ಬೆಂಗಳೂರು (ಸೆ.20):  ಕರ್ನಾಟಕದ ಮೊದಲ ‘ಕಿಸಾನ್‌ ರೈಲು’ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ (ಕೆಎಸ್‌ಆರ್‌)ದಿಂದ ದೆಹಲಿಯ ನಿಜಾಮುದ್ದೀನ್‌ಗೆ ಶನಿವಾರ ಸಂಜೆ ಪ್ರಯಾಣ ಬೆಳೆಸಿತು. 

ಶನಿವಾರ ಸಂಜೆ 4.45ಕ್ಕೆ ಬೆಂಗಳೂರಿನಿಂದ ಹೊರಟಿರುವ ಈ ರೈಲು ಸೋಮವಾರ ರಾತ್ರಿ 11.45ಕ್ಕೆ ನಿಜಾಮುದ್ದೀನ್‌ ತಲುಪಲಿದೆ. ಈ ರೈಲಿಗೆ ಕೆಎಸ್‌ಆರ್‌ ನಿಲ್ದಾಣದ ಸ್ಟೇಷನ್‌ ಮಾಸ್ಟರ್‌ ಹಸಿರು ನಿಶಾನೆ ತೋರಿದ್ದಾರೆ. ಕಿಸಾನ್‌ ರೈಲಿನಲ್ಲಿ ಕೃಷಿ ಉತ್ಪನ್ನಗಳಾದ ಕ್ಯಾಬೇಜ್‌, ಕ್ಯಾಪ್ಸಿಕಂ, ಮೆಣಸಿನಕಾಯಿ, ಹಾಲು, ಮಾಂಸ, ಮೀನು ಸೇರಿದಂತೆ ಬೇಗನೆ ಕೆಡಬಲ್ಲ ಪದಾರ್ಥಗಳನ್ನು ಸಾಗಿಸಬಹುದಾಗಿದೆ.

ಡ್ರೋನ್‌ ಮೂಲಕ ಪಾಕ್‌ನಿಂದ ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ! .

 ಅದಕ್ಕಾಗಿ ಕೋಲ್ಡ್‌ ಸ್ಟೋರೇಜ್‌ ಬೋಗಿಗಳನ್ನು ಅಳವಡಿಸಲಾಗಿದೆ. ಇದು ಬಹು ವಿಧದ ರೈಲಾಗಿದ್ದು, ಒಂದು ಸಂಸ್ಥೆ ಅಥವಾ ಒಬ್ಬ ವ್ಯಕ್ತಿಗೆ ಸಂಬಂಧಿಸಿದ ಸರಕುಗಳನ್ನು ಮಾತ್ರ ರೈಲಿನಲ್ಲಿ ತೆಗೆದುಕೊಂಡು ಹೋಗುವುದಿಲ್ಲ. ರೈತರು ಬೆಳೆದ ಯಾವುದೇ ತರಕಾರಿಗಳನ್ನು ಸಾಗಣೆ ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.