Asianet Suvarna News Asianet Suvarna News

ಇಂದಿರಾ ಕ್ಯಾಂಟೀನ್ ಹೊಸ ಮೆನು ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ: ರಾಗಿಮುದ್ದೆ, ಮಂಗಳೂರು ಬನ್ಸ್ ಸೇರ್ಪಡೆ!

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ವರ್ಷ ಆರಂಭಕ್ಕೂ ಮುನ್ನವೇ ಇಂದಿರಾ ಕ್ಯಾಂಟೀನ್ ಹೊಸ ಮೆನು ಕಾರ್ಡ್‌ ಬಿಡುಗಡೆ ಮಾಡಿದ್ದಾರೆ.

Karnataka CM Siddaramaiah revealed Indira Canteen New Menu card sat
Author
First Published Dec 20, 2023, 8:21 PM IST

ಬೆಂಗಳೂರು (ಡಿ.20): ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮುದ್ದೆ ಭಾಗ್ಯ ಸಿಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಹೊಸ ವರ್ಷ ಆರಂಭಕ್ಕೂ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್‌ ಊಟದ ಹೊಸ ಮೆನುವನ್ನು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ರಾಗಿಮುದ್ದೆ-ಸೊಪ್ಪಿನ ಸಾರು, ಮಂಗಳೂರು ಬನ್ಸ್ ಸೇರಿ ರಾಜ್ಯದ ಎಲ್ಲ ಪ್ರದೇಶದ ಊಟಕ್ಕೂ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಆದರೆ, 2017ರಿಂದ ಈವರೆಗೆ ಒಂದೇ ಮಾದರಿಯ ಬೆಲೆಯನ್ನು ನಿಗದಿಪಡಿಸಲಾಗಿದೆ.

ಬೆಂಗಳೂರಿನಲ್ಲಿ 2017ರಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಯಿತು. ಆರಂಭದಿಂದಲೂ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮುದ್ದೆ, ಚಪ್ಪಾತಿ ನೀಡುವುದಕ್ಕೆ ಬೇಡಿಕೆ ಕೇಳಿ ಬರುತ್ತಿತ್ತು. ಇದೀಗ ಇಂದಿರಾ ಕ್ಯಾಂಟೀನ್‌ಗಳಲ್ಲಿ ಊಟ ಮಾಡುವವರಿಗೆ ಮುದ್ದೆ ಭಾಗ್ಯ ನೀಡುವುದಕ್ಕೆ ಸರ್ಕಾರವೇ ಈಗ ಅನುಮತಿ ನೀಡಿದೆ. ಈವರೆಗೆ ಮಧ್ಯಾಹ್ನ ಮತ್ತು ರಾತ್ರಿ ಕೇವಲ ರೈಸ್‌ ಬಾತ್‌ ಅಥವಾ ಅನ್ನ, ಸಾಂಬರ್‌, ಮೊಸರನ್ನ ಮಾತ್ರ ವಿತರಣೆ ಮಾಡಲಾಗುತ್ತಿತ್ತು. ಹಿರಿಯ ನಾಗರಿಕರು, ಸಕ್ಕರೆ ಕಾಯಿಲೆ ಇರುವವರು ಸೇರಿದಂತೆ ಮೊದಲಾದವರು ಕೇವಲ ರೈಸ್‌ ಪದಾರ್ಥದ ಊಟ ಬೇಡ, ಮುದ್ದೆ, ಚಪ್ಪಾತಿ ನೀಡುವಂತೆ ಕೇಳುತ್ತಿದ್ದರು. ಈ ವಿಚಾರ ಸರ್ಕಾರ ಮತ್ತು ಬಿಬಿಎಂಪಿ ಗಮನಕ್ಕೆ ಬಂದಿತ್ತು. ಹಾಗಾಗಿ, ಹೊಸ ವರ್ಷದಿಂದ ಇಂದಿರಾ ಕ್ಯಾಂಟೀನ್‌ ನಲ್ಲಿ ಕಡ್ಡಾಯವಾಗಿ ಮುದ್ದೆ ಪೂರೈಕೆಗೆ ತೀರ್ಮಾನಿಸಲಾಗಿದೆ.

