ಇಂದು ಮೋದಿ-ಸಿದ್ದು ಭೇಟಿ: ಜಿಎಸ್‌ಟಿ ಸೇರಿ ಹಲವು ಚರ್ಚೆ

ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಜಿಎಸ್‌ಟಿ ಪಾಲು, ರೈಲ್ವೆ, ನೀರಾವರಿ ಸೇರಿದಂತೆ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ಅನುದಾನ ಕುರಿತು ಚರ್ಚೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ 

Karnataka CM Siddaramaiah will Be Meet PM Narendra Modi on November 29th in Delhi grg

ಬೆಂಗಳೂರು(ನ.29):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ದೆಹಲಿ ತಲುಪಿದ್ದು ಶುಕ್ರವಾರ ಬೆಳಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ಮಧ್ಯಾಹ್ನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. 

ಸಚಿವ ಸಂಪುಟ ಸಭೆ ಮುಗಿದ ಬಳಿಕ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ ಮುಖ್ಯಮಂತ್ರಿ ಅವರು ರಾತ್ರಿ 10.30ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದರು. 

ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತೆ ಸಂಕಷ್ಟ?

ರಾತ್ರಿ ದೆಹಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿದ್ದು, ಇಂದು(ಶುಕ್ರವಾರ) ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಜಿಎಸ್‌ಟಿ ಪಾಲು, ರೈಲ್ವೆ, ನೀರಾವರಿ ಸೇರಿದಂತೆ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ಅನುದಾನ ಕುರಿತು ಚರ್ಚೆ ನಡೆಸಲಿದ್ದಾರೆ. 

ಬಳಿಕ ಮಧ್ಯಾಹ್ನ 2 ಗಂಟೆಗೆ ಸಿಡಬ್ಲುಸಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಹೈಕಮಾಂಡ್ ನಾಯಕರೊಂದಿಗೆ ರಾಜ್ಯ ರಾಜಕೀಯ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ. ನಂತರ ಶುಕ್ರವಾರ ರಾತ್ರಿಯೇ ನಗರಕ್ಕೆ ಹಿಂತಿರುಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.

ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಸಿದ್ದರಾಮಯ್ಯ ಕೂಡ ದೆಹಲಿಗ

ಬೆಂಗಳೂರು/ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗುರುವಾರ ದೆಹಲಿಗೆ ತೆರಳಿದ್ದಾರೆ. 
ಸಿದ್ದರಾಮಯ್ಯ ಅವರು ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿ ಸಲು ದೆಹಲಿಗೆ ತೆರಳುತ್ತಿದ್ದಾರೆ. ಈ ವೇಳೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ಅವರನ್ನು ಡಿ.ಕೆ.ಶಿವಕುಮಾರ್ ಅವರ ಜೊತೆಗೂಡಿ ಭೇಟಿಯಾಗಿ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ. ಅಲ್ಲದೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡುವ ಬಗ್ಗೆಯೂ ರಾಜಕೀಯ ವಲಯದಲ್ಲಿ ಗುಲ್ಲೆದ್ದಿದ್ದು, ಈ ಬಗ್ಗೆ ಚರ್ಚೆ ನಡೆಯುವುದೇ ಅಥವಾ ಇಲ್ಲವೇ ಎಂಬುದು ಖಚಿತಪಟ್ಟಿಲ್ಲ. 

ರಾಜ್ಯಪಾಲರ ಅಧಿಕಾರಕ್ಕೆ ಕೊಕ್: ಸಂಪುಟ ನಿರ್ಣಯ

ಬುಧವಾರ ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ವೇಣುಗೋಪಾಲ್ ಅವರನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೆ, ಪ್ರಿಯಾಂಕಾ ಗಾಂಧಿಯ ವರನ್ನೂ ಭೇಟಿಯಾದರು. ಶುಕ್ರವಾರ ಮಧ್ಯಾಹ್ನ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಸೇರಿ ವಿವಿಧ ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಇದೇ ವೇಳೆ, ಸಿದ್ದರಾಮಯ್ಯ ಕೆಲ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

2 ವರ್ಷ ಬಳಿಕ ಸಂಪುಟ ಪುನಾರಚನೆ ಆದ್ರೆ ಒಳಿತು: ದಿನೇಶ್ ಗುಂಡೂರಾವ್ 

ಶಿವಮೊಗ್ಗ: ಸದ್ಯಕ್ಕೆ ಸಚಿವ ಸಂಪುಟ ಪುನರ್ ರಚನೆ ಸಂಬಂಧ ಯಾವುದೇ ಬೆಳವಣಿಗೆ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.  ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, 2 ವರ್ಷದ ಅವಧಿ ಬಳಿಕ ಸಂಪುಟ ಪುನರ್‌ರಚನೆ ಆದರೆ ಒಳಿತು. ಇದರಿಂದ ಹೊಸಬರಿಗೆ ಅವಕಾಶ ಸಿಕ್ಕಂತಾಗುತ್ತದೆ. ನಾವೇ ಇರ ಬೇಕೆಂದರೆ ಹೇಗೆ? ಹೊಸಬರಿಗೂ ಅವಕಾಶ ನೀಡಬೇಕಾ ಗುತ್ತದೆ ಎಂದರು. ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ಪೈಪೋಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪೈಪೋಟಿ ಆದ್ರೆ ಒಳ್ಳೆಯದೆ ಅಲ್ವಾ? ಎಂದು ಉತ್ತರಿಸಿದರು.

Latest Videos
Follow Us:
Download App:
  • android
  • ios