Asianet Suvarna News Asianet Suvarna News

ವಿಜಯಪುರ: ಉತ್ತರ ಕರ್ನಾಟಕ ಜೀವನಾಡಿಗೆ ಸಿಎಂ ಬಾಗೀನ ಅರ್ಪಣೆ!

ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಇವರ ಸಹಯೋಗದಲ್ಲಿ ಆ.21ರಂದು ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರೀ ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. 

Karnataka cm siddaramaiah performed bagina to alamatti dam today rav
Author
First Published Aug 20, 2024, 10:14 PM IST | Last Updated Aug 20, 2024, 10:14 PM IST

- ಷಡಕ್ಷರಿ ಕಂಪೂನವರ್ ಏಷ್ಯಾನೆಟ್ ಸುವರ್ಣ ನ್ಯೂಸ್

ವಿಜಯಪುರ (ಆ.20) : ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಇವರ ಸಹಯೋಗದಲ್ಲಿ ಆ.21ರಂದು ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರೀ ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. 

ಉ.ಕರ್ನಾಟಕದ ಜೀವನಾಡಿಗೆ ಸಿಎಂ ಬಾಗೀನ ಅರ್ಪಣೆ!

ಉತ್ತರ ಕರ್ನಾಟಕ ಜೀವನದಿ, ಜೀವನಾಡಿ ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ಪ್ರಯುಕ್ತ ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ.  ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಖಾತೆ ಸಚಿವರಾದ ಡಿ.ಕೆ.ಶಿವಕುಮಾರ ಘನ ಉಪಸ್ಥಿತಿ ವಹಿಸಲಿದ್ದಾರೆ. ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ,  ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆದ ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪೂರ ಸೇರಿದಂತೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಜಿಲ್ಲಾಡಳಿತ, ಕೆಬಿಜೆಎನ್ಎಲ್ ನಿಂದ ಭರದ ಸಿದ್ದತೆ!

ಸಿಎಂ ಸಿದ್ದರಾಮಯ್ಯ ಅವರು ಆಲಮಟ್ಟಿಯ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆಬಿಜೆಎನ್‍ಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನ್‍ರಾಜ್ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಂಗಳವಾರ ಆಲಮಟ್ಟಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.

ಫ್ರೀ ಫ್ರೀ ಫ್ರೀ ಯಾರಿಗೆ ಬೇಕು ಫ್ರೀ... ಮಳೆಗೆ ಸೋರುತ್ತಿರುವ ಪೀಣ್ಯ ಫ್ಲೈಓವರ್ ಅಧ್ವಾನ ನೋಡಿ ಪುನೀತ್ ಕೆರೆಹಳ್ಳಿ ವ್ಯಂಗ್ಯ!

ಮುಂಜಾಗ್ರತಾ ಕ್ರಮವಾಗಿ ಪರಿಶೀಲನೆ!

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಜಂಟಿಯಾಗಿ ಪರಿಶೀಲನೆ ನಡೆಸಿದ ಅವರು ಬಾಗಿನ ಅರ್ಪಿಸುವ ಸ್ಥಳಕ್ಕೆ ಭೇಟಿ ನೀಡಿ, ಪೂಜಾ ಸ್ಥಳ, ಅಲ್ಲಿ ಹೂವಿನ ಅಲಂಕಾರ, ಶಾಮಿಯಾನ ವ್ಯವಸ್ಥೆ, ಸೂಕ್ತ ಆಸನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದ ಅವರು, ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.  ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಂಕರ ಮಾರಿಹಾಳ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಬಿಟಿಡಿಎ ಮುಖ್ಯ ಅಭಿಯಂತರ ಬಸವರಾಜ, ನಿಡಗುಂದಿ ತಹಶೀಲ್ದಾರ ಎ.ಡಿ.ಅಮರಾವಡಗಿ ಆಲಮಟ್ಟಿ ಡ್ಯಾಂ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಟಿ.ವಿ.ದೊಡಮನಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಎಲ್ಲೆಡೆ ಸೂಕ್ತ ಪೊಲೀಸ್ ಬಂದೋಬಸ್ತ!

ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಆಲಮಟ್ಟಿ ಆಣೆಕಟ್ಟು ವ್ಯಾಪ್ತಿಯಲ್ಲಿ ಸೂಕ್ತ ಪೊಲೀಸ್ ಬಂದೊಬಸ್ತ್ ನಿಯೋಜನೆ ಮಾಡಲಾಗಿದೆ.  ಬೆಳಗಾವಿ ಐಜಿಪಿ ನೇತೃತ್ವದಲ್ಲಿ ಇಬ್ಬರು ಎಸ್.ಪಿ, 3 ಜನ ಹೆಚ್ಚುವರಿ ಎಸ್.ಪಿ, 4 ಜನ ಡಿವೈಎಸ್ಪಿ, 9 ಜನ ಸಿಪಿಐ, 27 ಜನ ಪಿಎಸ್ಐ, 25 ಜನ ಎಎಸ್ಐ, 74 ಜನ ಹೆಡ್ ಕಾನ್ಸ್ ಟೇಬಲ್, 202 ಕಾನ್ಸ್ ಟೇಬಲ್, 30 ಜನ ಮಹಿಳಾ ಪೊಲೀಸರು, 3 ಡಿಎಆರ್ ವಾಹನವನ್ನು ಬಂದೋಬಸ್ತಗೆ ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು.

ಸಿದ್ಧಾರೂಢರ ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ; ಎಲ್ಲೆಡೆಯೂ ಓಂಕಾರ ನಾದ!

ಡ್ಯಾಂ ಕ್ರಸ್ಟ್ ಗೇಟ್‌ಗಳಿಗೆ ದೀಪಾಲಂಕಾರ!

ಇನ್ನೂ ಸಿಎಂ ಆಗಮನ ಹಿನ್ನೆಲೆ ಡ್ಯಾಂ‌ನ 26 ಕ್ರಸ್ಟ ಗೇಟ್‌ಗಳಿಗೆ ದೀಪಾಲಂಕಾರ ಮಾಡಲಾಗಿದೆ. ಕೇಸರಿ-ಬಿಳಿ-ಹಸಿರು ಬಣ್ಣಗಳಿಂದ ಡ್ಯಾಂ‌ನ ಗೇಟ್‌ಗಳು ಮಿನುಗುತ್ತಿವೆ. ಜೊತೆಗೆ ಬಣ್ಣ ಬಣ್ಣದ ಮಿನುಗು ದೀಪಗಳು ಡ್ಯಾಂ ಅಂದವನ್ನ ಇಮ್ಮಡಿಗೊಳಿಸಿವೆ. ಸಿಎಂ ಆಗಮಿಸುವ ಸ್ಥಳ‌ ಸೇರಿದಂತೆ ಡ್ಯಾಂ ಆವರಣವನ್ನ ಮದುವನಗಿತ್ತಿಯಂತೆ ಸಿಂಗರಿಸಲಾಗಿದೆ.

Latest Videos
Follow Us:
Download App:
  • android
  • ios