ಕೋವಿಡ್ ಹೊಸ ವೈರಸ್‌ಗೆ 2 ಬಲಿ: ಶತಕದ ಗಡಿ ತಲುಪಿದ ಸೋಂಕಿತರ ಸಂಖ್ಯೆ!

ಮುದ್ದೆಯಿಂದ ಇಂದಿರಾ ಕ್ಯಾಂಟೀನ್‌ಗೆ ಬರಲಿದೆ ಹೊಸಕಳೆ: ಸಮರ್ಪಕ ನಿರ್ವಹಣೆ ಕೊರತೆ, ಕಳಪೆ ಆಹಾರ ಪೂರೈಕೆ ಸೇರಿದಂತೆ ಮೊದಲಾದ ಕಾರಣದಿಂದ ಇಂದಿರಾ ಕ್ಯಾಂಟೀನ್‌ಗಳು ತಮ್ಮ ಕಳೆ ಕಳೆದುಕೊಂಡಿದ್ದವು. ಗ್ರಾಹಕರ ಸಂಖ್ಯೆಯಲ್ಲಿಯೂ ಇಳಿಕೆಯಾಗಿತ್ತು. ಇದೀಗ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮುದ್ದೆ ನೀಡುವುದಕ್ಕೆ ತೀರ್ಮಾನಿಸಲಾಗಿದೆ. ಇದರಿಂದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮತ್ತೆ ಗ್ರಾಹಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. ಜತೆಗೆ, ಹಳೇ ಗತವೈಭವಕ್ಕೆ ಮರಳುವ ಸಾಧ್ಯತೆ ದಟ್ಟವಾಗಿದೆ.

Karnataka CM Siddaramaiah revealed Indira Canteen New Menu card sat

ಅಕ್ರಮ ತಡೆಗೆ ಡಿಜಿಟಲಿಕರಣ: ಇಂದಿರಾ ಕ್ಯಾಂಟೀನ್‌ ಗ್ರಾಹಕರ ಸಂಖ್ಯೆಯಲ್ಲಿ ಗೋಲ್‌ ಮಾಲ್‌ ಮಾಡಲಾಗುತ್ತಿದೆ. ಸುಳ್ಳು ಲೆಕ್ಕ ನೀಡಿ ರಿಯಾಯಿತಿ ಹಣ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ, ಬಿಬಿಎಂಪಿ ಅಧಿಕಾರಿಗಳು ಪ್ರತಿಯೊಂದನ್ನು ಡಿಜಿಟಲಿಕರಣದ ಮೂಲಕ ಪಾರದರ್ಶಕ ವ್ಯವಸ್ಥೆ ಮಾಡಲು ನಿರ್ಧರಿಸಿದ್ದಾರೆ. ನಗರದ ಯಾವುದೇ ಇಂದಿರಾ ಕ್ಯಾಂಟೀನ್‌ಗೆ ಗ್ರಾಹಕ ತೆರಳಿ ಊಟ ಅಥವಾ ಉಪಹಾರದ ಕೋಪನ್ ಪಡೆದರೆ ಆ ಮಾಹಿತಿ ಕೇಂದ್ರ ಕಚೇರಿಗೆ ತಲುಪುವಂತೆ ತಂತ್ರಜ್ಞಾನ ಅಭಿವೃದ್ಧಿ ಪಡಿಸಲಾಗಿದೆ. ಇನ್ನು ಸ್ವಚ್ಛತೆ ಸೇರಿದಂತೆ ಇನ್ನಿತರೆ ಕಾರ್ಯಗಳಿಗೆ ಪ್ರತ್ಯೇಕವಾಗಿ ಆ್ಯಪ್‌ ಅಭಿವೃದ್ಧಿ ಪಡಿಸಲಾಗುತ್ತಿದೆ.

ಕೋವಿಡ್ 4ನೇ ಅಲೆ ಕಟ್ಟಿಹಾಕಲು ಆರೋಗ್ಯ ಇಲಾಖೆ ಪ್ಲ್ಯಾನ್ ರಿವೀಲ್ ಮಾಡಿದ ಸಚಿವ ದಿನೇಶ್ ಗುಂಡೂರಾವ್!

Follow Us:
Download App:
  • android
  • ios