Asianet Suvarna News

1610 ಕೋಟಿ ಪ್ಯಾಕೇಜ್: ಆಟೋ ರಿಕ್ಷಾ, ಕ್ಷೌರಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ!

1610 ಕೋಟಿ ಪ್ಯಾಕೇಜ್ ಘೋಷಣೆ| ಹೀಗಾಗಿ ತರಕಾರಿ ಹಣ್ಣು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್| ಕ್ಷೌರಿಕ, ಆಟೋ ರಿಕ್ಷಾದವರಿಗೆ ಬಂಪರ್| ಸುದ್ದಿಗೋಷ್ಟಿ ನಡೆಸಿ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ

Karnataka CM announces Special package for Auto Rickshaw drivers and barbers
Author
Bangalore, First Published May 6, 2020, 11:27 AM IST
  • Facebook
  • Twitter
  • Whatsapp

ಬೆಂಗಳೂರು(ಮೇ.06): ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಆಯ್ದ ಕ್ಷೇತ್ರಕ್ಕೆ ಸಹಾಯಧನ ನೀಡಿಕೆ ವಿಚಾರವಾಗಿ ಲಾಕ್‌ಡೌನ್‌ ಸಡಿಲಿಕೆ ವಿಚಾರವಾಗಿ ಸಿಎಂ ಯಡಿಯೂರಪಪ್ಪ ಮಹತ್ವದ ಸುದ್ದಿಗೋಷ್ಟಿ ನಡೆಸಿದ್ದು, 1610 ಕೋಟಿ ಪ್ಯಾಕೇಜ್ ಘೋಷಿಸಿದ್ದಾರೆ. ಆಟೋ ರಿಕ್ಷಾ, ಕ್ಷೌರಿಕರಿಗೆ, ಹೂವು, ತರಕಾರಿ ಹಣ್ಣು ಬೆಳೆಗಾರರಿಗೆ ವಿಶೇಷ ನೆರವು ಘೋಷಿಸಿದ್ದಾರೆ.  

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿಎಂ ಬಿ. ಎಸ್. ಯಡಿಯೂರಪ್ಪ ಸುದ್ದಿಗೋಷ್ಟಿ ನಡೆಸಿದ್ದಾರೆ. ಈ ವೇಳೆ 'ಕಳೆದ ಮೂರು ದಿನಗಳಿಂದ ಲಾಕ್ ಡೌನ್ ಸಡಿಲ ಮಾಡಿದ್ದೇವೆ. 3500 ಬಸ್ ಗಳಲ್ಲಿ ಕಾರ್ಮಿಕರನ್ನು ಅವರು ಅಪೇಕ್ಷೆ ಪಟ್ಟ ಜಾಗಕ್ಕೆ ಕಳಿಸಿದ್ದೇವೆ. ಅಲ್ಲದೇ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಬೇಕು. ಈ ನಿಟ್ಟಿನಲ್ಲಿ ಹಣಕಾಸು ಇಲಾಖೆ ಪ್ರಮುಖರ ಜೊತೆ ಚರ್ಚೆ ಮಾಡಿದ್ದು, 1610 ಕೋಟಿ ಪ್ಯಾಕೇಜ್ ಘೋಷಣೆ ಮಾಡುತ್ತಿದ್ದೇವೆ' ಎಂದಿದ್ದಾರೆ.

ಯಾವ ಕ್ಷೇತ್ರಕ್ಕೆ ಎಷ್ಟು ಪರಿಹಾರ ಘೋಷಣೆ?

