭರ್ತಿ ಮಾಡಿ ಸಲ್ಲಿಸಲು ಪುಜಾ ಪ್ರತಿನಿಧಿಯವರನ್ನು ನೇಮಕ ಮಾಡುವುದು.
ಜನರು ಯಾವುದೇ ಶುಲ್ಕ ಪಾವತಿಸಬೇಕಿಲ್ಲ: ಪ್ರಜಾಪ್ರತಿನಿಧಿಗಳು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ತಂತ್ರಜ್ಞಾನ ಅಡೆತಡೆಗಳನ್ನು ಎದುರಿಸುತ್ತಿರುವ ನಾಗರಿಕರಿಗೆ ಸಹಾಯ ಮಾಡುತ್ತಾರೆ. ಕರ್ನಾಟಕ ಸರ್ಕಾರವು ಅಭಿವೃದ್ಧಿ ಪಡಿಸಿದ ಮೊಬೈಲ್ ಅಪ್ಲಿಕೇಶನ್ ಅನ್ನು ಅವರು ನೋಂದಣಿಗಾಗಿ ಬಳಸುತ್ತಾರೆ. ಪ್ರಜಾ ಪ್ರತಿನಿಧಿಗಳು ಉದ್ದೇಶಿತ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡುತ್ತಾರೆ. ಜೊತೆಗೆ, ನಾಗರಿಕರ ಪರವಾಗಿ ಅರ್ಜಿ ಸಲ್ಲಿಸುತ್ತಾರೆ. ಪ್ರಜಾ ಪ್ರತಿನಿಧಿಗಳು ಈ ಸೇವೆಯನ್ನು ಸ್ವಯಂ ಪ್ರೇರಣೆಯಿಂದ ಮಾಡುತ್ತಿದ್ದು ಅವರಿಗೆ ಯಾವುದೇ ಶುಲ್ಕ ಪಾವತಿಸುವಂತಿಲ್ಲ.
ದಾಳಿ ಮಾಡಿದ ಚಿರತೆಯನ್ನು ಹೆಡೆಮುರಿಕಟ್ಟಿ ಹಂದಿಮರಿ ರೀತಿ ಹೊತ್ತೊಯ್ದ ಹಾಸನದ ಶೂರ!
- ಪ್ರಜಾ ಪ್ರತಿನಿಧಿಗಳ ಆಯ್ಕೆಗೆ ಮಾನದಂಡಗಳು:
- ಗೃಹಲಕ್ಷ್ಮಿ ಯೋಜನೆಗೆ ಮೊಬೈಲ್ ಅಪ್ಲಿಕೇಷನ್ ಮೂಲಕ ಅರ್ಜಿ ಸಲ್ಲಿಸುವ ಪ್ರಜಾ ಪ್ರತಿನಿಧಿಗಳು ಆಯಾ ತಾಲ್ಲೂಕಿನ ನಿವಾಸಿಗಳಾಗಿರಬೇಕು.
- ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು.
- ಗೃಹಲಕ್ಷ್ಮಿ ಯೋಜನೆಯಡಿ ಸ್ವಯಂ ಸೇವಕರಾಗಿ ಕೆಲಸ ನಿರ್ವಹಿಸಹಿಸಲು ಆಸಕ್ತಿಯುವುಳ್ಳವರಾಗಿರಬೇಕು.
- ಪ್ರಜಾ ಪ್ರತಿನಿಧಿ"ರವರನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಲಾಗುತ್ತದೆ.
ಸರ್ಕಾರಿ ಕೇಂದ್ರಗಳ ಒತ್ತಡ ತಗ್ಗಿಸಲು ಕ್ರಮ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರು ಗೃಹಲಕ್ಷ್ಮಿ ಯೋಜನೆಯ ಅರ್ಜಿದಾರರು ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್‌ಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಕೇಂದ್ರಗಳಲ್ಲಿ ಉಂಟಾಗಬಹುದಾಗ ಒತ್ತಡವನ್ನು ತಪ್ಪಿಸುವ ಸಲುವಾಗಿ Mobile App ಮೂಲಕವು ಸಹ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲು ಪ್ರಜಾ ಪ್ರತಿನಿಧಿ' (Citizen Volunteer)ಗಳನ್ನು ನೇಮಕ ಮಾಡಲಾಗುತ್ತಿದೆ.