ಶೀಘ್ರದಲ್ಲೇ ಮೊಬೈಲ್ ನಿಷೇಧ ವಿಚಾರ ಮಾಡುವ ವಿಚಾರವಾಗಿ ಪ್ರಸ್ತಾಪಿಸಲಾಗಿದೆ.
ನೂತನ ಸ್ಫೀಕರ್ ನಿರ್ಬಂಧ ವಿಚಾರವಾಗಿ ಕ್ರಮ ಕೈಗೊಳ್ಳುವ ಬಗ್ಗೆ ಮಾತನಾಡಿದ್ದಾರೆ.
ಸದನದಲ್ಲಿ ಮೊಬೈಲ್ ವೀಕ್ಷಣೆ ಬೆನ್ನಲ್ಲೇ ನಿಷೇಧ ಚರ್ಚೆ ಜೋರಾಗಿದೆ.
ಚಿಕ್ಕಮಗಳೂರು (ಜ.31): ವಿಧಾನಸಭೆ ಹಾಗೂ ವಿಧಾನ ಪರಿಷತ್ತು ಸಭಾಧ್ಯಕ್ಷರ ಜತೆ ಚರ್ಚಿಸಿ ಸದನಗಳಲ್ಲಿ ಮೊಬೈಲ್ ಬಳಕೆ ನಿರ್ಬಂಧಿಸುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ನೂತನ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.
ಇಲ್ಲಿ ಮಾತನಾಡಿದ ಅವರು, ಪ್ರಕಾಶ್ ಕೆ.ರಾಠೋಡ್ ಪರಿಷತ್‌ನಲ್ಲಿ ಮೊಬೈಲ್‌ನಲ್ಲಿ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸುತ್ತಿರುವುದು ಮಾಧ್ಯಮಗಳಲ್ಲಿ ಗಮನಿಸಿದ್ದೇವೆ. ಈ ಬಗ್ಗೆ ಎರಡೂ ಸದನದ ಸಭಾಪತಿಗಳ ಜೊತೆ ಚರ್ಚಿಸುತ್ತೇವೆ.
ಕೋವಿಡ್ ವರ್ಚುವಲ್ ಮೀಟಿಂಗ್‌ನಲ್ಲಿ ಕ್ಯಾಂಡಿ ಕ್ರಶ್ ಆಡಿದ ಜನಪ್ರತಿನಿಧಿ! ..
ಸದನ ನಡೆಯುವಾಗ ಮೊಬೈಲ್ ಬಳಸುವ ಅವಶ್ಯಕತೆ ಇರುವುದಿಲ್ಲ. ಅಷ್ಟಕ್ಕೂ ಸದನದೊಳಗೆ ಮೊಬೈಲ್ ಜಾಮರ್ ಅಳವಡಿಸಲಾಗಿರುತ್ತದೆ ಎಂದರು. ಸದನಕ್ಕೆ ಮೊಬೈಲ್ ಕೊಂಡೊಯ್ಯುವುದನ್ನು ನಿರ್ಬಂಧಿಸಲು ಅಡೆತಡೆ ಇಲ್ಲ. ಈ ಬಗ್ಗೆ ಸಭಾಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನಿಸುವ ಪ್ರಯತ್ನ ಮಾಡುತ್ತೇನೆ ಎಂದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 31, 2021, 8:30 AM IST