Asianet Suvarna News Asianet Suvarna News

ಡಿ.ಕೆ.ಶಿವಕುಮಾರ್‌ ಹೂಡಿಕೆಯ ನ್ಯೂಸ್ ಚಾನೆಲ್‌ ಬ್ಯಾಂಕ್‌ ಅಕೌಂಟ್‌ ಸ್ಥಗಿತ..!

201 ಕೋಟಿ ರು. ಆದಾಯ ತೆರಿಗೆ ಬಾಕಿ ಪಾವತಿಸಬೇಕು ಎಂದು ಕಾಂಗ್ರೆಸ್ ಪಕ್ಷದ 9 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ. 'ಜೈ ಹಿಂದ್ ಟೀವಿ' ಚಾನೆಲ್‌ನ ಮಾತೃ ಸಂಸ್ಥೆಯಾದ 'ಭಾರತ್ ಬ್ರಾಡ್ ಕಾಸ್ಟಿಂಗ್ ಕಂಪನಿ'ಯ ಎಲ್ಲಾ ಬ್ಯಾಂಕ್ ಖಾತೆಗಳನ್ನು ನಿಷ್ಕ್ರಿಯಗೊಳಿಸುವಂತೆ ಕೇಂದ್ರ ಜಿಎಸ್‌ಟಿ ಮಂಡಳಿ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ. 

Karnataka DCM DK Shivakumar Investment News Channel Bank Account Closed grg
Author
First Published Feb 18, 2024, 10:17 AM IST | Last Updated Feb 18, 2024, 10:17 AM IST

ತಿರುವನಂತಪುರ(ಫೆ.18): ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೂಡಿಕೆ ಮಾಡಿದ್ದಾರೆ ಎನ್ನಲಾದ ಕೇರಳದ ನ್ಯೂಸ್ ಚಾನಲ್‌ವೊಂದರ ಬ್ಯಾಂಕ್ ಖಾತೆಗಳನ್ನು ತೆರಿಗೆ ಇಲಾಖೆ ಶನಿವಾರ ಸ್ಥಗಿತಗೊಳಿಸಿದೆ.

201 ಕೋಟಿ ರು. ಆದಾಯ ತೆರಿಗೆ ಬಾಕಿ ಪಾವತಿಸಬೇಕು ಎಂದು ಕಾಂಗ್ರೆಸ್ ಪಕ್ಷದ 9 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ. 'ಜೈ ಹಿಂದ್ ಟೀವಿ' ಚಾನೆಲ್‌ನ ಮಾತೃ ಸಂಸ್ಥೆಯಾದ 'ಭಾರತ್ ಬ್ರಾಡ್ ಕಾಸ್ಟಿಂಗ್ ಕಂಪನಿ'ಯ ಎಲ್ಲಾ ಬ್ಯಾಂಕ್ ಖಾತೆಗಳನ್ನು ನಿಷ್ಕ್ರಿಯಗೊಳಿಸುವಂತೆ ಕೇಂದ್ರ ಜಿಎಸ್‌ಟಿ ಮಂಡಳಿ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. 

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ₹5000 ಸಿಗ್ತಿದೆ: ಡಿ.ಕೆ.ಶಿವಕುಮಾರ್‌

ಭಾರತ್ ಬ್ರಾಡ್‌ಕಾಸ್ಟಿಂಗ್ ಕಂಪನಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಈ ಚಾನೆಲ್‌ನಲ್ಲಿ ಡಿ.ಕೆ. ಶಿವಕುಮಾ‌ರ್ ಅವರ ಹೂಡಿಕೆಗೆ ಸಂಬಂಧಿಸಿ ದಂತೆ ಮಾಹಿತಿ ಕಲೆ ಹಾಕಲು ಇತ್ತೀಚೆಗೆ ಸಿಬಿಐ ನೋಟಿಸ್‌ ನೀಡಿತ್ತು. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಈಕುರಿತುಪ್ರತಿಕ್ರಿಯಿಸಿರುವ ಚಾನಲ್‌ನ ಮುಖ್ಯಸ್ಥ, ಕಾಂಗ್ರೆಸ್ ನಾಯಕ ಶಿಜು, ತೆರಿಗೆ ಇಲಾಖೆ ತೆಗೆದುಕೊಂಡಿರುವ ನಿರ್ಣಯ ಅನಿರೀಕ್ಷಿತವಾಗಿದೆ.
ಅಲ್ಲದೇ ಈ ಕುರಿತಾದ ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿರುವಾಗ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ಚಾನೆಲ್ ಸಂಕಷ್ಟಕ್ಕೆ ಸಿಲುಕಿದೆ. ಅಲ್ಲದೇ ಕಳೆದ ವರ್ಷ ಡಿ.22ರಂದು ಸಿಬಿಐ ನೀಡಿದ್ದನೋಟಿಸ್‌ಗೆ ನಾವು ಉತ್ತರಿಸಿದ್ದೇವೆ. ಆದರೂಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದಿದ್ದಾರೆ.

Latest Videos
Follow Us:
Download App:
  • android
  • ios