Asianet Suvarna News Asianet Suvarna News

ಕಾಸರಗೋಡಿನ ಕೆಲ ಊರುಗಳ ಹೆಸರು ಮಲಯಾಳಂಗೆ: ಕೊನೆಗೂ ಎಚ್ಚೆತ್ತ ಸಿಎಂ

* ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರು ಬದಲಾವಣೆ
* ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
* ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಕೋರಿ ಪತ್ರ ಬರೆಯುವುದಾಗಿ ಭರವಸೆ

Karnataka CM B S Yediyurappa to talk to Kerala CM on renaming villages rbj
Author
Bengaluru, First Published Jun 28, 2021, 3:38 PM IST

ಬೆಂಗಳೂರು, (ಜೂನ್.28): ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರನ್ನು ಬದಲಾಯಿಸಿರುವುದಕ್ಕೆ ಸಿಎಂ ಬಿಎಸ್‌ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಇಂದು (ಸೋಮವಾರ)  ಯಡಿಯೂರಪ್ಪ ಅವರನ್ನು  ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾಯಿಸಲು ಹೊರಟಿರುವುದನ್ನ ಸಿಎಂ ಗಮನಕ್ಕೆ ತಂದರು.

ಕಾಸರಗೋಡಿನ ಕೆಲ ಊರುಗಳ ಹೆಸರು ಮಲಯಾಳಂಗೆ, ಕೇರಳಕ್ಕೆ ​ಎಚ್‌ಡಿಕೆಭಾವೈಕ್ಯತೆಯ ಪಾಠ

ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿದ  ಮುಖ್ಯಮಂತ್ರಿಗಳು ಈ ವಿಷಯವು ತಮ್ಮ ಗಮನಕ್ಕೆ ಈಗಾಗಲೇ ಬಂದಿದ್ದು,  ಕೂಡಲೇ ಕೇರಳ ಸರ್ಕಾರದ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.

ಕಾಸರಗೋಡು ಮತ್ತು ಮಂಜೇಶ್ವರ ಭಾಗದಲ್ಲಿ ಕನ್ನಡಿಗರು ಮತ್ತು ಮಲಯಾಳ ಭಾಷಿಗರು ಪರಸ್ಪರ ಸಹಬಾಳ್ವೆಯಿಂದ ಸಹೋದರರಂತೆ  ಬದುಕನ್ನು ನಿರ್ವಹಿಸುತ್ತಿದ್ದು, ಕನ್ನಡ ಭಾಷೆಯ ಸಾಂಸ್ಕೃತಿಕ, ಐತಿಹಾಸಿಕ ಮಹತ್ವವುಳ್ಳ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವುದು ಸೂಕ್ತವಲ್ಲ ಎಂಬ ವಿಷಯವನ್ನು ಕೇರಳ ಸರ್ಕಾರದ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಗ್ರಾಮಗಳ ಹೆಸರುಗಳ ಬದಲಾವಣೆಯ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಕೋರಿ ಪತ್ರ ಬರೆಯುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಪ್ರಯತ್ನ ಕೇರಳ ಸರ್ಕಾರದ ಗಮನಕ್ಕೆ ಬಾರದೆಯೇ ಕೇವಲ ಸ್ಥಳೀಯ ಸಂಸ್ಥೆಗಳ ಹಂತದಲ್ಲಿಯೇ ನಡೆದಿರಬಹುದೆಂಬ ವಿಷಯವನ್ನು ಈ ಸಂದರ್ಭದಲ್ಲಿ  ಪ್ರಾಧಿಕಾರದ ಅಧ್ಯಕ್ಷರು ಮುಖ್ಯಮಂತ್ರಿಗಳ ಗಮನಕ್ಕೆ  ತಂದರು.

Follow Us:
Download App:
  • android
  • ios