ನಡೆದಾಡುವ ದೇವರನ್ನೇ ವಿಧಾನಸೌಧದಿಂದ ಹೊರಹಾಕಿದ ಕಾಂಗ್ರೆಸ್‌! ಕೇಸರಿ ಮೇಲಿನ ದ್ವೇಷವೆಂದ ಬಿಜೆಪಿ

ವಿಧಾನಸೌಧದ ಒಳಗಿದ್ದ ನಡೆದಾಡುವ ದೇವರೆಂದು ಖ್ಯಾತರಾದ ಶ್ರೀ ಶಿವಕುಮಾರ ಸ್ವಾಮೀಜಿ ಫೋಟೋಗಳನ್ನು ಹೊರಗೆ ಎಸೆಯಲಾಗಿದೆ. 

Karnataka Congress Minister threw out of Shivakumara Swamiji photo from Vidhana Soudha sat

ಬೆಂಗಳೂರು (ಜೂ.1): ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದು ಪ್ರಸಿದ್ಧರಾಗಿದ್ದಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮೀಜಿ ಅವರ ವಿಧಾನಸೌಧದೊಳಗಿದ್ದ ಫೋಟೋಗಳನ್ನು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೊರಗೆ ಹಾಕಿದೆ. ಕನಿಷ್ಠ ಗೌರವದಿಂದ ಫೋಟೋವನ್ನು ಕಾರ್ಯಕರ್ತರಿಗೆ ಕೊಟ್ಟಿದ್ದರೂ ಅದನ್ನು ಸಂರಕ್ಷಣೆ ಮಾಡುತ್ತಿದ್ದರು.

ರಾಜ್ಯದಲ್ಲಿ ಸಂಪೂರ್ಣ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ಶಾಸಕರು, ಸಚಿವರು ಹಾಗೂ ಮುಖ್ಯಮಂತ್ರಿಗಳು ತಮ್ಮ ಅಧಿಕಾರವನ್ನು ಆರಂಭಿಸಿದ್ದಾರೆ. ವಿಧಾನಸೌಧದಲ್ಲಿ ಈಗಾಗಲೇ ಎಲ್ಲ ಸಚಿವರಿಗೂ ಕೊಠಡಿಗಳನ್ನು ಕೊಡಲಾಗಿದ್ದು, ಹಳೆಯ ಕೊಠಡಿಯನ್ನು ಸ್ವಚ್ಛಗೊಳಿಸಿ ಸುಣ್ಣ, ಬಣ್ಣ ಬಳಿಸಿ ತಮಗೆ ಬೇಕಾದಂತೆ ಆಲ್ಟ್ರೇಷನ್‌ ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ, ಈ ವೇಳೆ ದೇಶದ ನಡೆದಾಡುವ ದೇವರೆಂದೇ ಖ್ಯಾತರಾದ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಫೋಟೋಗಳನ್ನು ಬೇಕಾಬಿಟ್ಟಿಯಾಗಿ ಹೊರಗೆ ಎಸೆದಿದ್ದಾರೆ. 

ನಮ್ಮನ್ನ ಬಳಸ್ಕೊಂಡು ಅಕ್ರಮವಾಗಿ ಹಣ ಗಳಿಸಿರೋ ಜನಾರ್ಧರೆಡ್ಡಿ, ನಮಗೇ ರಣಹೇಡಿಗಳು ಅಂತಾನೆ!

ಕಾಂಗ್ರೆಸ್‌ ದುರಹಂಕಾರದ ಪರಮಾವಧಿ: ಇನ್ನು ಈ ಕುರಿತು ರಾಜ್ಯ ಬಿಜೆಪಿ ಟ್ವೀಟ್‌ ಮಾಡಿದ್ದು, "ಕಾಂಗ್ರೆಸ್‌ ಸರ್ಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ! ಇದೆ. ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ  ಪರಮ ಪೂಜನೀಯ ಡಾ।। ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ! ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಈ ಕೂಡಲೆ ರಾಜ್ಯದ ಜನತೆಯ ಕ್ಷಮೆ ಕೋರಿ ಪೂಜ್ಯ ಸ್ವಾಮೀಜಿಯವರ ಭಾವಚಿತ್ರವನ್ನು ಸಕಲ ಗೌರವಗಳೊಂದಿಗೆ ಪುನಃ ಲಗತ್ತಿಸಲು ಆಗ್ರಹಿಸುತ್ತೇವೆ" ಎಂದು ತಿಳಿಸಿದೆ.

