ಸ್ಮಾರ್ಟ್ ಸಿಟಿ ಸ್ಪರ್ಧೆಯಲ್ಲಿ ರಾಜ್ಯದ 2 ಯೋಜನೆಗಳಿಗೆ ಪುರಸ್ಕಾರ

* ಸ್ಮಾರ್ಟ್ ಸಿಟಿ ಸ್ಪರ್ಧೆಯಲ್ಲಿ ರಾಜ್ಯದ 2 ಯೋಜನೆಗಳಿಗೆ ಪುರಸ್ಕಾರ
 * 6ನೇ ವಾರ್ಷಿಕೋತ್ಸವದ ನಿಮಿತ್ತ ನಡೆದ ಅಂತರ್ ರಾಜ್ಯ ಮಟ್ಟದ ಸ್ಪರ್ಧೆ
* ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ವತಿಯಿಂದ ರಾಷ್ಟ್ರ ಮಟ್ಟದಲ್ಲಿ ನಡೆದ ಸ್ಪರ್ಧೆ

Karnataka clinches 2 Award In Smart Cities events from Centre rbj

ಬೆಂಗಳೂರು, (ಜೂನ್.26): ಭಾರತದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಗಳ 6ನೇ ವಾರ್ಷಿಕೋತ್ಸವದ ನಿಮಿತ್ತ ನಡೆದ ಅಂತರ್ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಕರ್ನಾಟಕದ 2 ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಪುರಸ್ಕಾರ ಲಭಿಸಿದೆ.

ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ವತಿಯಿಂದ ರಾಷ್ಟ್ರ ಮಟ್ಟದಲ್ಲಿ ನಡೆದ ಈ ವಿವಿಧ ಸ್ತರದ ಸ್ಪರ್ಧೆಗಳಲ್ಲಿ ತುಮಕೂರು ಸ್ಮಾರ್ಟ್ ಸಿಟಿಯ ಡಿಜಿಟಲ್ ಗ್ರಂಥಾಲಯ ಯೋಜನೆಗೆ ರಾಷ್ಟ್ರ ಮಟ್ಟದಲ್ಲಿ 3ನೇ ಸ್ಥಾನ ದೊರಕಿದೆ.

ದಾವಣಗೆರೆ ಟಾಪ್‌ 15 ಸ್ಮಾರ್ಟ್‌ ಸಿಟಿ ಆಗಿದ್ದು ಹೇಗೆ?

ಕೋವಿಡ್ ತುರ್ತು ಪರಿಸ್ಥಿತಿಯ ನಿರ್ವಹಣೆಗೆ ನೀಡುವ ವಿಶೇಷ ಪುರಸ್ಕಾರ ಬೆಂಗಳೂರು ಸ್ಮಾರ್ಟ್ ಸಿಟಿಗೆ ಲಭಿಸಿದೆ. ಹಾಗೆಯೇ ಕಾಮಗಾರಿಗಳಲ್ಲಿ ಪದವೀಧರರಿಗೆ ಕೆಲಸ ನೀಡಿ ಇಂಟರ್ನ್ ಶಿಪ್ ನೀಡುವ ಯೋಜನೆಗೆ ಬೆಂಗಳೂರು ಸ್ಮಾರ್ಟ್ ಸಿಟಿಯನ್ನು ರನ್ನರ್ ಅಪ್ ಎಂದು ಘೋಷಿಸಲಾಗಿದೆ.

ಹವಾಮಾನ ಮೌಲ್ಯಮಾಪನಕ್ಕೆ ಸಂಬಂಧಿಸಿ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಗೆ ರಾಷ್ಟ್ರ ಮಟ್ಟದಲ್ಲಿ 3 ನಕ್ಷತ್ರಗಳನ್ನು ನೀಡಲಾಗಿದೆ. ಈ ಪುರಸ್ಕಾರಗಳನ್ನು ಪಡೆದ ಬೆಂಗಳೂರು ಮತ್ತು ತುಮಕೂರು ಸ್ಮಾರ್ಟ್ ಸಿಟಿ ಯೋಜನೆಯ ಅಧ್ಯಕ್ಷರಾಗಿರುವ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಶ್ರಮಿಸಿದ ಸಿಬ್ಬಂದಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios