ದೆಹಲಿ ಗಣರಾಜ್ಯೋತ್ಸವದಲ್ಲಿ ಮಿಂಚಲಿದೆ 'ಲಕ್ಕುಂಡಿ ಶಿಲ್ಪಕಲೆಯ ಸ್ತಬ್ಧಚಿತ್ರ': ಏನಿದರ ವಿಶೇಷ?

ಕರ್ನಾಟಕದ ಲಕ್ಕುಂಡಿ ಗ್ರಾಮದ ಶಿಲ್ಪಕಲೆಯನ್ನು ಒಳಗೊಂಡ ಸ್ತಬ್ಧಚಿತ್ರವು ೨೦೨೪ ರ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲಿದೆ. ಈ ಸ್ತಬ್ಧಚಿತ್ರವು ಲಕ್ಕುಂಡಿಯ ಐತಿಹಾಸಿಕ ದೇವಾಲಯಗಳು ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುತ್ತದೆ, ಸರ್ವಧರ್ಮ ಸಮನ್ವಯತೆಯ ಸಂದೇಶವನ್ನು ಸಾರುತ್ತದೆ.

 

Karnataka depicting Lakkundi sculpture tableau for Delhi Republic Day sat

ನವದೆಹಲಿ (ಜ.22): ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ 'ಲಕ್ಕುಂಡಿ- ಶಿಲ್ಪಕಲೆಯ ತೊಟ್ಟಿಲು' ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.

ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಲು ಹೊರಟಿದೆ ಎಂದು ವಾರ್ತಾ ಇಲಾಖೆಯ ಆಯುಕ್ತ ಹೇಮಂತ್‌ ಎಂ. ನಿಂಬಾಳ್ಕರ್‌ ತಿಳಿಸಿದರು.

ಕರ್ನಾಟಕಕ್ಕೆ ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಅತ್ಯಂತ ಸ್ಮರಣೀಯವಾದುದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ನಮ್ಮ ರಾಜ್ಯದಲ್ಲಿ ಎಲ್ಲಾ ಧರ್ಮಗಳ ದೇವಾಲಯಗಳಿವೆ. ಈ ಪೈಕಿ ಐತಿಹಾಸಿಕ ಪಟ್ಟಣವಾದ ಗದಗದ ಲಕ್ಕುಂಡಿಯು ಒಂದಾಗಿದೆ. ಅಹಿಂಸಾವಾದಿಯ ನೆಲೆಬೀಡು. ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿವೆ. ಜೊತೆಗೆ, ದೇವಾಲಯವೇ ಮರುಜೀವ ತಳೆದಂತಿದೆ. ರಾಜ್ಯವು ಪ್ರಸ್ತುತ ಪಡಿಸುತ್ತಿರುವ ಈ ಸ್ತಬ್ಧಚಿತ್ರವು ಇದೇ ಜನವರಿ 26 ರಂದು ಎಲ್ಲರ ಮನಸೂರೆಗೊಳ್ಳಲಿದೆ ಎನ್ನುವ ವಿಶ್ವಾಸ ಹೊಂದಿರುವುದಾಗಿ ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ 2025ರ ವಿಶೇಷ ಫೋಟೋಗಳು!

ದೆಹಲಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ‘ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 15 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಪ್ರದರ್ಶನದಲ್ಲಿ ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ಸಂಗತಿ ಎಂದು ಸಂತಸವನ್ನು ಹಂಚಿಕೊಂಡರು.

ಗಣರಾಜ್ಯೋತ್ಸವಕ್ಕೆ ಕಳಹಿಸಿದ್ದ 4 ಸ್ತಬ್ದಚಿತ್ರಗಳಲ್ಲಿ ಲಕ್ಕುಂಡಿ ಶಿಲ್ಪಕಲೆ ಆಯ್ಕೆ: 
1. ಲಕ್ಕುಂಡಿ : ಶಿಲ್ಪಕಲೆಯ ತೊಟ್ಟಿಲು (Lakkundi - The Cradle of Stone Craft) 
2. ಮೆಕ್ಕೆಕಟ್ಟು : ಮರಕೆತ್ತನೆಯ ದೈವ ನಿಧಿ (Mekkekattu – “Wood Carved Treasures of Divinity) 
3. ಕರ್ನಾಟಕದ ಸಮೃದ್ದಿಯ ಆಚರಣೆಗಳು (Rituals of Prosperity) ಮತ್ತು 
4. ಕರ್ನಾಟಕ ಒಂದು ರಾಜ್ಯ ಹಲವು ಜಗತ್ತು (Karnataka “One State. Many Worlds) ಎಂಬ ನಾಲ್ಕು ವಿಷಯಗಳನ್ನು ಆಯ್ಕೆ ಮಾಡಿಕಳುಹಿಸಿತ್ತು. ಮೊದಲ ಸಭೆಯಲ್ಲಿಯೇ ʼಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮ್ಮತದಿಂದ ಅಂತಿಮಗೊಳಿಸಿತ್ತು. ಈ ಬಾರಿಯ ಸ್ತಬ್ಧಚಿತ್ರದಲ್ಲಿ ಲಕ್ಕುಂಡಿಯ ದೇವಾಲಯಗಳು, ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತಿವೆ ಎಂದು ನಿಂಬಾಳ್ಕರ್‌  ತಿಳಿಸಿದರು.

ಇದನ್ನೂ ಓದಿ: ಗಣರಾಜ್ಯೋತ್ಸವಕ್ಕೆ ವಿದೇಶದ ಅತಿಥಿಗಳು: ಭಾರತದ ಫಾರಿನ್‌ ಪಾಲಿಸಿಗಳ ಬಗ್ಗೆ ತಿಳಿಯಿರಿ

ಸ್ತಬ್ಥಚಿತ್ರದಲ್ಲಿ ಏನಿರಲಿದೆ:
ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಕಲ್ಲಿನ ವಾಸ್ತುಶಿಲ್ಪಕ್ಕಾಗಿ 'ಶಿಲ್ಪಕಲೆಯ ತೊಟ್ಟಿಲು' ಎಂದು ಕರೆಯಲಾಗುತ್ತದೆ. ಸುಂದರ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, 10 ರಿಂದ 12 ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಹೀಗಾಗಿ, ಸ್ತಬ್ಧಚಿತ್ರದ ಮುಂಭಾಗವು ಬ್ರಹ್ಮ ಜಿನಾಲಯ ದೇವಸ್ಥಾನದ ಬ್ರಹ್ಮನ ಪ್ರತಿಮೆಯನ್ನು ಹೊಂದಿದೆ. ಇದು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಅದರ ನಂತರ ಬ್ರಹ್ಮ ಜಿನಾಲಯ ದೇವಸ್ಥಾನದ ತೆರೆದ ಕಂಬದ ಮಂಟಪವಿದೆ. ಸ್ತಬ್ಧಚಿತ್ರದ ಮುಖ್ಯ ವಿಭಾಗವು ಭವ್ಯವಾದ ಮತ್ತು ಅಲಂಕೃತವಾದ ಕಾಶಿ ವಿಶ್ವೇಶ್ವರ ದೇವಸ್ಥಾನ ಮತ್ತು ಶಿವನಿಗೆ ಸಮರ್ಪಿತವಾದ ನನ್ನೇಶ್ವರ ದೇವಸ್ಥಾನವನ್ನು ಪ್ರದರ್ಶಿಸುತ್ತದೆ.

Latest Videos
Follow Us:
Download App:
  • android
  • ios