ಮಾಜಿ ಸಿಎಂಗಳ ಫೋಟೋ ಕೂಡ ಬೀದಿಗೆ: ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಜೆಡಿಎಸ್‌ ಪಕ್ಷವು ಶೇ.10 ಸ್ಥಾನಗಳನ್ನು ಗೆಲ್ಲುವಲ್ಲಿಯೂ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದ ಕೊಠಡಿಯೇ ಇಲ್ಲದಂತೆ ಜೆಡಿಎಸ್‌ ನಾಯಕರು ಹೊರಗೆ ಬಿದ್ದಿದ್ದಾರೆ. ಇನ್ನು ಕಾಂಗ್ರೆಸ್‌ನ ಸಚಿವರು ತಮಗೆ ಬೇಕಾದ ಕೊಠಡಿಗಳನ್ನು ಆಯ್ಕೆ ಮಾಡಿಕೊಂಡು ಅದನ್ನು ತಮಗೆ ಬೇಕಾದ ರೀತಿಯಲ್ಲಿ ನವೀಕರಣ ಮಾಡಿಸಿಕೊಳ್ಳುತ್ತಿದ್ದಾರೆ. ಹೀಗಾಗಿ, ಈ ಹಿಂದೆ ಕೊಠಡಿಯಲ್ಲಿ ಇರಿಸಲಾಗಿದ್ದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರ ಫೋಟೋಗಳನ್ನು ಕೂಡ ವಿಧಾನಸೌಧದ ಕೊಠಡಿಗಳಿಂದ ಬೀದಿಗೆ ಎಸೆಯಲಾಗಿದೆ.

ಗ್ಯಾರಂಟಿ ಬಗ್ಗೆಯೂ ಟೀಕೆ ಮಾಡಿದ ಬಿಜೆಪಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಕಾಂಗ್ರೆಸ್‌ ಬೇಕಾಬಿಟ್ಟಿಯಾಗಿ ಸುಳ್ಳು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಈಗ ಗೆದ್ದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿಗಳನ್ನು ಈಡೇರಿಸಲಾಗದೇ ಕುಂಟು ನೆಪ ಹೇಳುತ್ತಿದ್ದಾರೆ. ಅಧಿಕಾರಕ್ಕಾಗಿ ಜನರ ಲೂಟಿಗಿಳಿದಿರುವ ಕಾಂಗ್ರೆಸ್ ಈಗ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಮೇಲೆ ಬರೆ ಎಳೆಯುತ್ತಿದೆ" ಎಂದು ಬಿಜೆಪಿ ಆರೋಪ ಮಾಡಿದೆ. 

ಗ್ಯಾರಂಟಿ ಜಾರಿಗೂ ಮುನ್ನವೇ ಬೆಂಗಳೂರು ಜನತೆಗೆ ಬಿಗ್‌ ಆಫರ್‌ ಕೊಟ್ಟ ಸರ್ಕಾರ

ನಾಳೆ ಮಹತ್ವದ ಸಂಪುಟ ಸಭೆ- ಗ್ಯಾರಂಟಿ ಜಾರಿ: ರಾಜ್ಯದಲ್ಲಿ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆಗೂ ಮುನ್ನ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಬಳಿಕ 11 ಗಂಟೆಗೆ ಸಂಪುಟ ಸಭೆ ನಡೆಯಲಿದೆ. ಸಂಪುಟ ಸಭೆಯಲ್ಲಿ 5 ಗ್ಯಾರಂಟಿ ಯೋಜನೆ ವಿಚಾರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗುತ್ತದೆ. ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಗ್ಯಾರಂಟಿ ಸ್ಕೀಮ್ ಬಗ್ಗೆ ಸರ್ಕಾರದ ತೆಗೆದುಕೊಂಡ ನಿರ್ಣಯವನ್ನ ತಿಳಿಸಲಿದ್ದಾರೆ.

Latest Videos
Follow Us:
Download App:
  • android
  • ios