ಎಸ್ಕಾಂಗಳು ಮುಂದಿನ ಮೂರು ವರ್ಷಗಳಲ್ಲಿ ಪ್ರತಿ ಯುನಿಟ್‌ಗೆ 67ರಿಂದ 91 ಪೈಸೆ ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿವೆ. ಫೆಬ್ರವರಿ 17 ರಿಂದ 27 ರವರೆಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಸಭೆಗಳನ್ನು ಬೆಂಗಳೂರು, ಮಂಗಳೂರು, ಮೈಸೂರು, ಕಲಬುರಗಿ, ಹುಬ್ಬಳ್ಳಿ ಮತ್ತು ಹುಕ್ಕೇರಿಯಲ್ಲಿ ನಡೆಸಲಾಗುವುದು.

ಬೆಂಗಳೂರು (ಜ.7): ಮುಂದಿನ ಮೂರು ವರ್ಷಗಳ ಕಾಲ ಪ್ರತಿ ಯುನಿಟ್‌ ಗೆ 67 ಪೈಸೆಯಿಂದ 91 ಪೈಸೆವರೆಗೆ ದರ ಹೆಚ್ಚಳ ಮಾಡುವಂತೆ ವಿವಿಧ ಎಸ್ಕಾಂಗಳು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್ಸಿ) ಡಿಸೆಂಬರ್ ಮೊದಲ ವಾರದಲ್ಲಿ ಮನವಿ ಸಲ್ಲಿಸಿದ್ದು, 3 ವರ್ಷದ ಹೆಚ್ಚಳಕ್ಕೆ ಒಂದೇ ಬಾರಿ ಅನುಮತಿಗೆ ಕೋರಿದೆ. ಈ ಹಿನ್ನೆಲೆಯಲ್ಲಿ ಕೆಐಆರ್‌ಸಿಯು ಫೆ.17 ರಿಂದ 27ರವರೆಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಸಭೆಗಳನ್ನು ಹಮ್ಮಿಕೊಂಡಿದೆ.

ಶರಾವತಿ ಪಂಪ್ಡ್‌ ಸ್ಟೋರೇಜ್ ವಿದ್ಯುತ್ ಯೋಜನೆಗೆ ಅಸ್ತು

ಡಿಸೆಂಬ‌ರ್ ಮೊದಲ ವಾರದಲ್ಲಿ ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ್ದ ಬೆಸ್ಕಾಂ ಸಂಸ್ಥೆಯು ಮುಂದಿನ ಮೂರು ವರ್ಷಗಳ ಕಾಲ ಕ್ರಮವಾಗಿ ಪ್ರತಿ ಯುನಿಟ್‌ಗೆ 67 ಪೈಸೆ, 75 ಪೈಸೆ ಹಾಗೂ 91 ಪೈಸೆಯಂತೆ ದರ ಹೆಚ್ಚಳ ಮಾಡುವಂತೆ ಕೋರಿತ್ತು. 2025 ಏ.1 ರಿಂದ ಅನ್ವಯವಾಗುವಂತೆ ಪರಿಷ್ಕೃತರ ದರ ಪ್ರಕಟ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಕೆಇಆರ್ ಸಿಯು ಸಂಪ್ರದಾಯದಂತೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ.

ಏಪ್ರಿಲ್‌ ಅಂತ್ಯಕ್ಕೆ 3000 ಲೈನ್‌ಮೆನ್‌ ನೇಮಕ: ಸಚಿವ ಕೆ.ಜೆ ಜಾರ್ಜ್‌

ಸಭೆಗಳ ವೇಳಾಪಟ್ಟಿ: ಫೆ.17 ರಂದು ಬೆಳಗ್ಗೆ 10.30 ಗಂಟೆಗೆ ವಸಂತನಗರದ ಕೆಇಆರ್‌ಸಿ ಕಚೇರಿಯ ನ್ಯಾಯಾಂಗ ಸಭಾಂಗಣ, ಫೆ.18 ರಂದು ಬೆಳಗ್ಗೆ 11 ಗಂಟೆಗೆ ಮೆಸ್ಕಾಂಗೆ ಸಂಬಂಧಿಸಿ ದಕ್ಷಿಣ ಕನ್ನಡದ ಮೆಸ್ಕಾಂ ಕಾರ್ಪೊರೇಟ್ ಕಚೇರಿ, ಫೆ.19 ರಂದು ಬೆಳಗ್ಗೆ 11 ಗಂಟೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ ಸಂಬಂಧಿಸಿ ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣ, ಫೆ.24 ರಂದು ಬೆಳಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುಲ್ಬರ್ಗಾ ವಿದ್ಯುತ್ ಸರಬರಾಜು ನಿಗಮದ ಕುರಿತು, ಹುಬ್ಬಳ್ಳಿಯ ಹೆಸ್ಕಾಂ ಕಚೇರಿಯಲ್ಲಿ ಫೆ.24 ರಂದು ಬೆಳಗ್ಗೆ 11 ಗಂಟೆಗೆ ಹೆಸ್ಕಾಂ ಕುರಿತು, ಹುಕ್ಕೇರಿ ಗ್ರಾಮೀಣ ವಿದ್ಯುತ್ ಕೋ ಆಪರೇಟಿವ್ ಸೊಸೈಟಿಗೆ ಸಂಬಂಧಿಸಿ ಫೆ.27 ರಂದು ಮ. 3.30ಕ್ಕೆ ಹುಕ್ಕೇರಿಯ ಎಸ್ಕಾಂ ಕಚೇರಿಯಲ್ಲಿ ಅಭಿಪ್ರಾಯ ಸಂಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕದ ಪ್ರತಿ ತಾಲೂಕಿನಲ್ಲೂ ಸೋಲಾರ್ ಪಾರ್ಕ್: ಇಂಧನ ಸಚಿವ ಕೆ.ಜೆ.ಜಾರ್ಜ್

ಹಿರೇಬೆಣಕಲ್ ಬಳಿ ಅಣುಸ್ಥಾವರ: ಹತ್ತು ಹಳ್ಳಿಗಳ ಬಂಡಾಯ, ಯೋಜನೆ ನಿಲ್ಲದಿದ್ದರೆ ಉಗ್ರ ಹೋರಾಟ