* ಹೂವು ಬೆಳೆಗಾರರಿಗೆ: ಲಾಕ್‌ಡೌನ್‌ನಿಂದಾಗಿ ಎಲ್ಲ ದೇವಾಲಯಗಳು ಮುಚ್ಚಿರುವುದರಿಂದ ಹಬ್ಬ  ಮದುವೆ, ಸಭೆ-ಸಮಾರಂಭಗಳು ಹಾಗೂ ಮತ್ತಿತರ ಯಾವುದೇ ಕಾರ್ಯಕ್ರಮಗಳು ನಡೆಯದಿರುವುದರಿಂದ ಹೂವುಗಳ ಬೇಡಿಕೆ ಇಲ್ಲದೇ ಹೂವು ಬೆಳೆಗಾರರು ತಾವು ಬೆಳೆದಿರುವ ಎಲ್ಲ ಹೂವುಗಳನ್ನು ತಮ್ಮ ಹೊಲದಲ್ಲೇ  ನಾಶ ಮಾಡುವ ಪರಿಸ್ಥಿತಿ ಉದ್ಭವಿಸಿದೆ. ಒಟ್ಟಾರೆ 11687 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆದಿರುವ ಹೂವುಗಳು ಮಾರಾಟವಾಗದೆ ರೈತರಿಗೆ ನಷ್ಟವಾಗಿದೆ. ಇದರಿಂದ ಎಲ್ಲ ರೀತಿಯ ಹೂವುಗಳು ಬೆಳೆದಿರುವ ರೈತರಿಗೆ ನೆರವಾಗಲು ನಮ್ಮ ಸರ್ಕಾರವು ಹೆಕ್ಟೇರ್ ಗೆ ಗರಿಷ್ಠ 25,000/- ರೂ.ಗಳಂತೆ ಪರಿಹಾರವನ್ನು ಘೋಷಿಸುತ್ತದೆ.

* ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ: ಈ ವರ್ಷ ರಾಜ್ಯದಲ್ಲಿ ತರಕಾರಿ ಮತ್ತು ಹಣ್ಣುಗಳು ಇಳುವರಿಯು ಉತ್ತಮವಾಗಿರುತ್ತದೆ. ಆದರೆ ಕೋವಿಡ್ – 19 ರಿಂದ ಆಗಿರುವ ರಾಷ್ಟ್ರಾದ್ಯಂತ ಲಾಕ್ ಡೌನ್ ನಿಂದಾಗಿ ರೈತರು ತಮ್ಮ ಬೆಳೆಗಳಿಗೆ ಸೂಕ್ತ ದರಗಳನ್ನು ಪಡೆಯಲು ಸಾಧ್ಯವಾಗಿರುವುದಿಲ್ಲ. ನಷ್ಟಕ್ಕೆ ಒಳಗಾಗಿರುವ ತರಕಾರಿ ಹಾಗೂ ಹಣ್ಣು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಪ್ಯಾಕೇಜ್ ಘೋಷಣೆ. 

ಕೊರೋನಾ ಕಂಟಕದ ಮಧ್ಯೆ ನೀರಿನ ಸಂಕಷ್ಟ: ಮಾಹಾ ಮೊರೆ ಹೋದ ಬಿಎಸ್‌ವೈ...!

* ಕ್ಷೌರಿಕರಿಗೆ: ಕೋವಿಡ್ 19 ರಿಂದಾಗಿ ರೈತರಷ್ಟೇ ಅಲ್ಲದೆ ಅಲ್ಲದೆ ಪಟ್ಟಣದ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಗಸರ ಹಾಗೂ ಕ್ಷೌರಿಕರ ವೃತ್ತಿಯಲ್ಲಿ ತೊಡಗಿರುವವರು ಒಂದೂವರೆ ತಿಂಗಳಿಗೆ ಮೇಲ್ಪಟ್ಟು ತಮ್ಮ ಕಸುಬನ್ನು ನಡೆಸಲಾಗಿದೇ ತಮ್ಮ ದೈನಂದಿನ ಆದಾಯವನ್ನು ಕಳೆದುಕೊಂಡಿರುತ್ತಾರೆ. ಇವರಿಗೆ ನೆರವಾಗಲು ರಾಜ್ಯದಲ್ಲಿರುವ ಅಂದಾಜು 60,000 ಅಗಸರ ವೃತ್ತಿಯಲ್ಲಿ ಇರುವ ಹಾಗೂ 230000 ಕ್ಷೌರಿಕ ವೃತ್ತಿಯಲ್ಲಿ ಇರುವವರಿಗೆ 5000/- ರೂ.ಗಳನ್ನು ಒಂದು ಬಾರಿ ಪರಿಹಾರ.

* ಆಟೋ ಚಾಲಕರಿಗೆ: ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗಿದೇ ತಮ್ಮ ಆದಾಯವನ್ನು ಕಳೆದುಕೊಂಡಿರುತ್ತಾರೆ. ರಾಜ್ಯದಲ್ಲಿ ಇರುವ ಇಂತಹ 7,75,000 ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ 5000 ರೂ.

