Asianet Suvarna News Asianet Suvarna News

ಮಾಜಿ ಸಿಎಂ ಹೆಚ್‌. ಡಿ. ಕುಮಾರಸ್ವಾಮಿ ಕೊರೋನಾ!

ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೋನಾ| ಸಂಪರ್ಕದಲ್ಲಿದ್ದವರಿಗೆ ಕೊರೋನಾ ಟೆಸ್ಟ್‌ ಮಾಡಿಸುವಂತೆ ಮನವಿ ಮಾಡಿದ ಮಾಜಿ ಸಿಎಂಗೆ ಕೊರೋನಾ
 

Karnataka Former CM And JDS Leader HD Kumaraswamy Tested Positive For Coronavirus Pod
Author
Bangalore, First Published Apr 17, 2021, 11:21 AM IST

ಬೆಂಗಳೂರು(ಏ.17): ಸಿಎಂ ಬಿ. ಎಸ್‌. ಯಡಿಯೂರಪ್ಪಗೆ ಎರಡನೇ ಬಾರಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಇದರ ಬೆನ್ನ್ಲಲೇ ಮಾಜಿ ಸಿಎಂ, ಜೆಡಿಎಸ್‌ ನಾಯಕ ಎಚ್‌ಡಿಕೆಗೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

"

ಈ ಬಗ್ಗೆ ಟ್ವೀಟ್ ಮಾಡಿರುವ ಎಚ್. ಡಿ ಕುಮಾರಸ್ವಾಮಿ ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಅತ್ತ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಟ್ವೀಟ್ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. 

ಮಾಜಿ‌ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ....

Posted by Nikhil Gowda on Friday, 16 April 2021

ಎಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡಾ ಈ ಬಗ್ಗೆ ಪೋಸ್ಟ್‌ ಮಾಡಿದ್ದು, ಮಾಜಿ‌ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಮತ್ತು ದೇವರ ದಯೆಯಿಂದ ಆದಷ್ಟು ಬೇಗ ಗುಣಮುಖರಾಗಲಿದ್ದಾರೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಯಾವುದೇ ಆತಂಕ ಬೇಡ ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

"

ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಕೊರೋನಾ ಸೋಂಕು ತಗುಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದ‌ ಮೂಲಕ ಸ್ಪಷ್ಟನೆ ಕೊಟ್ಟಿದ್ದು,  ಹಾಗೊಂದು ಗಾಳಿ ಸುದ್ದಿ ಹರಡಿದ್ದು, ಸುಳ್ಳೆಂದು ಸ್ಪಷ್ಟನೆ ನೀಡಿದ್ದಾರೆ.

ನನಗೆ ಕೊರೋನಾ ಸೋಂಕು ತಗುಲಿದೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿ ಸತ್ಯಕ್ಕೆ ಸಂಪೂರ್ಣ ದೂರವಾಗಿದ್ದು, ನಾನು ಆರೋಗ್ಯದಿಂದ್ದೇನೆ. ಕೊರೋನಾ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುತ್ತಿದ್ದು, ನನಗೆ ಯಾವುದೇ ರೀತಿಯ ಸೋಂಕು ತಗುಲಿಲ್ಲ. ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುಳ್ಳು ಸುದ್ದಿಗೆ ಯಾರೂ ಕಿವಿಗೊಡಬಾರದು‌ ಎಂದು ವಿನಂತಿಸುತ್ತೇನೆ. ಹಾಗೆಯೇ, ರಾಜ್ಯದಲ್ಲಿ ಕೊರೋನಾ ಉಲ್ಬಣವಾಗಿದ್ದು ತಾವೆಲ್ಲರೂ ಜಾಗ್ರತೆ ವಹಿಸುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ನನಗೆ ಕೊರೋನಾ ಸೋಂಕು ತಗುಲಿದೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿ ಸತ್ಯಕ್ಕೆ ಸಂಪೂರ್ಣ...

Posted by DK Shivakumar on Saturday, April 17, 2021
Follow Us:
Download App:
  • android
  • ios