Asianet Suvarna News Asianet Suvarna News

ಕೊವಿಡ್ ಕಟ್ಟಿಹಾಕಲು ಸಜ್ಜಾದ ಸರ್ಕಾರ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚನೆ

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಸಚಿವರಾದ ಎಚ್. ಸಿ.ಮಹದೇವಪ್ಪ, ಶರಣು ಪ್ರಕಾಶ್ ಪಾಟೀಲ್ ಹಾಗೂ ಎಂ. ಸಿ ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

 

Karnataka Covid case increase formation of Cabinet Sub Committee for Covid Control at bengaluru rav
Author
First Published Dec 22, 2023, 7:06 PM IST

ಬೆಂಗಳೂರು (ಡಿ.22): ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಿದೆ. 

ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮೂವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಲಾಗಿದೆ. ಸಚಿವರಾದ ಎಚ್. ಸಿ.ಮಹದೇವಪ್ಪ, ಶರಣು ಪ್ರಕಾಶ್ ಪಾಟೀಲ್ ಹಾಗೂ ಎಂ. ಸಿ ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಸಮುದಾಯಕ್ಕೆ ಹಬ್ಬಿದ ಸೋಂಕು: ಕೊಚ್ಚಿಯಲ್ಲಿ ಜ್ವರವಿರುವ ಶೇ.30ರಷ್ಟು ಜನರಲ್ಲಿ ಕೋವಿಡ್ ಸೋಂಕು

ಈ ಸಮಿತಿಯು ಕೊವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲಿದೆ. ಔಷಧಿ ಖರೀದಿ, ಮಾಸ್ಕ್ ಕಡ್ಡಾಯ ಸೇರಿದಂತೆ ಎಲ್ಲಾ ವಿಷಯವನ್ನು ಈ ಸಮಿತಿ ನಿರ್ಧರಿಸಲಿದೆ.

ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ(ಡಿಸೆಂಬರ್ 21) ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ಮಾಡಿದ್ದರು. ಈ ಸಭೆಯಲ್ಲಿ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದರು. ಅಲ್ಲದೇ ಕೋವಿಡ್ ನಿರ್ವಹಣೆಗೆಂದು ಒಂದು ಸಂಪುಟ ಉಪಸಮಿತಿ ರಚಿಸುವುದಾಗಿ ಹೇಳಿದ್ದರು. 

 

ಹಿಂದಿನ ಕೋವಿಡ್‌ ತಪ್ಪು ಮತ್ತೆ ಆಗಕೂಡದು: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಅದರಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಸಂಪುಟ ಉಪಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ.

Follow Us:
Download App:
  • android
  • ios