ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ  ಜಯನಗರ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು (ಫೆ.28): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ವಿಧಾನಸೌಧ ಅಧಿವೇಶನದ ಕಲಾಪದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಗಂಟಲು ನೋವು ಕಾಣಿಸಿಕೊಂಡಿದ್ದು, ನೇರವಾಗಿ ಅಲ್ಲಿಂದ ಜಯನಗರ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜ್ಯಸಭಾ ಚುನಾವಣೆ ಮುಕ್ತಾಯದ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದ್ದ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಗಂಟಲು ನೋವು ಕಾಣಿಸಿಕೊಂಡಿದೆ. ಅಂದರೆ, ಇದಕ್ಕೂ ಮುನ್ನ ಕಳೆದೊಂದು ವಾರದಿಂದ ಕುಮಾರಸ್ವಾಮಿ ಅವರು ಗಂಟಲು ಇನ್ಫೆಕ್ಷನ್‌ನಿಂದ ಬಳಲುತ್ತಿದ್ದರು. ಇನ್ನು ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವ್ನಲ್ಲಾ.. ಅವ್ನಲ್ಲಾ.. ಇಲ್ಲಿದ್ದಾನೆ ನೋಡಿ, ಪಾಕ್ ಪರ ಘೋಷಣೆ ಕೂಗಿದ ಆರೋಪಿ; ಬಿಜೆಪಿ ಆರೋಪ

ಇನ್ನು ಆಸ್ಪತ್ರೆಯಲ್ಲಿ ರೆಗ್ಯೂಲರ್ ಚೆಕಪ್ ಮಾಡಿಸಿಕೊಂಡ ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಲ್ಲಿ ಕೆಲಹೊತ್ತು ಎಲ್ಲ ತಪಾಸಣೆಗಳನ್ನು ಮಾಡಿಸಿಕೊಂಡು ಚಿಕಿತ್ಸೆ ಪಡೆದಿದ್ದಾರೆ. ನಂತರ ಮಧ್ಯಾಹ್ನ 3.30ರ ವೇಳೆಗೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೆಲವು ದಿನಗಳವರೆಗೆ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಇದರ ಹೊರತಾಗಿ ಆರೋಗ್ಯದಲ್ಲಿ ಯಾವುದೇ ಸಮಸ್ಯೆಗಳು ಕಾಣಿಸಿಕೊಂಡಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.

Scroll to load tweet…