ಹೈಕಮಾಂಡ್‌ ಭೇಟಿಗಾಗಿ ಜೂ.21 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ ಭೇಟಿಗೆ ಅವಕಾಶ ಸಿಕ್ಕರೆ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳನ್ನೂ ಭೇಟಿಯಾಗಿ ಬರಲಿದ್ದಾರೆ. ಸೌಜನ್ಯ ಭೇಟಿ ವೇಳೆ ರಾಜ್ಯದ ವಿಚಾರಗಳ ಬಗ್ಗೆಯೂ ಪ್ರಸ್ತಾಪಿಸುವ ಸಾಧ್ಯತೆಯಿದೆ.

ಬೆಂಗಳೂರು(ಜೂ.15):  ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೋರಿದ್ದಾರೆ.

ಹೈಕಮಾಂಡ್‌ ಭೇಟಿಗಾಗಿ ಜೂ.21 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ ಭೇಟಿಗೆ ಅವಕಾಶ ಸಿಕ್ಕರೆ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳನ್ನೂ ಭೇಟಿಯಾಗಿ ಬರಲಿದ್ದಾರೆ. ಸೌಜನ್ಯ ಭೇಟಿ ವೇಳೆ ರಾಜ್ಯದ ವಿಚಾರಗಳ ಬಗ್ಗೆಯೂ ಪ್ರಸ್ತಾಪಿಸುವ ಸಾಧ್ಯತೆಯಿದೆ.

ಸರ್ಕಾರಿ ಆಸ್ಪತ್ರೆ ಸೇವಾ ಗುಣಮಟ್ಟ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಇನ್ನು ಈವರೆಗೂ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳ ಕಚೇರಿಯಿಂದ ಅಧಿಕೃತ ಭೇಟಿ ಬಗ್ಗೆ ಸಮಯವಕಾಶದ ಬಗ್ಗೆ ಮಾಹಿತಿ ಬಂದಿಲ್ಲ. ಅವಕಾಶ ದೊರೆತ ತಕ್ಷಣ ಭೇಟಿ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.