ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆಯುವ ವೋಟರ್ ಅಧಿಕಾರ್ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರೊಂದಿಗೆ ಭಾಗವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ರ್‍ಯಾಲಿಯಲ್ಲಿ ಭಾಗವಹಿಸಿದ್ದಾರೆ.
ಬೆಂಗಳೂರು (ಆ.29): ಬಿಹಾರ ಚುನಾವಣಾ ಪ್ರಚಾರ ಅಖಾಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಇಳಿಯುತ್ತಿದ್ದು, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆಯುತ್ತಿರುವ ವೋಟರ್ ಅಧಿಕಾರ್ ಯಾತ್ರೆಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ಗಾಂಧಿ ಅವರೊಂದಿಗೆ ಶುಕ್ರವಾರ ಭಾಗವಹಿಸಲಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ರ್‍ಯಾಲಿಯಲ್ಲಿ ಭಾಗವಹಿಸಿದ್ದು, ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: ರಾಹುಲ್ ಗಾಂಧಿ ಬಿಹಾರ ರ್ಯಾಲಿ ವೇಳೆ ಪ್ರಧಾನಿ ಮೋದಿ, ದಿವಂಗತ ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದ ಆರೋಪಿ ರಿಜ್ವಿ ಬಂಧನ
ಶುಕ್ರವಾರ ಬೆಂಗಳೂರಿನಿಂದ ಉತ್ತರಪ್ರದೇಶದ ಗೋರಖ್‌ಪುರಕ್ಕೆ ವಿಶೇಷ ವಿಮಾನದಲ್ಲಿ ತೆರಳಲಿರುವ ಅವರು ಅಲ್ಲಿಂದ ಸಿವಾನ್ ಜಿಲ್ಲೆಗೆ ತೆರಳಿ ಮತಗಳ್ಳತನ ವಿರುದ್ಧ ಹಮ್ಮಿಕೊಂಡಿರುವ ರ್‍ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆದಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ರಾಹುಲ್‌ಗಾಂಧಿ ರ್‍ಯಾಲಿ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಬೆಂಬಲ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಹಾರ ಚುನಾವಣಾ ಪ್ರಚಾರ ಅಖಾಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಇಳಿಯುತ್ತಿದ್ದು, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆಯುತ್ತಿರುವ ವೋಟರ್ ಅಧಿಕಾರ್ ಯಾತ್ರೆಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ಗಾಂಧಿ ಅವರೊಂದಿಗೆ ಶುಕ್ರವಾರ ಭಾಗವಹಿಸಲಿದ್ದಾರೆ.
