ಡಿಸಿಎಂ ಡಿಕೆಶಿ ಅವರ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷೆಯ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾವೇ 5 ವರ್ಷ ಪೂರ್ಣಗೊಳಿಸುವುದಾಗಿ ಹೇಳಿರೋದ್ರಿಂದ ಪಕ್ಷದ ರಾಷ್ಟ್ರೀಯ ನಾಯಕರ ತೀರ್ಮಾನವೇ ಅಂತಿಮ
ಕೋಲಾರ (ಅ.9): ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ರೇಸ್‌ನಲ್ಲಿರುವ ಕುರಿತು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರು ತಾವೇ 5 ವರ್ಷ ಅಧಿಕಾರ ಮಾಡುವುದಾಗಿ ಹೇಳಿದ್ದಾರೆ.
ಸಿಎಂ ಹೇಳಿದ ಮೇಲೆ ನಾವು ಹೇಳುವ ಅವಶ್ಯಕತೆ ಇಲ್ಲ. ಶಿವಕುಮಾರ್ ಸಿಎಂ ರೇಸ್‌ನಲ್ಲಿರುವ ಬಗ್ಗೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸಚಿವರು ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ಸತೀಶ್ ಜಾರಕಿಹೊಳಿಯನ್ನ ಬೆಂಬಲಿಸಿದ ಪತಿಗೆ ಸಚಿವರ ಎದುರೇ ಪತ್ನಿಯಿಂದ ಕಪಾಳಮೋಕ್ಷ!
ಸುಪ್ರೀಂ ಕೋರ್ಟ್ ಸಿಜೆಐ ಬಿ.ಆರ್.ಗವಾಯಿ ಮೇಲೆ ವಕೀಲರೊಬ್ಬರು ಚಪ್ಪಲಿ ಎಸೆದಿರುವುದನ್ನು ಸಿಎಂ ಸಿದ್ದರಾಮಯ್ಯ ಅವರು ಕಠಿಣ ಶಬ್ದಗಳಿಂದ ಖಂಡಿಸಿದ್ದಾರ. ನ್ಯಾಯಮೂರ್ತಿಗಳ ಮೇಲೆ ಚಪ್ಪಲಿ ಎಸೆತ ಆಗಬಾರದಿತ್ತು ಎಂದರು.
