ತುಮಕೂರು ಸಿದ್ದಗಂಗಾ ಮಠದ ವಿದ್ಯಾರ್ಥಿಗಳ ಅನ್ನ ಕಸಿದ ಸರ್ಕಾರ

ಕಲ್ಲಡ್ಕ ಪ್ರಭಾಕರ್ ಭಟ್ ಅವರ ಶಾಲೆಯ ಅನ್ನದಾಸೋಹಕ್ಕೆ ಈ ಹಿಂದೆ ಇದ್ದ ಕಾಂಗ್ರೆಸ್ ಕತ್ತರಿ ಹಾಕಿತ್ತು. ಇದೀಗ ಬಿಜೆಪಿ ಸರ್ಕಾರ  ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆಯುತ್ತಿದ್ದ ಅನ್ನದಾಸೋಹಕ್ಕೆ ಕತ್ತರಿ ಹಾಕಿದ್ದು, ಇದನ್ನು ರಾಜ್ಯ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. 

Karnataka Congress alleges state BJP govt stop aid for Siddaganga anna dasoha

ಬೆಂಗಳೂರು, (ಫೆ.04): ತುಮಕೂರಿನ  ಸಿದ್ದಗಂಗಾ ಮಠದಲ್ಲಿ ಪ್ರತಿನಿತ್ಯ ನಡೆಯುವ ಅನ್ನದಾಸೋಹಕ್ಕೆ ಸರ್ಕಾರ ಕತ್ತರಿ ಹಾಕಿದೆ ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"

ಇಂದು (ಮಂಗಳವಾರ) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್ ಹಾಗೂ ವಿ.ಎಸ್. ಉಗ್ರಪ್ಪ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಅನ್ನದಾಸೋಹ ಯೋಜನೆಯನ್ನು ಬಿಜೆಪಿ ಸರ್ಕಾರ ರದ್ದುಗೊಳಿಸಿದೆ ಎಂದು ಕಿಡಿಕಾರಿದರು.

ಕಲ್ಲಡ್ಕ ಪ್ರಭಾಕರ್ ಭಟ್ ಒಡೆತನದ ಶಾಲೆಗಳಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ

ಅನ್ನದಾಸೋಹ ಯೋಜನೆ ರದ್ಧು ಮಾಡಿದ್ದು ಏಕೆ? ಯೋಜನೆ ರದ್ದು ಮಾಡಿದರೆ ವೃದ್ಧರು, ಅಂಗವಿಕಲರು ಏನಾಗಬೇಡ?  ಸಂಸ್ಥೆಗಳಿಗೆ ಆಹಾರ ಧಾನ್ಯ ನೀಡುವ ಈ ಯೋಜನೆ ನಿಲ್ಲಿಸಿದ್ದು ಏಕೆ? ಪ್ರಶ್ನಿಸಿದರು.

ಅಂದು ಕಾಂಗ್ರೆಸ್ ಸರ್ಕಾರದ ವೇಳೆ ಶ್ರೀರಾಮ ಶಾಲೆಗೆ ಅಕ್ಕಿ ನಿಲ್ಲಿಸಿದರು ಎಂದು ಬಿಜೆಪಿ ನಾಯಕರು ಬಾಯಿ ಬಡಿದುಕೊಂಡಿದ್ದರು. ರಮಾನಾಥ್ ರೈ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದರು. ಈಗ ಅನ್ನದಾಸೋಹ ಯೋಜನೆಯನ್ನು ಸಂಪೂರ್ಣ ರದ್ದು ಮಾಡಿದ್ದಾರೆ. ಇದರಿಂದ ಅನಾಥಾಶ್ರಮ, ವೃದ್ಧಾಶ್ರಮಗಳ ಕಥೆ ಏನಾಗಬೇಡ? ಕಿಡಿಕಾರಿದರು.

ಶ್ರೀಗಳ ಆಶಯದಂತೆ ಭಕ್ತರಿಗೆ ಅನ್ನದ ಮಹತ್ವ ತಿಳಿಸಿದ ವಿದ್ಯಾರ್ಥಿ

464 ಸಂಸ್ಥೆಗಳು, 41 ಸಾವಿರ ಫಲಾನುಭವಿಗಳಿಗೆ ಅನ್ನ ದಾಸೋಹದಡಿ ಕೊಡುವ ಅಕ್ಕಿ,  ಗೋಧಿ ನಿಲ್ಲಿಸಲಾಗಿದೆ.  ಸಿದ್ದಗಂಗಾ ಮಠದಲ್ಲಿ 7359 ವಿದ್ಯಾರ್ಥಿಗಳಿದ್ದಾರೆ. ಪ್ರತಿ ತಿಂಗಳು 73, 590 ಕೆ.ಜಿ ಅಕ್ಕಿ, 36,794 ಕೆ.ಜಿ. ಗೋಧಿ ಕೊಡಲಾಗುತ್ತಿತ್ತು.  ದಾಸೋಹದ ಅಡಿ ಈ ಹಿಂದಿನ ಸರ್ಕಾರ ನೀಡುತ್ತಿತ್ತು ಎಂದರು. 

ಇದೀಗ ಬಿಜೆಪಿ ಸರ್ಕಾರ ಕಳೆದ 3 ತಿಂಗಳ ಹಿಂದೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯಿಂದ ಈ ಯೋಜನೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಮತ್ತು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ದಾಖಲೆ ಸಮೇತ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Karnataka Congress alleges state BJP govt stop aid for Siddaganga anna dasoha

Latest Videos
Follow Us:
Download App:
  • android
  • ios