ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಸರಕಾರ ಅಧಿಕೃತ ಆದೇಶ, ಮುಷ್ಕರ ವಾಪಸ್

ಏಳನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ(ಎನ್‌ಪಿಎಸ್‌) ರದ್ದು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯದ ಸರ್ಕಾರಿ ನೌಕರ ಬೇಡಿಕೆಗೆ  ಸರಕಾರ  ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಸರಕಾರ ಆದೇಶಿಸಿದೆ.

karnataka government agreed to 17 percent salary hike of employees gow

ಬೆಂಗಳೂರು (ಫೆ.1): ಏಳನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ(ಎನ್‌ಪಿಎಸ್‌) ರದ್ದು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಕೊನೆಗೂ ಈಡೇರಿದೆ. ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಸರಕಾರಿ ನೌಕರರಿಗೆ   ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳಕ್ಕೆ ಸರಕಾರದ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರ ಹಾಕಿದೆ. ಎಪ್ರಿಲ್ 1,  2023 ರಿಂದ ಈ ಆದೇಶ ಜಾರಿ ಆಗಲಿದೆ ಎಂದು ಸರಕಾರ ಘೋಷಿಸಿದೆ.  ಈ ಮೂಲಕ ಸರಕಾರಿ ನೌಕರರಿಗೆ ಬಂಪರ್ ಗಿಫ್ಟ್ ಸಿಕ್ಕಿದೆ.  ಈ ಮೂಲಕ ನೌಕರರ ಪ್ರತಿಭಟನೆ ಅಂತ್ಯವಾಗಲಿದೆ. ಸಿಎಂ ಸೂಚನೆ ಮೇರೆಗೆ ಈ ಅಧಿಕೃತ ಆದೇಶ ಹೊರ ಬಿದ್ದಿದೆ.

NPS ಬಗ್ಗೆ ಬೇರೆ ರಾಜ್ಯಗಳಲ್ಲಿ ಏನ್ ಆಗಿದೆ ಎಂದು ವರದಿ ತರೆಸಿಕೊಳ್ಳುತ್ತೇವೆ. ACS ನೇತೃತ್ವದಲ್ಲಿ ಸಮಿತಿ ಮಾಡಿ ಎರಡು ತಿಂಗಳಲ್ಲಿ ವರದಿ ತರೆಸಿಕೊಳ್ಳುತ್ತೇವೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಹೇಳಿರುವ ಬೊಮ್ಮಾಯಿ ಮುಷ್ಕರ ಕೈಬಿಡ್ತಾರೆ ಎಂಬ ವಿಶ್ಚಾಸ ಇದೆ ಎಂದಿದ್ದರು.

Govt employees indefinite strike: ಇಂದಿನಿಂದ ರಾಜ್ಯ ಸರ್ಕಾರಿ ನೌಕರರ ಅನಿರ್ದಿಷ್ಟಮುಷ್ಕರ

ಆದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾಡಿರುವ ಘೋಷಣೆಗೆ ಪ್ರತಿಕ್ರಿಯೆ ನೀಡಿರುವ ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಆದೇಶ ಪ್ರತಿ ಬಂದ ಬಳಿಕವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸರಕಾರದ ಭರವಸೆಯ ಮಾತಿಗೆ ನಾವು ಒಪ್ಪಿಗೆ ಸೂಚಿಸುವುದಿಲ್ಲ. ಕೇವಲ ಬಾಯಿ ಮಾತಿನ ಭರವಸೆ ನಮಗೆ ಬೇಡ. ಅಲ್ಲಿಯವರೆಗೆ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ. ಆರ್ಥಿಕ ಇಲಾಖೆ ಅಧಿಕಾರಿಗಳು ಸಭೆಗೆ ಕರೆದಿದ್ದು, ಸಭೆ ಬಳಿಕ ಮುಂದಿನ ನಿರ್ಧಾರದ ಬಗ್ಗೆ ತಿಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಸರಕಾರ ಈಗ ತನ್ನ ನೌಕರರ ಭೇಡಿಕೆಗೆ ಒಪ್ಪಿಗೆ ಸೂಚಿಸಿ ಅಧಿಕೃತ ಆದೇಶ ಹೊರಡಿಸಿದೆ. 7 ನೇ ವೇತನ ಆಯೋಗ ವರದಿ ಅನ್ವಯ ಮಾತುಕತೆ ನಡೆಸಿ ಈ ಆದೇಶ ಹೊರ ಬಿದ್ದಿದೆ. ಹೀಗಾಗಿ ಎಪ್ರಿಲ್ 1 , 2023 ರಿಂದ ಸರಕಾರಿ ನೌಕರರಿಗೆ ಈ ಆದೇಶ ಅನ್ವಯವಾಗಲಿದೆ.

Latest Videos
Follow Us:
Download App:
  • android
  • ios