Asianet Suvarna News Asianet Suvarna News

ಕರ್ನಾಟಕದಲ್ಲಿ ಇಳಿಕೆಯತ್ತ ಕೊರೋನಾ, ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು

* ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ
* ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು
* ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 6.61

Karnataka Covid Update 9785 New Cases and 144 Death On June 12 rbj
Author
Bengaluru, First Published Jun 12, 2021, 8:06 PM IST

ಬೆಂಗಳೂರು, (ಜೂನ್.12): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದ್ದು,  ಇಂದು (ಶನಿವಾರ) 9,785 ಕೊರೋನಾ ಪಾಸಿಟಿವ್ ಕೇಸ್ ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 27,57,324ಕ್ಕೆ ಏರಿಕೆಯಾಗಿದೆ.

 ಇದೇ ಅವಧಿಯಲ್ಲಿ ಮಹಾಮಾರಿಗೆ 144 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 32,788ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಹಳ್ಳಿ ಸುತ್ತುತ್ತಿರುವ ವೈದ್ಯರು, ತಗ್ಗಿದ ಕೊರೋನಾ ಸೋಂಕು..!

ಇನ್ನು ಕಳೆದ 24 ಗಂಟೆಯಲ್ಲಿ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 21,614 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 25,32,719ಕ್ಕೆ ಏರಿಕೆಯಾಗಿದೆ. ಇನ್ನು 1,91,796 ಸಕ್ರೀಯ ಪ್ರಕರಣಗಳಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 6.61ಕ್ಕೆ ಇಳಿದಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 2,454 ಜನರಿಗೆ ಸೋಂಕು ಖಚಿತವಾಗಿದ್ದು, ಬೆಂಗಳೂರಿನಲ್ಲಿ 21 ಜನರು ನಿಧನರಾಗಿದ್ದಾರೆ.

Follow Us:
Download App:
  • android
  • ios