* ಸಣ್ಣ ಹಾಗೂ ಅತಿ ಸಣ್ಣ ಉದ್ದಿಮೆದಾರರು: ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳನ್ನು ನಡೆಸುವ ಉದ್ದಿಮೆದಾರರು ತಮ್ಮ ಉದ್ದಿಮೆಗಳನ್ನು ತೆರೆಯಲಾಗಿದೆ ಹಾಗೂ ತಮ್ಮ ಉತ್ಪನ್ನಗಳನ್ನು ಸಾಗಿಸಿ ಮಾರಾಟ ಮಾಡಲಾಗದೆ ನಷ್ಟವನ್ನು ಅನುಭವಿಸಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ವಹಿವಾಟು ಚೇತರಿಕೆಯಾಗಲು ಕೆಲವು ತಿಂಗಳ ಸಮಯ ಬೇಕಾಗಿರುವುದರಿಂದ ಇವರಿಗೆ ಸರಕಾರ ನೆರವು ನೀಡುವುದು ಅನಿವಾರ್ಯವಾಗಿದೆ. ಆದ್ದರಿಂದ  ಅತಿಸಣ್ಣ, ಸಣ್ಣ ಹಾಗೂ ಉದ್ಯಮ ಉದ್ದಿಮೆಗಳ ವಿದ್ಯುತ್ ಬಿಲ್ಲಿನ ಫಿಕ್ಸ್ಡ್ ಚಾರ್ಜ್‌ನ್ನು ಎರಡು ತಿಂಗಳ ಅವಧಿಗೆ ಪೂರ್ತಿಯಾಗಿ ಮನ್ನಾ.

* ಹಾಗೆಯೇ ಬೃಹತ್ ಕೈಗಾರಿಕೆಗಳಿಗೆ ಅವರು ವಿದ್ಯುತ್ ಇಲ್ಲಿನ ಫಿಕ್ಸ್ಡ್ ಚಾರ್ಜ್ ನ ಪಾವತಿಯನ್ನು ಎರಡು ತಿಂಗಳ ಅವಧಿಗೆ ಯಾವುದೇ ಬಡ್ಡಿ ಅಥವಾ ದಂಡ ಇಲ್ಲದೇ ಬಡ್ಡಿ ರಹಿತವಾಗಿ ಮುಂದೂಡಿಕೆ. 

* ಎಲ್ಲ ಪ್ರವರ್ಗದ ಗ್ರಾಹಕರುಗಳಿಗೆ ವಿದ್ಯ್ ಚ್ಚಕ್ತಿ  ಮೊತ್ತವನ್ನು ಪಾವತಿಸಲು ಈ ಕೆಳಕಂಡ ಸವಲತ್ತು / ಪರಿಹಾರ.

ವಲಸೆ ಕಾರ್ಮಿಕರು: ಒಡಿಶಾ ಮುಖ್ಯಮಂತ್ರಿ ಪಟ್ನಾಯಕ್‌ ಜೊತೆ ಸಿಎಂ BSY ಚರ್ಚೆ

* ನಿಗದಿತ ಸಮಯದೊಳಗೆ ವಿದ್ಯುತ್ ಬಿಲ್ಲಿನ ಮೊತ್ತವನ್ನು ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹ ರಿಯಾಯಿ.

* ವಿಳಂಬ ಪಾವತಿಗಾಗಿ ವಿದ್ಯುತ್ ಬಿಲ್ಲಿನ ಮೊತ್ತದ ಮೇಲೆ ವಿಧಿಸುವ ಬಡ್ಡಿ ಕಡಿಮೆಗೊ. ವಿದ್ಯುತ್ ಬಿಲ್ಲಿನ ಮೊತ್ತವನ್ನು ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹಧನ.

* ಕಂದಾಯ ಬಾಕಿ ಮೊತ್ತವನ್ನು ಕಂತುಗಳಲ್ಲಿ/ಭಾಗವಾಗಿ ಪಾವತಿಸಲು ಅವಕಾಶ. ಕಂದಾಯ ಬಾಕಿ ಮೊತ್ತವನ್ನು ಪಾವತಿಸದಿರುವ ಗ್ರಾಹಕರಿಗೆ 30.06.2020 ರವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಇರುವುದು. 

