Asianet Suvarna News Asianet Suvarna News

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್: ಡಿನೋಟಿಫಿಕೇಶನ್‌ ಪ್ರಕರಣ ರದ್ದು

ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿದ್ದ ಡಿನೋಟಿಫಿಕೇಷನ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

Karnataka former CM Yediyurappa denotification case was quashed by High court sat
Author
First Published Jun 7, 2023, 8:27 PM IST

ಬೆಂಗಳೂರು (ಜೂ.07): ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲಿದ್ದ ಡಿನೋಟಿಫಿಕೇಷನ್‌ ಪ್ರಕರಣವನ್ನು ಕರ್ನಾಟಕ ರಾಜ್ಯದ ಹೈಕೋರ್ಟ್‌ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ. 

ಯಡಿಯೂರಪ್ಪ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಕಳೆದ ಎಂಟು ವರ್ಷದ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿಯೇ ಡಿನೋಟಿಫಿಕೇಷನ್ ಹಗರಣ ಮಾಡಲಾಗಿದೆ ಎಂದು ಕಳೆದ 8 ವರ್ಷಗಳ ಹಿಂದೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಾಕಷ್ಟು ವಿಚಾರಣೆಗಳನ್ನು ಎದುರಿಸಿದ್ದರು. ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ದಾಖಲಿಸಿದ್ದ ದೂರು ದಾಖಲಿಸಿದ್ದರು.

ಕೆ.ಎಸ್. ಈಶ್ವರಪ್ಪಗೆ ಜೂನ್ 30 ನಿರ್ಣಯಕ ದಿನ: ಸಂತೋಷ್‌ ಆತ್ಮಹತ್ಯೆ ಬಿ ರಿಪೋರ್ಟ್‌ ರದ್ದಾಗುವ ಭೀತಿ

ಜಯಕುಮಾರ್ ಹಿರೇಮಠ್ ಅವರಿಂದ ದೂರು ದಾಖಲು:  ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದ ಜಯಕುಮಾರ್ ಹಿರೇಮಠ್ ಅವರು, ಬಿಎಸ್‌ ಯಡಿಯೂರಪ್ಪ ಅವರು ತಮ್ಮ ಮುಖ್ಯಮಂತ್ರಿಯ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಹಲಗೇವಡೇರಹಳ್ಳಿ ಮತ್ತು ಬಿಳೇಕಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಇನ್ನು ಅಕ್ರಮ ಡಿನೋಟಿಫಿಕೇಷನ್ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದರು. ಈ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಸಂಸ್ಥೆಯು 2015 ರಲ್ಲಿ ಯಡಿಯೂರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. 

ಪ್ರಕರಣ ರದ್ದತಿಗೆ ಹೈಕೋರ್ಟ್‌ಗೆ ಮೊರೆ: ಇನ್ನು ಲೋಕಾಯುಕ್ತದಲ್ಲಿ ದಾಖಲಾದ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈಗ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣ ಹೈಕೋರ್ಟ್ ನಲ್ಲಿ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ. ನ್ಯಾ. ನಾಗಪ್ರಸನ್ನ ಅವರಿದ್ದ ಪೀಠದಿಂದ ಆದೇಶ ಹೊರಡಿಸಲಾಗಿದೆ. ಇದರಿಂದಾಗಿ ಕಳೆದ 8 ವರ್ಷದ ಹಿಂದಿನ ಪ್ರಕರಣದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. 

ಕೆ.ಎಸ್. ಈಶ್ವರಪ್ಪಗೆ ಜೂನ್ 30 ನಿರ್ಣಯಕ ದಿನ: ಬೆಂಗಳೂರು (ಜೂ.06): ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮೇಲೆ ಗಂಭೀರ ಆರೋಪ ಕೇಳಿಬಂದಿತ್ತು. ಆದರೆ, ಪೊಲೀಸರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿದಿದಂತೆ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು. ಆದರೆ, ಈ ಬಿ ರಿಪೋರ್ಟ್‌ ಪ್ರಶ್ನಿಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದ ಅರ್ಜಿಯ ತೀರ್ಪು ಜೂ.30ರಂದು ಪ್ರಕಟ ಆಗಲಿದ್ದು, ಅಂದು ಈಶ್ವರಪ್ಪ ಅವರಿಗೆ ನಿರ್ಣಾಯಕ ದಿನವಾಗಲಿದೆ. 

ಸರ್ಕಾರಿ ವಕೀಲರ ನೇಮಕಾತಿ ಅಕ್ರಮವನ್ನು ಇಲಾಖಾ ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗ್ರಾಮೀಣ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವರಾಗಿದ್ದ ಕೆ.ಎಸ್‌. ಈಶ್ವರಪ್ಪ ಅವರ ಕಮೀಷನ್‌ ಕಿರುಕುಳದಿಂದಾಗಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆದರೆ, ಈ ಪ್ರಕರಣದ ಕುರಿತು ನ್ಯಾಯಾಲಯಕ್ಕೆ 'ಬಿ' ರಿಪೋರ್ಟ್ ಸಲ್ಲಿಕೆ ಮಾಡಲಾಗಿತ್ತು. ಆದರೆ, ಬಿ ರಿಪೋರ್ಟ್‌ ಸಲ್ಲಿಕೆ ಪ್ರಶ್ನಿಸಿ ದಾಖಲಿಸಿದ್ದ ಅರ್ಜಿ ಕುರಿತು ಮಂಗಳವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೂ.30ಕ್ಕೆ ತೀರ್ಪು ನೀಡುವುದನ್ನು ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಜೂ.30 ನಿರ್ಣಾಯಕ ದಿನವಾಗಿದೆ.

Follow Us:
Download App:
  • android
  • ios