* ಈಗಾಗಲೇ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದು ನೇಕಾರರಿಗೆ ಈ ಲಾಕ್ ಡೌನ್ ನಿಂದಾಗಿ ಮತ್ತಷ್ಟು ನಷ್ಟ ಉಂಟಾಗಿದೆ. ಸರ್ಕಾರ ಈಗಾಗಲೇ ನೇಕಾರರಿಗೆ ನೆರವಾಗಲು109 ಕೋಟಿ ರೂ.ಗಳ ವೆಚ್ಚದಲ್ಲಿ “ನೇಕಾರರ ಸಾಲ ಮನ್ನಾ ಯೋಜನೆ”ಯನ್ನು ಘೋಷಿಸಿದೆ. ಈ ಯೋಜನೆಗೆ ಈಗಾಗಲೇ ಹಿಂದಿನ ವರ್ಷ 29 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಉಳಿದಿರುವ 80 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಿ ನೇಕಾರರಿಗೆ ಹೊಸ ಸಾಲಗಳು ದೊರಕಿಸಿಕೊಡಲು ಅನುವು. 

* ಜನವರಿ 01 2019 ರಿಂದ ಮಾರ್ಚ್ 31, 2019 ರ ಅವಧಿಯೊಳಗೆ 1 ಲಕ್ಷ ರೂ. ಒಳಗಿನ ತಮ್ಮ ಸಾಲವನ್ನು ಮರುಪಾವತಿಸಿರುವ ನೇಕಾರರಿಗೂ ಸಹ ಅವರು ಪಾವತಿಸಿರುವ ಮೊತ್ತವನ್ನು ಮರುಪಾವತಿ ಮಾಡುವ ಮೂಲಕ ಯೋಜನೆಯ ಸೌಲಭ್ಯ.

* ಇದಲ್ಲದೆ “ನೇಕಾರರ ಸಮ್ಮಾನ್ ಯೋಜನೆ” ಎಂಬ ಹೊಸ ಯೋಜನೆಯನ್ನು ಘೋಷಣೆ. ಈ ಯೋಜನೆಯಡಿಯಲ್ಲಿ ರಾಜ್ಯದಲ್ಲಿರುವ ಅಂದಾಜು 54,000 ಕೈಮಗ್ಗ ನೇಕಾರರಿಗೆ ಪ್ರತಿ ವರ್ಷ 2000/- ರೂ.ಗಳಂತೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ. 

* ರಾಜ್ಯದಲ್ಲಿರುವ 15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರ ಪೈಕಿ ಈಗಾಗಲೇ 11.80 ಲಕ್ಷ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ 2000 ರೂ.ಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ.

ಮುದ್ದಾದ ಕರುವಿನೊಂದಿಗೆ ರಾಜಾಹುಲಿ ಆಟ.. ಕೊರೋನಾ ಸಂಕಟ ಮರೆಸುವ ವಿಡಿಯೋ!

* ಇನ್ನುಳಿದ 4 ಲಕ್ಷ ಕಟ್ಟಡ ಕಾರ್ಮಿಕರಿಗೆ ಅವರವರ ಬ್ಯಾಂಕ್ ಖಾತೆಯ ವಿವರಗಳು ದೊರೆತ ನಂತರ 2,000 ರೂ.ಗಳನ್ನು ವರ್ಗಾಯಿಸಲು ಕ್ರಮ ಕ್ರಮ. ಮುಂದುವರೆದು ಈ ಎಲ್ಲ ಕಟ್ಟಡ ಕಾರ್ಮಿಕರಿಗೆ ಈಗಾಗಲೇ ನೀಡಿರುವ 2,000 ರೂ.ಗಳ ಜೊತೆಗೆ ಹೆಚ್ಚುವರಿಯಾಗಿ 3,000 ರೂ.ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ.

ಈ ಮೇಲ್ಕಂಡ ಎಲ್ಲ ಪರಿಹಾರ ಸೌಲಭ್ಯಗಳನ್ನು ಅಂದಾಜು ರೂ. 1610 ಕೋಟಿಗಳ ವೆಚ್ಚದಲ್ಲಿ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios